Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ
Latest News Politics

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Sambrama Prabha NewsBy Sambrama Prabha NewsAugust 26, 2026No Comments2 Mins Read
Share Facebook Twitter Pinterest Copy Link Telegram LinkedIn Tumblr Email
g-parameshwara-says-siddaramaiah-suggested-his-name-for-cm-post-defends-b-nagendra
Share
Facebook Twitter LinkedIn Pinterest Email

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಹುದ್ದೆ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹಿಂದೆ ತಮ್ಮನ್ನು ಮುಖ್ಯಮಂತ್ರಿ ಮಾಡುವಂತೆ ಖುದ್ದು ಸಿದ್ದರಾಮಯ್ಯನವರೇ ಹೈಕಮಾಂಡ್‌ಗೆ ಪ್ರಸ್ತಾಪಿಸಿದ್ದರು ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ಜೊತೆಗೆ ಸಚಿವ ಬಿ. ನಾಗೇಂದ್ರ ಅವರ ಸಂಪುಟ ಸೇರ್ಪಡೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, “ಒಳಗಡೆ ಏನು ನಡೆದಿದೆ ಎಂಬುದು ನನಗೆ ಪೂರ್ಣವಾಗಿ ಗೊತ್ತಿಲ್ಲ. ಆದರೆ ಒಂದಂತೂ ನಿಜ, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೈಕಮಾಂಡ್‌ಗೆ ಹೇಳಿದ್ದೆ ಎಂದು ಸಿದ್ದರಾಮಯ್ಯನವರೇ ನಮಗೆ ತಿಳಿಸಿದ್ದರು. ಆದರೆ ಹೈಕಮಾಂಡ್ ಅದನ್ನು ಪರಿಗಣಿಸಲಿಲ್ಲ” ಎಂದರು.

ಉಪಮುಖ್ಯಮಂತ್ರಿ ಹುದ್ದೆಯ ಚರ್ಚೆಗಳ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, “ಡಿಸಿಎಂ ಮಾಡುವ ಸಂದರ್ಭದಲ್ಲೂ ಹಲವರ ಬೇಡಿಕೆ ಇತ್ತು. ಆ ವೇಳೆಯೂ ಪರಮೇಶ್ವರ್ ಅವರಿಗೆ ಸ್ಥಾನ ನೀಡಬೇಕು ಎಂದು ಸಿದ್ದರಾಮಯ್ಯನವರು ನನ್ನ ಬಳಿಯೂ ಹೇಳಿದ್ದರು. ಹಾಗಾಗಿ ಅವರು ಹೇಳಿದ್ದರಲ್ಲಿ ಸತ್ಯವಿದೆ ಎಂದು ನಾನು ಭಾವಿಸುತ್ತೇನೆ” ಎಂದು ತಿಳಿಸಿದರು.

ಬಿ. ನಾಗೇಂದ್ರ ಪರ ಬ್ಯಾಟಿಂಗ್ ಮಾಡಿದ ಗೃಹ ಸಚಿವರು

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪರಮೇಶ್ವರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

“ಯಾವ ಚಾರ್ಜ್‌ಶೀಟ್‌ನಲ್ಲೂ ನಾಗೇಂದ್ರ ಅವರ ಹೆಸರಿಲ್ಲ. ಅವರು ಹಣ ದುರುಪಯೋಗ ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಮಾಹಿತಿ ಇಲ್ಲ. ಒಟ್ಟು 84 ಕೋಟಿ ರೂ. ಪೈಕಿ ಈಗಾಗಲೇ 79 ಕೋಟಿ ರೂ. ರಿಕವರಿ ಮಾಡಲಾಗಿದೆ. ಒಂದು ವೇಳೆ ನಾಗೇಂದ್ರ ಅವರೇನಾದರೂ ಅಕ್ರಮ ಎಸಗಿದ್ದರೆ ಅವರ ಖಾತೆಯಿಂದ 5, 10 ಅಥವಾ 50 ಕೋಟಿ ರೂ. ಜಪ್ತಿಯಾಗಬೇಕಿತ್ತಲ್ಲವೇ? ಸಿಬಿಐ ಅಥವಾ ಇಡಿ ಯಾವುದೂ ಅವರ ಖಾತೆಗೆ ಹಣ ಹೋಗಿರುವುದನ್ನು ಪತ್ತೆ ಮಾಡಿಲ್ಲ. ಹಾಗಾಗಿ ಅವರ ಕೈವಾಡವಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಸಮರ್ಥಿಸಿಕೊಂಡರು.

ಡೆತ್ ನೋಟ್‌ನಲ್ಲಿ ಸಚಿವರ ಹೆಸರು ಉಲ್ಲೇಖವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳು ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ವಿರುದ್ಧ ವಾಗ್ದಾಳಿ

ಸೆಪ್ಟೆಂಬರ್ 1ರಿಂದ ಬಿಜೆಪಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಹಾಗೂ ಪ್ರತಿಭಟನೆಗಳ ಬಗ್ಗೆ ಕಿಡಿಕಾರಿದ ಗೃಹ ಸಚಿವರು, “ವಿರೋಧ ಪಕ್ಷಗಳು ಕೇವಲ ರಾಜಕೀಯ ಉದ್ದೇಶದಿಂದ ಈ ರೀತಿ ಮಾಡುತ್ತಿವೆ. ಸದನದಲ್ಲಿ ಸೂಕ್ತ ದಾಖಲೆಗಳನ್ನಿಟ್ಟು ಚರ್ಚೆ ಮಾಡಿ ಎಂದು ನಾವು ಆಹ್ವಾನ ನೀಡಿದ್ದೆವು. ಆದರೆ ಅಲ್ಲಿ ಚರ್ಚೆಗೆ ಬರಲಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಬರ ವೀಕ್ಷಣೆಗೆ ತೆರಳಿದ್ದ ಬಿಜೆಪಿ ತಂಡಗಳು ಸರ್ಕಾರಕ್ಕಾಗಲಿ, ಕಂದಾಯ ಸಚಿವರಿಗಾಗಲಿ ಅಥವಾ ಮುಖ್ಯಮಂತ್ರಿಗಳಿಗಾಗಲಿ ಯಾವುದೇ ವರದಿ ನೀಡಿಲ್ಲ. ಜನರ ಸಮಸ್ಯೆಗೆ ಸಲಹೆ ಕೊಡುವುದನ್ನು ಬಿಟ್ಟು ಕೇವಲ ನಾಗೇಂದ್ರ ವಿಚಾರ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಸಂಪುಟ ಪುನಾರಚನೆ ಅಥವಾ ಬದಲಾವಣೆಗಳ ಕುರಿತು ಮಾತನಾಡಿದ ಅವರು, “ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ ಬಳಿಕವೇ ಎಲ್ಲ ಊಹಾಪೋಹಗಳಿಗೆ ತೆರೆ ಬೀಳಲಿದೆ” ಎಂದು ತಿಳಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
B Nagendra CM Post Congress High Command G Parameshwara Kannada News Karnataka Politics Sambramaprabha Siddaramaiah Valmiki Scam ಕರ್ನಾಟಕ ರಾಜಕೀಯ. ಜಿ ಪರಮೇಶ್ವರ್ ಬಿ ನಾಗೇಂದ್ರ ಮುಖ್ಯಮಂತ್ರಿ ಹುದ್ದೆ ವಾಲ್ಮೀಕಿ ಹಗರಣ ಸಿದ್ದರಾಮಯ್ಯ
Add as Preferred on Google Follow on Google News Follow on Flipboard
Share. Facebook Twitter Pinterest LinkedIn Tumblr Email Copy Link
Previous Articleಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ
Next Article ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.