ರಾಜ್ಯದ ಸರ್ಕಾರಿ ಶಾಲೆಗಳಿಗೆ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು 60,000ಕ್ಕೂ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿಯಿದೆ. 2026-27ನೇ ಸಾಲಿನಲ್ಲಿ 40,000 ಪ್ರಾಥಮಿಕ & 11,000 ಪ್ರೌಢ ಶಾಲಾ ಶಿಕ್ಷಕರು ಸೇರಿ 51,000ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮೋದನೆ ಸಿಕ್ಕಿದೆ. ಮೊದಲ ಹಂತದಲ್ಲಿ ಪ್ರಾಥಮಿಕ ಶಾಲೆಗಳಿಗೆ 30,337 & ಪ್ರೌಢ ಶಾಲೆಗಳಿಗೆ 9,730 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಲಾಗಿದೆ. ಆಯ್ಕೆಯಾದವರಿಗೆ ಮಾಸಿಕ ₹12,000 ಗೌರವಧನ ಸಿಗಲಿದೆ.

