BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ನೈಜ ಘಟನೆಯನ್ನಾಧರಿಸಿದ ‘ಕ್ರಿಮಿನಲ್’ ಸಿನಿಮಾಗಾಗಿ ಒಂದಾದ ಭರ್ಜರಿ ಜೋಡಿ ಧ್ರುವ ಸರ್ಜಾ, ರಚಿತಾ ರಾಮ್​

Author Picture
Published On: November 19, 2025

—Advertisement—

Updated By: Priyalachhi

ಸ್ಯಾಂಡಲ್​ವುಡ್​ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಖ್ಯಭೂಮಿಕೆಯ ಬಹುನಿರೀಕ್ಷಿತ ‘ಕೆ.ಡಿ’ ಸಿನಿಮಾ ಮುಂದಿನ ವರ್ಷ ಚಿತ್ರಮಂದಿರ ಪ್ರವೇಶಿಸಲಿದೆ. ಈ ಮಧ್ಯೆ ನಟನ ಹೊಸ ಸಿನಿಮಾ ಇತ್ತೀಚೆಗೆ ಅದ್ಧೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ಬಸವನಗುಡಿಯ ಅನ್ನಪೂರ್ಣ ನವ ಮಂತ್ರಾಲಯ ಮಂದಿರದಲ್ಲಿ ‘ಕ್ರಿಮಿನಲ್’ ಶೀರ್ಷಿಕೆಯ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು.

‘ಕ್ರಿಮಿನಲ್’, ಧ್ರುವ ಅವರ 7ನೇ ಚಿತ್ರವಾಗಿದ್ದು, ನಾಯಕಿಯಾಗಿ ಡಿಂಪಲ್ ಕ್ವೀನ್​​​ ರಚಿತಾ ರಾಮ್ ಸಾಥ್ ಕೊಡುತ್ತಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆಯನ್ನಾಧರಿಸಿದೆ.

ಸಿನಿಮಾ ಮುಹೂರ್ತದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿರ್ದೇಶಕ ರಾಜ್ ಗುರು, ”ಕಥೆ ಕೇಳಿ ಧ್ರುವ ಸರ್ಜಾ ಓಕೆ ಮಾಡಿದ್ರು. ಬಳಿಕ ಸೆಲ್ಫಿ ತೆಗೆದುಕೊಂಡೆ. ಸೆಲ್ಫಿ ನೋಡಿ ಖುಷಿ ಜೊತೆಗೆ ಭಯ ಶುರುವಾಯ್ತು. ಇದು ಜವಾಬ್ದಾರಿ ಎಂಬ ಭಯ. ಉತ್ತರ ಕರ್ನಾಟಕದ ಬಗ್ಗೆ ಸಿನಿಮಾ ಮಾಡುತ್ತಿದ್ದೇವೆ. ದೊಡ್ಡ ಪ್ರೊಡಕ್ಷನ್ ಕಂಪನಿ ನನಗೆ ಅವಕಾಶ ಕೊಟ್ಟಿದೆ. ಇದು ನನ್ನ 2ನೇ ಸಿನಿಮಾ.‌ ಈ ಚಿತ್ರಕ್ಕೆ ನಿಮ್ಮ ಸಪೋರ್ಟ್ ಇರಲಿ” ಎಂದು ಮನವಿ ಮಾಡಿದರು.

Dhruva Sarja, Rachita Ram

ನಟಿ ರಚಿತಾ ರಾಮ್ ಮಾತನಾಡಿ, ”8 ವರ್ಷಗಳ ನಂತರ ನನ್ನ ಒಳ್ಳೆ ಸ್ನೇಹಿತ ಧ್ರುವ ಸರ್ಜಾ ಅವರ ಜೊತೆ ಸಿನಿಮಾ ಮಾಡುತ್ತಿರುವುದು ಖುಷಿ ಕೊಟ್ಟಿದೆ. ಭರ್ಜರಿ ಸಿನಿಮಾ‌ದ ಮುಹೂರ್ತವೂ ಇಲ್ಲೇ ಆಗಿತ್ತು. ಕ್ರಿಮಿನಲ್ ಚಿತ್ರದ ಮುಹೂರ್ತ ಸಮಾರಂಭವೂ ಇಲ್ಲೇ ಆಗಿದೆ. ಹೊಸ ತಂಡದ ಜೊತೆ ಕೆಲಸ‌ ಮಾಡುತ್ತಿರುವ ಖುಷಿ ಇದೆ. ಮೊದಲು ನನಗೆ ಧ್ರುವ ಕರೆ ಮಾಡಿದ್ರು. ಕಥೆ, ಪ್ರೊಡಕ್ಷನ್ ಹೌಸ್ ಯಾವುದರ ಬಗ್ಗೆಯೂ ಏನೂ ಕೇಳಲಿಲ್ಲ. ಓಕೆ ಮಾಡ್ತೀನಿ‌ ಎಂದೆ. ಆಮೇಲೆ ನಿರ್ದೇಶಕರು ಮನೆಗೆ ಬಂದು ಕಥೆ ಹೇಳಿದರು. ತುಂಬಾ ಎಕ್ಸ್​​ಪರಿಮೆಂಟಲ್​​ ರೋಲ್ ಅನ್ನು ಧ್ರುವ ನಿರ್ವಹಿಸುತ್ತಿದ್ದಾರೆ. ಇದು ಅವರ ಏಳನೇ ಸಿನಿಮಾ. ಅವರ ಸಿನಿಕೆರಿಯರ್​ನ ಬೆಸ್ಟ್ ಚಿತ್ರವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp