Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ದೆಹಲಿ ಕಾರು ಸ್ಫೋಟ: ಆಘಾತ ವ್ಯಕ್ತಪಡಿಸಿದ ಸೆಲೆಬ್ರಿಟಿಗಳು
Home Latest News Nation News

ದೆಹಲಿ ಕಾರು ಸ್ಫೋಟ: ಆಘಾತ ವ್ಯಕ್ತಪಡಿಸಿದ ಸೆಲೆಬ್ರಿಟಿಗಳು

Sambrama Prabha NewsBy Sambrama Prabha NewsNovember 11, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಬಗ್ಗೆ ದೆಹಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಈಗಾಗಲೇ ಕಾರಿನ ಮಾಲೀಕನನ್ನು ಬಂಧಿಸಿದ್ದಾರೆ. ಭಾರತೀಯ ಚಿತ್ರರಂಗದ ಹೆಸರಾಂತರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಸಂದೇಶಗಳು ದೇಶಾದ್ಯಂತ ಅನೇಕರು ಅನುಭವಿಸಿದ ಆಘಾತ ಮತ್ತು ದುಃಖವನ್ನು ಪ್ರತಿಬಿಂಬಿಸುತ್ತದೆ.

ಸೋನು ಸೂದ್​: ನಟ ಮತ್ತು ಸಮಾಜ ಸೇವಕ ಸೋನು ಸೂದ್​ ಎಕ್ಸ್​ ಪೋಸ್ಟ್​ ಶೇರ್ ಮಾಡಿದ್ದು, “ದೆಹಲಿಯ ಕೆಂಪು ಕೋಟೆ ಬಳಿ ನಡೆದ ದುರಂತ ಸ್ಫೋಟಕ್ಕೆ ಸಿಲುಕಿದ ಪ್ರತಿಯೊಬ್ಬರಿಗೂ ನನ್ನ ಹೃದಯ ಮಿಡಿಯುತ್ತಿದೆ. ಸಂತ್ರಸ್ತರನ್ನು ಬೆಂಬಲಿಸೋಣ, ಪರಸ್ಪರ ನೋಡಿಕೊಳ್ಳೋಣ ಮತ್ತು ಶಾಂತಿಗೆ ಬದ್ಧರಾಗೋಣ” ಎಂದು ತಿಳಿಸಿದ್ದಾರೆ.

ವಿಜಯ್: ಜನಪ್ರಿಯ ತಮಿಳು ನಟ, ರಾಜಕಾರಣಿ ದಳಪತಿ ವಿಜಯ್ ತಮ್ಮ ಅಧಿಕೃತ ಸೋಷಿಯಲ್​ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ್ದು, “ದೆಹಲಿಯ ಕೆಂಪು ಕೋಟೆ ಮೆಟ್ರೋ ಬಳಿ ಸಂಭವಿಸಿದ ಕಾರು ಸ್ಫೋಟದ ಸುದ್ದಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದ್ದು, ಘಟನೆ ಅಮೂಲ್ಯ ಜೀವಗಳನ್ನು ಬಲಿ ತೆಗೆದುಕೊಂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

ಅಲ್ಲು ಅರ್ಜುನ್​: ”ದೆಹಲಿಯ ಕೆಂಪು ಕೋಟೆ ಬಳಿ ನಡೆದ ದುರಂತ ಘಟನೆಯಿಂದ ತೀವ್ರ ದುಃಖವಾಗಿದೆ. ಸಂತ್ರಸ್ತರು ಮತ್ತು ಅವರ ಕುಟುಂಬಕ್ಕೆ ನನ್ನ ಪ್ರಾರ್ಥನೆಗಳು, ಮತ್ತೊಮ್ಮೆ ಶಾಂತಿ ನೆಲೆಸಲಿ ಎಂದು ನಾನು ಬಯಸುತ್ತೇನೆ” ಎಂದು ಖ್ಯಾತ ನಟ ಅಲ್ಲು ಅರ್ಜುನ್​​ ಬರೆದುಕೊಂಡಿದ್ದಾರೆ.

ರವೀನಾ ಟಂಡನ್: ಎಕ್ಸ್‌ ಪೋಸ್ಟ್ ಶೇರ್ ಮಾಡಿದ ಬಾಲಿವುಡ್​ ನಟಿ ರವೀನಾ ಟಂಡನ್​, ಘಟನೆಯನ್ನು “ಭಯಾನಕ ಸುದ್ದಿ” ಎಂದು ಕರೆದರು. ಜೊತೆಗೆ, “ದೆಹಲಿ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು. ಭಯಾನಕ ಸುದ್ದಿ” ಎಂದು ಬರೆದುಕೊಂಡಿದ್ದಾರೆ.

ಸಿದ್ಧಾರ್ಥ್ ಮಲ್ಹೋತ್ರಾ: ಬಾಲಿವುಡ್​ ನಟ ಸಿದ್ದಾರ್ಥ್ ಮಲ್ಹೋತ್ರಾ ಇನ್‌ಸ್ಟಾಗ್ರಾಮ್ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ತಮ್ಮ ಬೆಂಬಲ ಸೂಚಿಸಿದರು. ಈ ಅವ್ಯವಸ್ಥೆಯ ಸಮಯದಲ್ಲಿ ಜನರು ಒಟ್ಟಾಗಿ ಸೇರಬೇಕೆಂದು ಒಗ್ಗಟ್ಟಿಗೆ ಕರೆ ನೀಡಿದರು.

ವಿಶಾಲ್: ನಟ ಮತ್ತು ನಿರ್ಮಾಪಕ ವಿಶಾಲ್ ಈ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಯನ್ನು “ಅನಾಗರಿಕ ಮತ್ತು ಅಮಾನವೀಯ” ಎಂದು ಕರೆದಿದ್ದಾರೆ. “ದೆಹಲಿಯ ಕೆಂಪು ಕೋಟೆ ಬಳಿ ನಡೆದ ದುರಂತ ಸ್ಫೋಟದ ಸುದ್ದಿ ಕೇಳಿ ದುಃಖವಾಯಿತು. ಹಲವು ಜೀವಗಳು ಬಲಿಯಾಗಿವೆ, ಹಲವರು ಗಾಯಗೊಂಡಿದ್ದಾರೆ. ಭಯೋತ್ಪಾದನೆಯ ಬರ್ಬರ ಕೃತ್ಯದಿಂದ ಮತ್ತೆ ಹಲವು ಅಮಾಯಕ ಜೀವಗಳು ಬಲಿಯಾಗಿರುವುದನ್ನು ನೋಡುವುದು ಬೇಸರದ ಸಂಗತಿ. ಈ ದುಷ್ಕೃತ್ಯದ ಹಿಂದಿರುವವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲಿ” ಎಂದು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಆಘಾತ ವ್ಯಕ್ತಪಡಿಸಿದ ಸೆಲೆಬ್ರಿಟಿಗಳು ದೆಹಲಿ ಕಾರು ಸ್ಫೋಟ
Add as Preferred on Google Follow on Google News
Share. WhatsApp Facebook Twitter Telegram
Previous Articleಕೆಇಎ ನೇಮಕಾತಿ: ಕೆಎಸ್​ಎಸ್​ಐಡಿಸಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ನ.14 ಕಡೇಯ ದಿನಾಂಕ
Next Article ಯುವಕನ ಲಾಡ್ಜ್​ಗೆ ಕರೆದೊಯ್ದು 58 ಗ್ರಾಂ ಚಿನ್ನಾಭರಣ ದೋಚಿದ ಯುವತಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.