Updated By: Priyalachhi

ಕಲರ್ಸ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ಮಲ್ಲಮ್ಮ ಹೊರಗೆ ಬಂದಿದ್ದಾರೆ.

ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್‌ ಬಾಸ್‌ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್‌ ಪಡೆದು ಡೊಡ್ಮನೆಯಿಂದ ಔಟ್ ಆಗಿದ್ದಾರೆ.

ಯಾದಗಿರಿ ಜಿಲ್ಲೆಯವರಾದ ಮಲ್ಲಮ್ಮ, ಮನೆ ಪ್ರವೇಶಿಸುವ ಮುನ್ನ ತಮ್ಮ ಉತ್ಸಾಹ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಹೆಸರು ಮಾಡಿರುವ ಬಲವಿತ್ತು.

ಆದರೆ ಮನೆಗೆ ಹೋದ ಮಲ್ಲಮ್ಮ ಅವರಿಗೆ ಆರಂಭದಲ್ಲಿ ಅವರಿಗೆ ಟಾಸ್ಕ್‌ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್‌ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್‌ ಅವರು ಮನೆ ಮಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಲ್ಲಮ್ಮ ಹೆಚ್ಚಾಗಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್‌ ಜೊತೆ ಗುರುತಿಸಿಕೊಳ್ಳುತ್ತಿದ್ದರು. ಈ ವಾರದ ಟಾಸ್ಕ್‌ನಲ್ಲೂ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಶನಿವಾರ ಸುದೀಪ್‌ ಜೊತೆ ಮಾತನಾಡುತ್ತಿದ್ದಾಗ ನಾನು ಕಾಲೇಜಿಗೆ ಹೋಗಿರಲಿಲ್ಲ ಎಂದು ಹೇಳಿ ಕಣ್ಣೀರಿಟ್ಟಿದ್ದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version