ಬೆಂಗಳೂರು: 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಕೆಪಿಎಸ್‌ಸಿ ಇದೇ 7ರವರೆಗೆ ವಿಸ್ತರಿಸಿದೆ.
ಈ ಹುದ್ದೆಗಳಿಗೆ ನೇಮಕಾತಿಗೆ ಕೆಪಿಎಸ್‌ಸಿ ಜುಲೈ 31ರಂದು ಅಧಿಸೂಚನೆ ಹೊರಡಿಸಿ, ಆ. 1ರಿಂದ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಆದರೆ, ಜಾತಿ, ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣ ಪತ್ರಗಳ ವಿತರಣೆಗೆ ಸಂಬಂಧಿಸಿದಂತೆ ನಾಡಕಚೇರಿ ಮತ್ತು ಸೇವಾ ಸಿಂಧು ಪೋರ್ಟಲ್ ಸರ್ವರ್ ಸಮಸ್ಯೆಯಿಂದ ನಿಗದಿತ ಸಮಯಕ್ಕೆ ಪ್ರಮಾಣಪತ್ರಗಳು ಸಿಗದೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇಂಟರ್‌ನೆಟ್ ಸಂಪರ್ಕ ಸಿಗದೆ ಶುಲ್ಕ ಪಾವತಿ ವೈಫಲ್ಯದ ಕಾರಣಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನವನ್ನು ವಿಸ್ತರಿಸುವಂತೆ ಅಭ್ಯರ್ಥಿಗಳು ಕೆಪಿಎಸ್‌ಸಿಗೆ ಮನವಿ ಸಲ್ಲಿಸಿದ್ದರು.


