Updated By: Priyalachhi

ಬೆಂಗಳೂರು: ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ, ನನ್ನ ಬಳಿ ಹೇಳಲು ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಡೆದ ವಿದ್ಯಾಮನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವ ವಿಚಾರದಲ್ಲಿಯೂ ಹೇಳಲು ಏನೂ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಆಂತರಿಕ ಕಚ್ಚಾಟದ ಈ ರಾಜಕೀಯ ನಾಟಕಕ್ಕೆ ತೆರೆ ಎಳೆಯಲು ಎಐಸಿಸಿ ಅಧ್ಯಕ್ಷರು ಬಂದು ರಾಜ್ಯ ನಾಯಕರ ಕೋಪವನ್ನು ತಣ್ಣಗಾಗಿಸಲು ಹೆಜ್ಜೆ ಹಾಕಿದ್ದಾರೆ. ಆದರೆ ಬಿಕ್ಕಟ್ಟನ್ನು ನಿಭಾಯಿಸಲು ಮಾರ್ಗ ಅಷ್ಟು ಸುಲಭವಾಗಿರುವಂತೆ ಕಾಣುತ್ತಿಲ್ಲ.

 

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version