BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಗದ್ದುಗೆ ಗುದ್ದಾಟ: ನಾಳೆ ದೆಹಲಿಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ

Author Picture
Published On: November 28, 2025

—Advertisement—

Updated By: Priyalachhi

ಬೆಂಗಳೂರು: ಅಧಿಕಾರ ಹಸ್ತಾಂತರ ವಿಚಾರವಾಗಿ ರಾಜ್ಯದಲ್ಲಿ ಮುಸುಕಿನ ಗುದ್ದಾಟ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ”ಮಾತಿನ ಶಕ್ತಿ ಹಾಗೂ ನಂಬಿಕೆ” ಹೆಸರಿನಲ್ಲಿ ರಾಜಕೀಯ ನಾಯಕರು ಭಿನ್ನ ಹೇಳಿಕೆ ನೀಡುತ್ತಿದ್ದಾರೆ.

ಪ್ರಮುಖವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪವರ್ ಶೇರಿಂಗ್ ವಿಚಾರಕ್ಕೆ ಇವರಿಬ್ಬರ ಸೂಚ್ಯ ಹೇಳಿಕೆಗಳು ತೆರೆಮೆರೆ ಕದನಕ್ಕೆ ಇನ್ನಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಈಗಾಗಲೇ ಒಕ್ಕಲಿಗ ಸಂಘ ಹಾಗೂ ಈ ಸಮುದಾಯದ ಸ್ವಾಮೀಜಿಗಳಾದ ನಿರ್ಮಲಾನಂದನಾಥ ಸ್ವಾಮಿ ಹಾಗೂ ನಂಜಾವಧೂತ ಸ್ವಾಮಿಗಳು ಡಿ.ಕೆ.ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಬೇಕೆಂದು ಅಭಿಮತ ವ್ಯಕ್ತಪಡಿಸಿದ್ಧಾರೆ. ಅಲ್ಲದೆ, ಕೆಲ ಸಚಿವರು ಹಾಗೂ ಶಾಸಕರ ದೆಹಲಿ ಪರೇಡ್ ಮಾಡಿದ್ದಾರೆ.

ಇದಕ್ಕೆ ಪ್ರತಿರೋಧವೆಂಬಂತೆ ಸಿದ್ದರಾಮಯ್ಯ ಬಣದ ಸಚಿವ-ಶಾಸಕರು ಸಹ ಐದು ವರ್ಷ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿರಬೇಕೆಂದು ಸಚಿವರಾದ ಸಂತೋಷ್ ಲಾಡ್, ಜಮೀರ್ ಅಹ್ಮದ್​, ಹೆಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಇನ್ನಿತರ ಸಚಿವರು ಹಾಗೂ ಶಾಸಕರು ಒಲವು ವ್ಯಕ್ತಪಡಿಸಿದ್ದಾರೆ. ರಾಜ್ಯ ಕುರುಬ ಸಮುದಾಯವು ಸಿದ್ದರಾಮಯ್ಯ ಅವರನ್ನ ಬೆಂಬಲಿಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಒತ್ತಡ ತಂತ್ರ ಅನುಸರಿಸಲು ಸಿದ್ದತೆ ನಡೆಸಿದೆ.

ಅಧಿಕಾರ ಹಸ್ತಾಂತರ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆ ರಾಜ್ಯದಲ್ಲಿ ಬ್ರೇಕ್ ಫಾಸ್ಟ್ / ಡಿನ್ನರ್ ಪಾಲಿಟಿಕ್ಸ್ ಜೋರಾಗಿದೆ. ಇದಕ್ಕೆ ಪೂರಕವೆಂಬಂತೆ ಆಹಾರ ಸಚಿವ ಮುನಿಯಪ್ಪ ಅವರ ಮನೆಯಲ್ಲಿ ಇಂದು ತಿಂಡಿ ನೆಪದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ವೆಂಕಟರಮಣಯ್ಯ ಸೇರಿದಂತೆ ಹಲವರು ಸಭೆ ಸೇರಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp