Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
Exclusive Latest News

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

Sub EditorBy Sub EditorJune 3, 2026No Comments2 Mins Read
Share WhatsApp Facebook Twitter Telegram
free-bus-pass-students-karnataka
Share
WhatsApp Facebook Twitter Telegram

ಬೆಂಗಳೂರು (ಸಂಭ್ರಮಪ್ರಭಾ ಡೆಸ್ಕ್): ರಾಜ್ಯದ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿ ಯುವಜನತೆಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಪೂರ್ಣ ‘ಉಚಿತ ಬಸ್ ಪಾಸ್’ ನೀಡುವ ಐತಿಹಾಸಿಕ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ.

ಎಲ್ಲಾ ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್ ಈ ಹಿಂದೆ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣ ಕಲ್ಪಿಸಲಾಗಿತ್ತು, ನಮಗೇನು ಸೌಲಭ್ಯವಿದೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಶಾಲಾ ಹಂತದಿಂದ ಹಿಡಿದು ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ (ಪಿಜಿ) ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ತೀರ್ಮಾನಿಸಿದೆ.

“ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಇದೇ ಮೊದಲ ಬಾರಿಗೆ ಇಂಥದ್ದೊಂದು ದೊಡ್ಡ ತೀರ್ಮಾನ ಕೈಗೊಂಡಿದೆ. ಈ ಪಾಸ್‌ಗಾಗಿ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯುವುದಿಲ್ಲ. ಸಾರಿಗೆ ಇಲಾಖೆ ಜೊತೆ ಚರ್ಚಿಸಿ ಶೀಘ್ರದಲ್ಲೇ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಜೊತೆಗೆ ಈ ಯೋಜನೆಗೆ ಹೊಸ ಹೆಸರೊಂದನ್ನು ನೀಡಿ ಶೀಘ್ರದಲ್ಲೇ ಚಾಲನೆ ನೀಡಲಾಗುವುದು” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ಯಾಲೆಂಡರ್ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೂ ಸರ್ಕಾರ ಭರವಸೆ ಮೂಡಿಸಿದೆ. ಈಗಾಗಲೇ ಘೋಷಿಸಿರುವ 56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಇದ್ದ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿವೆ. ಮುಂದಿನ ಸಚಿವ ಸಂಪುಟ ಸಭೆಯ ವೇಳೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಯಾವ ಇಲಾಖೆಯಲ್ಲಿ ಯಾವಾಗ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಹಾಗೂ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಸಂಪೂರ್ಣ ‘ಕ್ಯಾಲೆಂಡರ್’ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಸಿಂಹಪಾಲು: ‘ಖಾಸಗಿ ಉದ್ಯೋಗ ವಿನಿಮಯ ಕೇಂದ್ರ’ ಸ್ಥಾಪನೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ಅಪಾರ ಮಾನವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನ್‌ಲೈನ್ ಮೂಲಕ ‘ಖಾಸಗಿ ಉದ್ಯೋಗ ವಿನಿಮಯ ಕೇಂದ್ರ’ (Private Employment Exchange) ಸ್ಥಾಪಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಐಟಿ-ಬಿಟಿ, ಆಸ್ಪತ್ರೆ, ಹೋಟೆಲ್ ಹಾಗೂ ಮಾಧ್ಯಮ ಸೇರಿದಂತೆ ಯಾವುದೇ ಖಾಸಗಿ ಸಂಸ್ಥೆಗಳು ತಮಗೆ ಎಷ್ಟು ಉದ್ಯೋಗಿಗಳು ಬೇಕು ಹಾಗೂ ಎಂತಹ ಕೌಶಲ್ಯವಿರುವವರು ಬೇಕು ಎಂಬುದನ್ನು ಈ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದು. ಕಂಪನಿಗಳ ಬೇಡಿಕೆಗೆ ತಕ್ಕಂತೆ ಸರ್ಕಾರವೇ ಯುವಕರಿಗೆ ಉಚಿತವಾಗಿ ತರಬೇತಿ ನೀಡಿ, ಉದ್ಯೋಗಕ್ಕೆ ಒದಗಿಸುವ ಕೆಲಸ ಮಾಡಲಿದೆ.

“ಖಾಸಗಿ ವಲಯದ ಈ ನೇಮಕಾತಿಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ (ಮೆಜಾರಿಟಿ) ಸಿಗಲೇಬೇಕು ಎನ್ನುವುದು ಸರ್ಕಾರದ ಸ್ಪಷ್ಟ ನಿಲುವು. ಆದರೆ, ಏಕಾಏಕಿ ನಿಯಮ ಹೇರಿ ಉದ್ಯಮಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ, ಎಫ್‌ಕೆಸಿಸಿಐ (FKCCI) ಸೇರಿದಂತೆ ವಿವಿಧ ಉದ್ಯಮಗಳ, ಮೆಡಿಕಲ್, ಕಾಲೇಜುಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಮೀಸಲಾತಿಯ ಶೇಕಡಾವಾರು ಪ್ರಮಾಣವನ್ನು ಅಂತಿಮಗೊಳಿಸಲಾಗುವುದು. ಈ ಸಂಪೂರ್ಣ ಪ್ರಕ್ರಿಯೆಯ ರೂಪುರೇಷೆ ಸಿದ್ಧಪಡಿಸಲು ಮೂವರು ಸಚಿವರನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಯಾವುದೇ ಪ್ರಭಾವಗಳಿಲ್ಲದೆ ಆನ್‌ಲೈನ್ ಮೂಲಕ ಪಾರದರ್ಶಕವಾಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಈ ಹೊಸ ಹೆಜ್ಜೆ ರಾಜ್ಯದ ಯುವಜನತೆಯಲ್ಲಿ ಹೊಸ ನಿರೀಕ್ಷೆ ಹುಟ್ಟುಹಾಕಿದೆ.
ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
56000 Govt Jobs BMTC DK Shivakumar Education News Kannada Free Bus Pass Karnataka Government Karnataka News KSRTC Student Bus Pass ಉಚಿತ ಬಸ್ ಪಾಸ್ ಉದ್ಯೋಗ ಮಾಹಿತಿ ಕರ್ನಾಟಕ ಸರ್ಕಾರ ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್
Add as Preferred on Google Follow on Google News
Share. WhatsApp Facebook Twitter Telegram
Previous Articleಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!
Next Article ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!
Sub Editor
  • Website

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

September 13, 2026

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

September 12, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.