Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ‘ನನಗೇನೂ ಬೇಡ, ಯಾವುದಕ್ಕೂ ಆತುರ ಪಡಲ್ಲ’: ಡಿಕೆ ಶಿವಕುಮಾರ್
Politics

‘ನನಗೇನೂ ಬೇಡ, ಯಾವುದಕ್ಕೂ ಆತುರ ಪಡಲ್ಲ’: ಡಿಕೆ ಶಿವಕುಮಾರ್

Sambrama Prabha NewsBy Sambrama Prabha NewsNovember 28, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದ ಬಗ್ಗೆ ಜೋರಾದ ಚರ್ಚೆ ನಡೆಯುತ್ತಿರುವಂತೆಯೇ ನನಗೇನೂ ಬೇಡ, ಆತುರಪಡಲು ಬಯಸುವುದಿಲ್ಲ ಮತ್ತು ಪಕ್ಷದ ಹೈಕಮಾಂಡ್ ಸಿಎಂ ಹುದ್ದೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುನರುಚ್ಚರಿಸಿದ್ದಾರೆ.

ಅಧಿಕಾರಕ್ಕಾಗಿ ಬಣ ಬಡಿದಾಟಗಳ ನಡುವೆ ಒಕ್ಕಲಿಗ ಸಮುದಾಯದ ನಂಜಾವದೂತ ಸ್ವಾಮೀಜಿ ಅವರೊಂದಿಗಿನ ಭೇಟಿಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಕಾಂಗ್ರೆಸ್ ನನ್ನ ಸಮುದಾಯವಾಗಿದ್ದು, ರಾಜ್ಯದ ಎಲ್ಲಾ ಸಮುದಾಯಗಳನ್ನು ಸಮಾನವಾಗಿ ನೋಡುವುದಾಗಿ ಹೇಳಿದರು.

ನನಗೆ ಏನೂ ಬೇಡ. ಯಾವುದಕ್ಕೂ ಆತುರಪಡುತ್ತಿಲ್ಲ. ನನ್ನ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ. ಕಾಂಗ್ರೆಸ್ ನನ್ನ ಸಮುದಾಯ. ಸಮಾಜದ ಎಲ್ಲಾ ವರ್ಗಗಳನ್ನು ನಾನು ಪ್ರೀತಿಸುತ್ತೇನೆ ಎಂದರು.

ಖಂಡಿತವಾಗಿ ದೆಹಲಿಗೆ ಹೋಗ್ತೀನಿ: ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಭೆ ನಡೆಯಲಿದೆ ಎಂಬ ವದಂತಿಗಳಿದ್ದರೂ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕರ್ನಾಟಕದ ರೈತ ಸಮಸ್ಯೆಗಳನ್ನು ಇಟ್ಟುಕೊಳ್ಳಲು ದೆಹಲಿಗೆ ಭೇಟಿ ನೀಡುವುದಾಗಿ ಶಿವಕುಮಾರ್ ಹೇಳಿದರು.

ಖಂಡಿತವಾಗಿಯೂ ದೆಹಲಿಗೆ ಹೋಗುತ್ತೇನೆ. ಅದು ನಮ್ಮ ದೇವಾಲಯ. ಕಾಂಗ್ರೆಸ್‌ಗೆ ದೀರ್ಘ ಇತಿಹಾಸವಿದ್ದು, ದೆಹಲಿ ಯಾವಾಗಲೂ ನಮಗೆ ಮಾರ್ಗದರ್ಶನ ನೀಡುತ್ತದೆ. ಅವರು ನನ್ನನ್ನು, ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಯನ್ನು ಕರೆದಾಗ, ನಾವು ಅಲ್ಲಿಗೆ ಹೋಗುತ್ತೇವೆ ಎಂದರು.

ಸಂಸದರನ್ನು ಭೇಟಿಯಾಗಬೇಕಾಗಿದೆ: ‘ನನಗೆ ದೆಹಲಿಯಲ್ಲಿ ಬಹಳಷ್ಟು ಕೆಲಸಗಳಿವೆ. ಸಂಸತ್ತಿನ ಚಳಿಗಾಲದ ಅಧಿವೇಶನ ಬರುತ್ತಿದ್ದು, ಸಂಸದರನ್ನು ಭೇಟಿಯಾಗಬೇಕಾಗಿದೆ. ಏಕೆಂದರೆ ನಮ್ಮ ಕೆಲವು ಯೋಜನೆಗಳನ್ನು ಮುಂದಕ್ಕೆ ತೆಗೆದುಕೊಳ್ಳಬೇಕಾಗಿದೆ. ಮುಖ್ಯಮಂತ್ರಿ ಕೇಂದ್ರದೊಂದಿಗೆ ಸಮಸ್ಯೆಗಳನ್ನು ಚರ್ಚಿಸುತ್ತಿದ್ದಾರೆ. ಮೆಕ್ಕೆಜೋಳದ ಸಮಸ್ಯೆ ಇದೆ. ಕೇಂದ್ರ ಸರ್ಕಾರ ರೈತರಿಗೆ ಬೆಂಬಲ ನೀಡುತ್ತಿಲ್ಲ ಅಥವಾ ಸಹಾಯ ಮಾಡುತ್ತಿಲ್ಲ. ನಾವು ಕಾರ್ಖಾನೆ ಮಾಲೀಕರ ಸಭೆ ಕರೆಯಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.

ನವೆಂಬರ್‌ನಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರೈಸಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಬಣ ಬಡಿದಾಟ ಶುರುವಾಯಿತು.

ಡಿಕೆಶಿ ಭೇಟಿಯಾದ ಶಾಸಕರು: ಈ ಮಧ್ಯೆ ಮಾಲೂರು, ಕೋಲಾರ, ಮುಳಬಾಗಿಲು ಮತ್ತು ಕುಣಿಗಲ್ ಶಾಸಕರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಮಾಲೂರಿನ ಕೆ. ವೈ. ನಂಜೇಗೌಡ, ಕೋಲಾರದ ಕೊತ್ತೂರು ಮಂಜುನಾಥ್, ಮುಳಬಾಗಿಲಿನ ಆದಿ ನಾರಾಯಣ, ಕುಣಿಗಲ್ ನ ಡಾ. ರಂಗನಾಥ್ ಮತ್ತು ಪ್ರೊಫೆಸರ್ ಎಂ. ವಿ. ರಾಜೇಗೌಡ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
DK Shivakumar
Add as Preferred on Google Follow on Google News
Share. WhatsApp Facebook Twitter Telegram
Previous ArticleSC – ST ಮೀಸಲಾತಿ ಹೆಚ್ಚಳ: ನೇಮಕಾತಿಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​
Next Article 5 ದಶಕಗಳ ಹಿಂದೆಯೇ ಉಡುಪಿ ಹೊಸ ಆಡಳಿತ ಮಾದರಿಯನ್ನು ಪ್ರಸ್ತುತಪಡಿಸಿದೆ: ಪ್ರಧಾನಿ ಮೋದಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

September 10, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.