Updated By: Priyalachhi

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಿದ್ದು, ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪುಟ್ಟ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version