• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮೀ ಸಂಘದ ಪ್ರಮಾಣಪತ್ರ ಹಸ್ತಾಂತರ

Sambrama Prabha News by Sambrama Prabha News
November 13, 2025
in Home, Latest News, Politics
0
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮೀ ಸಂಘದ ಪ್ರಮಾಣಪತ್ರ ಹಸ್ತಾಂತರ

Updated By: Priyalachhi

ಬೆಂಗಳೂರು: ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.

ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಅವರು ಈ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ. ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.

ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.‌

”ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು. ಇದೇ ವೇಳೆ, ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಅಭಿನಂದಿಸಲಾಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣವಾದ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ.

Tags: Minister Lakshmi Hebbalkarಗೃಹಲಕ್ಷ್ಮೀ ಸಂಘ
Previous Post

30-40 ರ ಹರೆಯದ ಯುವಜನರಲ್ಲಿ ಹೃದಯ ಕಾಯಿಲೆ ತೀವ್ರ ಹೆಚ್ಚಳ

Next Post

ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಆದ್ರೆ ಕಂಡೀಷನ್ ಅಪ್ಲೈ?

Next Post
ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಆದ್ರೆ ಕಂಡೀಷನ್ ಅಪ್ಲೈ?

ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಆದ್ರೆ ಕಂಡೀಷನ್ ಅಪ್ಲೈ?

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.