Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

“ತುರ್ತು ಪರಿಸ್ಥಿತಿಯ ಅತಿರೇಕಗಳಿಗೆ ಸಂಜಯ್ ಗಾಂಧಿ ಮಾತ್ರ ಕಾರಣರಲ್ಲ!”: ಅತ್ತೆ ಇಂದಿರಾ ಮೇಲಿದ್ದ ಒತ್ತಡ ಬಿಚ್ಚಿಟ್ಟ ಸೋನಿಯಾ ಗಾಂಧಿ

‘ತುಂಡು ತುಂಡಾಗಿ ಕತ್ತರಿಸುತ್ತಾರೆ’ ಹೇಳಿಕೆಗೆ ತಿರುಗೇಟು: ಛಲವಾದಿ ನಾರಾಯಣಸ್ವಾಮಿ ಮನೆಗೆ ಆನ್‌ಲೈನ್‌ನಲ್ಲಿ ಚಾಕು ಆರ್ಡರ್ ಮಾಡಿದ ಕಾಂಗ್ರೆಸ್!

ಗ್ರಾಹಕರಿಗೆ ಕೆಎಂಎಫ್ ಮತ್ತೊಂದು ಶಾಕ್: ನಂದಿನಿ ತುಪ್ಪ, ಬೆಣ್ಣೆ ಮತ್ತು ಪನೀರ್ ದರದಲ್ಲಿ ಭಾರಿ ಏರಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?
Exclusive Crime News

ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?

Sub EditorBy Sub EditorJune 25, 2026No Comments2 Mins Read
Share WhatsApp Facebook Twitter Telegram
krishi-thapanda-friend-vaishakh-suicide
Share
WhatsApp Facebook Twitter Telegram

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಕ್ ಉಪಾಧ್ಯಾಯ (33) ಅವರು ನಟಿಯ ಫ್ಲಾಟ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ (ಆರ್.ಆರ್ ನಗರ) ನಡೆದಿದೆ. ಇತ್ತೀಚೆಗಷ್ಟೇ ಉದ್ಯಮಿಯೊಬ್ಬರಿಗೆ ಬೆದರಿಕೆ ಪತ್ರ ಬರೆದ ಪ್ರಕರಣದಲ್ಲಿ ಜೈಲು ಸೇರಿದ್ದ ವೈಶಾಕ್, ಜಾಮೀನಿನ ಮೇಲೆ ಹೊರಬಂದ ಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಸಾವಿಗೂ ಮುನ್ನ ನಟಿಗೆ ಕೊನೆ ಮೆಸೇಜ್!

ಕಳೆದ ಕೆಲವು ದಿನಗಳಿಂದ ವೈಶಾಕ್ ಮತ್ತು ಅವರ ಪತ್ನಿ ಮೇಘನಾ ನಡುವೆ ಕೌಟುಂಬಿಕ ಕಲಹ ತಾರಕಕ್ಕೇರಿತ್ತು. ಪತ್ನಿಯೊಂದಿಗಿನ ಜಗಳದಿಂದ ಬೇಸತ್ತಿದ್ದ ವೈಶಾಕ್, ಕಳೆದ ಒಂದು ವಾರದಿಂದ ಆರ್.ಆರ್. ನಗರದಲ್ಲಿರುವ ನಟಿ ಕೃಷಿ ತಾಪಂಡ ಅವರ ಫ್ಲಾಟ್‌ನಲ್ಲೇ ವಾಸವಿದ್ದರು. ಘಟನೆ ನಡೆದ ಬುಧವಾರ ರಾತ್ರಿ ಕೃಷಿ ತಾಪಂಡ ಮನೆಯಲ್ಲಿರಲಿಲ್ಲ. ರಾತ್ರಿ ವೇಳೆ ನಟಿಗೆ ಕರೆ ಹಾಗೂ ಮೆಸೇಜ್ ಮಾಡಿದ ವೈಶಾಕ್, “ನನಗೆ ಜೀವನ ಸಾಕಾಗಿದೆ, ನಾನು ಸಾಯುತ್ತಿದ್ದೇನೆ” ಎಂದು ಹೇಳಿದ್ದರು.

ಇದರಿಂದ ಆತಂಕಗೊಂಡ ಕೃಷಿ ತಾಪಂಡ, “ಯಾವುದೇ ತಪ್ಪು ನಿರ್ಧಾರ ತೆಗೆದುಕೊಳ್ಳಬೇಡ, ನಾವು ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿ ಬರೋಣ, ಅಲ್ಲಿಯವರೆಗೆ ಕಾಯಿ” ಎಂದು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಜೊತೆಗೆ ತಕ್ಷಣವೇ ವೈಶಾಕ್ ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಕುಟುಂಬಸ್ಥರು ಹಾಗೂ ಪೊಲೀಸರು ಫ್ಲಾಟ್‌ಗೆ ಬಂದು ನೋಡುವಷ್ಟರಲ್ಲಿ ವೈಶಾಕ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು. ಸುದ್ದಿ ತಿಳಿದ ತಕ್ಷಣ ಕೃಷಿ ತಾಪಂಡ ಅವರು ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಹಣದ ಬೇಡಿಕೆ ಮತ್ತು ಜೈಲು ವಾಸ

ವೈಶಾಕ್ ಅವರು ಆಟೋಮೊಬೈಲ್ ಉದ್ಯಮ ನಡೆಸುತ್ತಿದ್ದರು. ಈ ಹಿಂದೆ ಎವಿಆರ್ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿ ಎಂಬುವವರಿಗೆ 7 ಕೋಟಿ ರೂ. ನೀಡುವಂತೆ ಅನಾಮಧೇಯ ಬೆದರಿಕೆ ಪತ್ರ ಕಳುಹಿಸಿದ ಆರೋಪದ ಮೇಲೆ ಹೆಚ್.ಎ.ಎಲ್ (HAL) ಪೊಲೀಸರು ಇದೇ ಕೃಷಿ ತಾಪಂಡ ಅವರ ಫ್ಲಾಟ್‌ನಿಂದಲೇ ವೈಶಾಕ್‌ನನ್ನು ಬಂಧಿಸಿದ್ದರು. ಆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಾಗಿನಿಂದ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಮತ್ತು ಇದೇ ಕಾರಣಕ್ಕೆ ಪತಿ-ಪತ್ನಿ ನಡುವೆ ನಿರಂತರ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಸದ್ಯ ಆರ್.ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈಶಾಕ್ ಪತ್ನಿ ಮೇಘನಾ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Bengaluru News Kannada Actress Krishi Thapanda RR Nagar Police Sandalwood News Suicide Case Vaishakh Upadhya ಆತ್ಮಹತ್ಯೆ ಕೃಷಿ ತಾಪಂಡ ಬೆಂಗಳೂರು ಸುದ್ದಿ ಮನರಂಜನೆ ಸುದ್ದಿ ರಾಜರಾಜೇಶ್ವರಿ ನಗರ ವೈಶಾಕ್ ಉಪಾಧ್ಯಾಯ ಸ್ಯಾಂಡಲ್‌ವುಡ್
Add as Preferred on Google Follow on Google News
Share. WhatsApp Facebook Twitter Telegram
Previous Articleಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ
Next Article “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ
Sub Editor
  • Website

Related Posts

‘ತುಂಡು ತುಂಡಾಗಿ ಕತ್ತರಿಸುತ್ತಾರೆ’ ಹೇಳಿಕೆಗೆ ತಿರುಗೇಟು: ಛಲವಾದಿ ನಾರಾಯಣಸ್ವಾಮಿ ಮನೆಗೆ ಆನ್‌ಲೈನ್‌ನಲ್ಲಿ ಚಾಕು ಆರ್ಡರ್ ಮಾಡಿದ ಕಾಂಗ್ರೆಸ್!

November 7, 2026

ಗೋಸುಂಬೆ ರಾಜಕಾರಣ ಬಿಟ್ಟು ನೈಜ ರಾಜಕಾರಣ ಮಾಡಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಬಾಲಕೃಷ್ಣ ತಿರುಗೇಟು

October 31, 2026

ರಾಜ್ಯ ಆಡಳಿತದಲ್ಲಿ ಮೇಜರ್ ಸರ್ಜರಿ: ಸುರಳ್ಕರ್ ವಿಕಾಸ್ ಕಿಶೋರ್, ಶಿಲ್ಪಾ ನಾಗ್ ಸೇರಿ 6 IAS ಅಧಿಕಾರಿಗಳ ದಿಢೀರ್ ವರ್ಗಾವಣೆ! ಯಾರಿಗೆ ಯಾವ ಹುದ್ದೆ?

October 30, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

“ತುರ್ತು ಪರಿಸ್ಥಿತಿಯ ಅತಿರೇಕಗಳಿಗೆ ಸಂಜಯ್ ಗಾಂಧಿ ಮಾತ್ರ ಕಾರಣರಲ್ಲ!”: ಅತ್ತೆ ಇಂದಿರಾ ಮೇಲಿದ್ದ ಒತ್ತಡ ಬಿಚ್ಚಿಟ್ಟ ಸೋನಿಯಾ ಗಾಂಧಿ

‘ತುಂಡು ತುಂಡಾಗಿ ಕತ್ತರಿಸುತ್ತಾರೆ’ ಹೇಳಿಕೆಗೆ ತಿರುಗೇಟು: ಛಲವಾದಿ ನಾರಾಯಣಸ್ವಾಮಿ ಮನೆಗೆ ಆನ್‌ಲೈನ್‌ನಲ್ಲಿ ಚಾಕು ಆರ್ಡರ್ ಮಾಡಿದ ಕಾಂಗ್ರೆಸ್!

ಗ್ರಾಹಕರಿಗೆ ಕೆಎಂಎಫ್ ಮತ್ತೊಂದು ಶಾಕ್: ನಂದಿನಿ ತುಪ್ಪ, ಬೆಣ್ಣೆ ಮತ್ತು ಪನೀರ್ ದರದಲ್ಲಿ ಭಾರಿ ಏರಿಕೆ

ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗೆ ಆಗ್ರಹ: ಮಂಡ್ಯದಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರು ವಶಕ್ಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.