BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

‘ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನು ನಾನು ಒಪ್ಪಲ್ಲ

Author Picture
Published On: November 23, 2025

—Advertisement—

Updated By: Priyalachhi

ಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು.

ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ. 1960ರಲ್ಲಿ ತೇನ್​ಸಿಂಗ್ ಹಿಮಾಲಯ ಪರ್ವತ ಏರಿದಾಗ ಇಡೀ ಜಗತ್ತಿನ ಎಲ್ಲ ಪತ್ರಿಕೆಗಳು ತೇನ್​ಸಿಂಗ್ ಹಿಮಾಲಯ ಏರಿದರು ಎಂದು ಬರೆದರು. ಅವರ ಜೊತೆಗೆ ಇನ್ನೂ 14 ಜನರಿದ್ದರು. ಅವರ ಹೆಸರು ಬರಲಿಲ್ಲ. ಇದೂ ಕೂಡಾ ಹಾಗೇ ಆಗಿದೆ ಎಂದರು.

ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ. ಮೊದಲ‌ ಬಾರಿ ಆರಿಸಿ ಬಂದವರೂ ಸೇರಿ ಬಹಳಷ್ಟು ಶಾಸಕರು ಸಂಕಷ್ಟದಲ್ಲಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವುದನ್ನು ಗಮನಿಸಬೇಕು‌. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಎಲ್ಲರ ಸಹಕಾರವಿದೆ. ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇದೆ. ಹಾಗಾಗಿ, ಸ್ವಾಭಾವಿಕವಾಗಿ ಎಲ್ಲರೂ ಕ್ಲೈಮ್ ಮಾಡುತ್ತಾರೆ. ಆದರೆ, ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಎಲ್ಲರಿಗೂ ಅಧಿಕಾರ ಸಿಗಬೇಕು. ಡಾ.ಜಿ.ಪರಮೇಶ್ವರ್​ ಅವರು 7 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರು ಬಹಳಷ್ಟು ಕಾರ್ಯಕ್ರಮ‌ ಮಾಡಿದ್ದರು ಎಂದು ಹೇಳಿದರು.

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಪರಮೇಶ್ವರ್​ ಹೇಳಿಕೆಗೆ, ಅವರು ಮುಂಚೆ ಕೂಡ ಹೇಳಿದ್ದಾರೆ. ಅದರಲ್ಲಿ ಏನೂ ತಪ್ಪಿಲ್ಲ. ಹೇಳಿದ್ದು ಸರಿಯಾಗಿದೆ. ನಾವು ಕೂಡ ಆಕಾಂಕ್ಷಿ ಆಗಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಎಸ್​ಸಿ, ಎಸ್​ಟಿ, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ ಎಂದರು.

ಎರಡೂವರೆ ವರ್ಷ ಅಧಿಕಾರ ಹಂಚಿಕೆಯ ವಿಚಾರಕ್ಕೆ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಏನೇ ಮಾತುಕತೆ ಆಗಿದ್ದರೂ ಅದು ದೆಹಲಿಯಲ್ಲಿ ಆಗಿರುತ್ತದೆ. ಬೆಂಗಳೂರಿನಲ್ಲಿ ಆಗಿಲ್ಲ. ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ನಮ್ಮ ಉನ್ನತ ಮಟ್ಟದ ನಾಯಕರು ಯಾರಾದರೂ ಕರೆದರೆ ಹೋಗುತ್ತೇವೆ. ಇಲ್ಲದಿದ್ದರೆ ಬೆಳಗಾವಿಯಲ್ಲಿ ಇರುತ್ತೇವೆ ಎಂದು ತಿಳಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp