BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

, ,

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ‘ದೆಹಲಿಗೆ’ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್

Author Picture
Published On: November 5, 2025

—Advertisement—

Updated By: Priyalachhi

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಕುರಿತು ಜೋರಾಗಿ ಚರ್ಚೆ ನಡೆಯುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಗೆ ಆಗಮಿಸಿದ್ದು, ರಾಜ್ಯದ ಜಲವಿವಾದಗಳ ಕುರಿತು ವಕೀಲರೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನನ್ನ ತಾಂತ್ರಿಕ ಸಲಹೆಗಾರರಾದ ಜೈಪ್ರಕಾಶ್ ಜೊತೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಯಾವುದೇ ಯೋಜನೆ ಇಲ್ಲ. ಏಕೆಂದರೆ ಅವರೆಲ್ಲರೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳ ನಡುವೆ ಪಕ್ಷದ ವರಿಷ್ಠರನ್ನು ಭೇಟಿಯಾಗಲು ಶಿವಕುಮಾರ್ ದೆಹಲಿಗೆ ಬಂದಿದ್ದಾರೆ ಎಂಬ ಊಹಾಪೋಹವಿತ್ತು.

“ಅಂತರ್ ರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚಿಸಲು, ವಕೀಲರನ್ನು ಭೇಟಿ ಮಾಡಲು ಬಂದಿದ್ದೇನೆ. ಮೇಕೆದಾಟು ಮತ್ತು ಕೃಷ್ಣಾ ಜಲ ವಿವಾದ ವಿಷಯಗಳ ಕುರಿತು ನಾನು ಅವರೊಂದಿಗೆ ಸಭೆ ನಡೆಸಿದ್ದು, ಕೆಲವು ಸಲಹೆಗಳನ್ನು ನೀಡಿದ್ದೇನೆ. ನಮ್ಮ ಲೋಕಸಭಾ ಸದಸ್ಯರು ಬಹುತೇಕ ಬಿಜೆಪಿ ನಾಯಕರು ಬಾಕಿ ಇರುವ ನೀರಾವರಿ ವಿವಾದಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಬೇಕು. ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಹೇಳಿದರು.

ಮೇಕೆದಾಟು ಯೋಜನೆ ಸಂಬಂಧ ವಿನಾ ಕಾರಣ ಸಮಯಾವಕಾಶದ ನೆಪದಲ್ಲಿ ವಿಚಾರಣೆ ಮುಂದೂಡಿಕೊಂಡೇ ಹೋಗಲಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದೇನೆ. ನ್ಯಾಯಾಲಯದಲ್ಲಿ ವಿಶೇಷ ಪೀಠ ರಚನೆಗೆ ಮುಂದಾಗಿದ್ದು, ಈಗ ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ಕರ್ನಾಟಕ ಹಾಲು ಒಕ್ಕೂಟ (KMF)ತುಪ್ಪದ ಬೆಲೆ ಏರಿಕೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ರೈತರ ಅನುಕೂಲಕ್ಕಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಂತಿಮವಾಗಿ ರೈತರು ಇದರ ಲಾಭ ಪಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp