BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

ಬ್ಯಾಡ್ಮಿಂಟನ್​ ಬೆಳ್ಳಿ ಸಾಧಕಿ ಲಕ್ಷ್ಯ ರಾಜೇಶ್​​ಗೆ ಸಿಎಂ ಅಭಿನಂದನೆ

Author Picture
Published On: November 27, 2025

—Advertisement—

Updated By: Priyalachhi

ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಇತ್ತೀಚೆಗೆ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟಕ್ಕೇರಿದ ಭಾರತ ತಂಡದ ಭಾಗವಾಗಿದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೀನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ಸ್​​ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಆಟಗಾರ್ತಿ ಲಕ್ಷ್ಯ ರಾಜೇಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಸನ್ಮಾನಿಸಿದರು.

ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರ ನೇತೃತ್ವದಲ್ಲಿ ಇಬ್ಬರೂ ಕ್ರೀಡಾಪಟುಗಳು ಇಂದು ಸಿಎಂರನ್ನು ಅವರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಅಭಿನಂದಿಸಿ, ಸನ್ಮಾನಿಸಿದ ಸಿದ್ದರಾಮಯ್ಯ, ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದರು.

ರಾಜ್ಯ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆಯೂ ಸಿಎಂ ಹಾರೈಸಿದರು. ಇಬ್ಬರೂ ವಿಜೇತಪಟುಗಳಿಗೆ ತಲಾ ಐದು ಲಕ್ಷ ರೂ.ಯ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರ ಬಿ.ಎನ್.ಸುಧಾಕರ್ ಉಪಸ್ಥಿತರಿದ್ದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp