Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗಬಹುದು
Latest News Politics

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗಬಹುದು

Sambrama Prabha NewsBy Sambrama Prabha NewsNovember 13, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ತುಮಕೂರು, ನವೆಂಬರ್ 13: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ, ಶಾಸಕ ಕೆಎನ್ ರಾಜಣ್ಣ (KN Rajanna), ತುಮಕೂರು ಜಿಲ್ಲೆಯ ರಾಜಕಾರಣ ಮತ್ತು ಕಾಂಗ್ರೆಸ್ (Congress) ಪಕ್ಷದ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. 2004ರಲ್ಲಿ ತಾವು ದೊಡ್ಡೇರಿ ಹೋಬಳಿಯಿಂದ ಶಾಸಕರಾಗಿದ್ದ ಸಂದರ್ಭವನ್ನು ನೆನಪಿಸಿಕೊಂಡ ರಾಜಣ್ಣ, ಆಗ ಕಾಂಗ್ರೆಸ್ ಪಕ್ಷದಲ್ಲಿ ಸರಿಯಾದ ಗೌರವ ಸಿಗದ ಕಾರಣ ಜನತಾದಳಕ್ಕೆ ಸೇರಿ ಸ್ಪರ್ಧಿಸಿದ್ದೆ. ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್​ವಾಶ್ ಆಗಿತ್ತು ಎಂದ ಅವರು, ಇದೇ ಪರಿಸ್ಥಿತಿ ಈಗ ಮತ್ತೆ ಬರುತ್ತದೆಯೋ ಏನೋ ಗೊತ್ತಿಲ್ಲ ಎಂದು ಅಭಿಪ್ರಾಯಪಟ್ಟರು.

ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದರಿಂದ ಹಿಂದೆ ಆದಂಥ ಪರಿಸ್ಥಿತಿ ಮತ್ತೆ ಬರುವುದಿಲ್ಲ. ಆದರೆ ಪರಿಸ್ಥಿತಿ ಏನಾಗುತ್ತದೆ ಎಂದು ಹೇಳಲಾಗದು ಎಂದು ನಗುತ್ತಾ ಹೇಳಿದರು. ಮುಂದುವರಿದು ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎಂದರು. ಮುಂದಿನ ತೀರ್ಮಾನಗಳನ್ನು ಜನರು ಮಾಡಬೇಕು, ತಾವು ಚುನಾವಣೆಗೆ ನಿಲ್ಲದಿರುವುದರಿಂದ ತಮಗೆ ಪ್ರಶ್ನೆ ಇಲ್ಲ ಎಂದರು.

ಕೆಎನ್ ರಾಜಣ್ಣ ಮಾತಿನ ವಿಡಿಯೋ

ಬಡವರ ಪರವಾಗಿ ಕೆಲಸ ಮಾಡುವ ಮಹತ್ವವನ್ನು ರಾಜಣ್ಣ ಒತ್ತಿ ಹೇಳಿದರು. ಜಾತಿ ರಹಿತವಾಗಿ, ಪಕ್ಷ ರಹಿತವಾಗಿ ಎಲ್ಲ ಬಡವರ ಪರ ಕೆಲಸ ಮಾಡಿದಾಗ ಅವರ ಆಶೀರ್ವಾದವೇ ದೇವರ ಆಶೀರ್ವಾದ ಮತ್ತು ಅವರ ಬೆಂಬಲವೇ ಆನೆ ಬಲ ಎಂದು ತಿಳಿಸಿದರು. ಜನರ ನಂಬಿಕೆ ಮತ್ತು ಆಶೀರ್ವಾದದಿಂದ ಮಾತ್ರ ರಾಜಕಾರಣದಲ್ಲಿ ಬೆಳೆಯಲು ಸಾಧ್ಯ ಎಂದು ಅವರು ಹೇಳಿದರು.

ನನಗೂ ಮಧುಗಿರಿ ತಾಲೂಕಿಗೂ ಏನು ಸಂಬಂಧ ಎಂದು ಕೆಲವೊಮ್ಮೆ ಅಚ್ಚರಿಯಾಗುತ್ತದೆ. ನಾನು ತುಮಕೂರು ನಗರ ಅಥವಾ ತುಮಕೂರು ಗ್ರಾಮಾಂತರದಲ್ಲಿ ಶಾಸಕನಾಗಬೇಕಿತ್ತು, ಏಕೆಂದರೆ ತುಮಕೂರು ತಮ್ಮ ಸ್ವಂತ ತಾಲೂಕು. ಆದರೆ, ಬೆಳ್ಳಾವಿ ಕ್ಷೇತ್ರದಿಂದ ಬಂದು 2004ರಲ್ಲಿ ದೊಡ್ಡೇರಿ ಹೋಬಳಿಗೆ ಬಂದೆ. 1998ರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದಾಗ ಮಧುಗಿರಿ ಮತ್ತು ಸುತ್ತಮುತ್ತಲಿನ ಪ್ರದೇಶದಿಂದ ಅತಿ ಹೆಚ್ಚು ಬಹುಮತ ಲಭಿಸಿತ್ತು ಎಂದು ರಾಜಣ್ಣ ನೆನಪಿಸಿಕೊಂಡರು. 1967 ರಿಂದ 1971ರವರೆಗೆ ಕಾಲೇಜು ವಿದ್ಯಾರ್ಥಿ ನಾಯಕರಾಗಿದ್ದ ತಮ್ಮ ರಾಜಕೀಯ ಹಿನ್ನೆಲೆಯನ್ನು ರಾಜಣ್ಣ ಈ ಸಂದರ್ಭದಲ್ಲಿ ಹಂಚಿಕೊಂಡರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Congress KN Rajanna
Add as Preferred on Google Follow on Google News
Share. WhatsApp Facebook Twitter Telegram
Previous Articleಕಬ್ಬು ಬೆಳೆಗಾರರ ಸಮಸ್ಯೆಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಸಿಎಂಗೆ ಜೋಶಿ ಬಹಿರಂಗ ಪತ್ರ
Next Article ಶುಕ್ರವಾರದ ರಾಶಿ ಭವಿಷ್ಯ, ಪಂಚಾಂಗ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.