• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ದ್ವಿಚಕ್ರ ವಾಹನಕ್ಕೆ ಆಂಬ್ಯುಲೆನ್ಸ್​ ಡಿಕ್ಕಿಯಾಗಿ ದಂಪತಿ ಸಾವು

Sambrama Prabha News by Sambrama Prabha News
November 2, 2025
in Home, Latest News
0
ದ್ವಿಚಕ್ರ ವಾಹನಕ್ಕೆ ಆಂಬ್ಯುಲೆನ್ಸ್​ ಡಿಕ್ಕಿಯಾಗಿ ದಂಪತಿ ಸಾವು

Updated By: Priyalachhi

ಬೆಂಗಳೂರು: ಆಂಬ್ಯುಲೆನ್ಸ್ ಅಪಘಾತದಿಂದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಶಾಂತಿನಗರದ ಕೆ. ಹೆಚ್. ರಸ್ತೆಯ ಸಂಗೀತಾ ಸಿಗ್ನಲ್ ಬಳಿ ಸಂಭವಿಸಿದೆ. ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ‌ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಸ್ಮಾಯಿಲ್ (40) ಹಾಗೂ ಸಮೀನ್ ಬಾನು (33) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಸೋಮೇಶ್ವರ ನಗರದ ನಿವಾಸಿಗಳಾಗಿದ್ದಾರೆ.

ರಿಚ್ಮಂಡ್ ರಸ್ತೆಯ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್ ಚಾಲಕ, ಊರ್ವಶಿ ಚಿತ್ರಮಂದಿರ ಕಡೆಯಿಂದ ವಿಲ್ಸನ್ ಗಾರ್ಡನ್ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪಘಾತವೆಸಗಿದ್ದಾನೆ. ಅಲ್ಲದೆ ಆಂಬ್ಯುಲೆನ್ಸ್ ಕೆಳಗೆ ಸಿಲುಕಿದ್ದ ದ್ವಿಚಕ್ರ ವಾಹನವನ್ನು 20- 30 ಮೀಟರ್ ಎಳೆದುಕೊಂಡು ಚಲಾಯಿಸಿದ್ದಾನೆ. ಬಳಿಕ ಟ್ರಾಫಿಕ್ ಪೊಲೀಸ್ ಚೌಕಿಗೆ ಗುದ್ದಿ ಆಂಬ್ಯುಲೆನ್ಸ್ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಸ್ಥಳೀಯರು ಬಂದು ಆಂಬ್ಯುಲೆನ್ಸ್ ಪಲ್ಟಿ ಮಾಡಿ ಪರಿಶೀಲಿಸಿದಾಗ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಆಂಬ್ಯುಲೆನ್ಸ್​ ಅಡಿ ಸಾವನ್ನಪ್ಪಿರುವುದು ಪತ್ತೆಯಾಗಿದೆ.

ಟ್ರಾಫಿಕ್ ಪೊಲೀಸ್​ ಚೌಕಿಗೆ ಗುದ್ದುವ ಮುನ್ನ ಆಂಬ್ಯುಲೆನ್ಸ್​ ಇನ್ನೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಅದರಲ್ಲಿದ್ದ ಸವಾರರಾದ ರಿಯಾನ್​ ಹಾಗೂ ಸಿದ್ದಿಕ್​ ಗಾಯಗೊಂಡಿದ್ದಾರೆ.

ಆಂಬ್ಯುಲೆನ್ಸ್​ ಚಾಲಕ ವಶಕ್ಕೆ: ವಿಲ್ಸನ್​ ಗಾರ್ಡನ್​ ಸಂಚಾರ​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ಆಂಬ್ಯುಲೆನ್ಸ್​ ಚಾಲಕ ಅಶೋಕ್​ ಎಂಬುವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತ್ಯೇಕ ಪ್ರಕರಣ – ಯುವತಿ ಅನುಮಾನಾಸ್ಪದ ಸಾವು: ಅನುಮಾನಾಸ್ಪದವಾಗಿ ಯುವತಿಯ ಶವ ಪತ್ತೆಯಾಗಿರುವ ಘಟನೆ ಸುಬ್ರಹ್ಮಣ್ಯ ನಗರ ವ್ಯಾಪ್ತಿಯ ಮಿಲ್ಕ್ ಕಾಲೊನಿಯಲ್ಲಿ ವರದಿಯಾಗಿದೆ. ದಾವಣಗೆರೆ ಮೂಲದ ಸುಪ್ರಿಯಾ (25) ಎಂಬ ಯುವತಿಯ ಮೃತದೇಹ ಶನಿವಾರ ರಾತ್ರಿ ಆಕೆಯದ್ದೇ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆಯಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಎಂಬಿಎ ವ್ಯಾಸಂಗ ಮಾಡಿದ್ದ ಸುಪ್ರಿಯಾ, ಎರಡು ವರ್ಷದಿಂದ ಮಿಲ್ಕ್ ಕಾಲೊನಿಯ ಮನೆಯೊಂದರ ಮೂರನೇ ಮಹಡಿಯಲ್ಲಿದ್ದ ರೂಮ್‌ನಲ್ಲಿ ವಾಸವಿದ್ದಳು. ಬೈಕ್ ರೈಡಿಂಗ್ ತರಬೇತಿ ಪಡೆಯುತ್ತಿದ್ದ, ಸುಪ್ರಿಯಾಳ ರೂಮ್ ಎರಡು ದಿನಗಳಿಂದ ಲಾಕ್ ಆಗಿತ್ತು. ಅನುಮಾನಗೊಂಡ ಮನೆ ಮಾಲೀಕ ಬಾಗಿಲು ತೆರೆದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡು ತುಂಡಾಗಿ ಬಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸುಬ್ರಮಣ್ಯ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.

Tags: ಬೆಂಗಳೂರು
Previous Post

ನಾಲೆಯಲ್ಲಿ ಮುಳುಗಿದ ನಾಲ್ವರು ಮಕ್ಕಳು; ಇಬ್ಬರ ಸಾವು- ಮತ್ತಿಬ್ಬರು ನಾಪತ್ತೆ

Next Post

ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ

Next Post
ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ

ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.