Updated By: Priyalachhi

ಹಾವೇರಿ: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ಖಾನ್​​ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು, ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಎರಡೂವರೆ ವರ್ಷ ಮಂತ್ರಿ ಆಗಿದ್ದು, ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡು ಅಂದ್ರೂ ನಾನು ಸಿದ್ಧ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ. 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ನಮ್ಮದು ಹೈಕಮಾಂಡ್ ಪಕ್ಷ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹಾಕಿದ ಗೆರೆಯನ್ನು ನಾವು ದಾಟುವುದಿಲ್ಲ ಎಂದಿದ್ದಾರೆ. ಸಚಿವ ಸಂಪುಟ ಪುನಾರನೆ ಬಗ್ಗೆ ರಾಜ್ಯ ಕಾಂಗ್ರೆಸ್​ನಲ್ಲಿ ಚರ್ಚೆ ಶುರುವಾಗಿರುವ ಹೊತ್ತಲ್ಲಿ, ಸಚಿವ ಜಮೀರ್​ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version