• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ

Sambrama Prabha News by Sambrama Prabha News
November 3, 2025
in Exclusive, Latest News, Politics, Special News
0
2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ

Updated By: Priyalachhi

ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಘೋಷಿಸಿದ್ದಾರೆ.

‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ ಮೇ ತಿಂಗಳಲ್ಲಿ ಆರಂಭವಾಗಲಿದೆ. ಈ ಮಾರ್ಗವು 13.76 ಕಿ.ಮೀ. ಭೂಗತ ಮಾರ್ಗವನ್ನು ಹೊಂದಿದ್ದು, ಸಂಚಾರ ಸುಗಮವಾಗಲಿದೆ’ ಎಂದಿದ್ದಾರೆ.

‘ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ! ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ 13.76 ಕಿಮೀ ಉದ್ದದ ಮಾರ್ಗವು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುತ್ತದೆ’ ಎಂದು ಅವರು ಹೇಳಿದರು.

ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ. ಇದು ಅತಿ ಉದ್ದದ ಭೂಗತ ಮಾರ್ಗವಾಗಿದೆ. ಈ ಸುರಂಗದಲ್ಲಿ 12 ನಿಲ್ದಾಣಗಳು ಇವೆ. ಇನ್ನುಳಿದ ಆರು ನಿಲ್ದಾಣಗಳು ಎಲ್ಲರಿಸಿದ ಮಾರ್ಗದಲ್ಲಿ ಇವೆ.

Tags: Metro Pink Lineಮೆಟ್ರೋ ಗುಲಾಬಿ ಮಾರ್ಗ
Previous Post

ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡಿ

Next Post

ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು

Next Post
ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು

ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.