Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ
Politics Home Latest News

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ

Sambrama Prabha NewsBy Sambrama Prabha NewsNovember 5, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಬೆಳಗಾವಿಗೆ ಆಗಮಿಸಿ ಸಂಧಾನ ಮಾತುಕತೆ ನಡೆಸಿದರು. ನಾಳೆಯೇ ಸರ್ಕಾರ ಒಂದು ನಿರ್ಧಾರ ಪ್ರಕಟಿಸಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ, ಸಚಿವರು ಏಳನೇ ತಾರೀಖಿನವರೆಗೂ ಕಾಲಾವಕಾಶ ಕೇಳಿದರು. ಇದಕ್ಕೆ ಕಬ್ಬು ಬೆಳೆಗಾರರು ಒಪ್ಪದೇ ಇದ್ದಾಗ ಮಾತುಕತೆ ಮುರಿದು ಬಿತ್ತು. ಇದರಿಂದ ಆಕ್ರೋಶಗೊಂಡ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ನಡೆಯುತ್ತಿರುವ ಹೋರಾಟಗಾರರನ್ನು ಭೇಟಿ ಮಾಡಿ, ಸರ್ಕಾರ ಪರವಾಗಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್, ನೀವು ಅನೇಕ ವಿಚಾರಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೀರಿ. ಇದರಿಂದ ನಾಳೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ರೈತ ಮುಖಂಡರ ಜೊತೆ ಮಾತುಕತೆ ನಡೆಸಲಾಗುತ್ತದೆ, ಆ ಬಳಿಕ ಏಳನೇ ತಾರೀಖು ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ಕರೆಯಲಾಗುವುದು ಎಂದು ತಿಳಿಸಿದರು.

ಇದಕ್ಕೆ ರೈತ ಮುಖಂಡರಾದ ಚುನ್ನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರುಜೀ ಮಾತನಾಡಿ, ನಾಳೆಯೇ ಸರ್ಕಾರ ಒಂದು ತೀರ್ಮಾನಕ್ಕೆ ಬರುವಂತೆ ಪಟ್ಟು ಹಿಡಿದರು. ಇದಕ್ಕೆ ಸಚಿವರು ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಹಾಗೂ ಏಳನೇ ತಾರೀಖು ನಿಮಗೆ ಅಂತಿಮವಾಗಿ ತೀರ್ಮಾನ ಹೇಳಲಾಗುವುದು ಎಂದು ಹೇಳಿದರು. ಇದಕ್ಕೆ ರೈತರು ಒಪ್ಪದೇ ಮಾತುಕತೆ ಮೊಟಕು ಗೊಂಡಿತು. ಇದರಿಂದ ರೊಚ್ಚಿಗೆದ್ದ ರೈತರು ಸಚಿವರು ತೆರಳುವ ಕಾರಿಗೆ ಅಡ್ಡಲಾಗಿ ಮಲಗಿ ಕಾರಿಗೆ ಮುತ್ತಿಗೆ ಹಾಕಿದರು. ಸ್ಥಳದಲ್ಲೇ ದೊಡ್ಡ ಹೈಡ್ರಾಮಾ ಸೃಷ್ಟಿ ಆಯಿತು. ತುರ್ತಾಗಿ ಪೋಲಿಸರು ಮದ್ಯೆ ಪ್ರವೇಶ ಮಾಡಿ ಸಚಿವರ ಕಾರು ತೆರಳುವುದಕ್ಕೆ ಅನುವು ಮಾಡಿಕೊಟ್ಟರು. ಇವತ್ತು ಯಾವುದೇ ಒಂದು ನಿರ್ಧಾರಕ್ಕೆ ಬರದೇ ಇರುವುದರಿಂದ ಕಬ್ಬು ಬೆಳೆಗಾರರಿಗೆ ನಿರಾಶೆ ಮೂಡಿಸಿದೆ

ಭಾನುವಾರ ಡಿಸಿ, ಎಸ್​ಪಿಯೊಂದಿಗೆ ನಡೆದ ಸಂಧಾನ ಸಭೆಯೂ ವಿಫಲವಾಗಿತ್ತು: ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ರೈತರು ಗುರ್ಲಾಪುರ್ ಕ್ರಾಸ್​ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಕಳೆದ ಭಾನುವಾರ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಎಸ್​ಪಿ ಅವರ ನೇತೃತ್ವದಲ್ಲಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದ್ದರು. ಆದರೆ ಈ ಸಂಧಾನ ಸಭೆ ವಿಫಲವಾಗಿತ್ತು.

ಭಾನುವಾರ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಮತ್ತು ಎಸ್​ಪಿ ಭೀಮಾಶಂಕರ್ ಗುಳೇದ್ ರೈತರು ಹಾಗೂ ರೈತ ಮುಖಂಡರ ಜೊತೆ ಸಂಧಾನ ಸಭೆ ನಡೆಸಿದ್ದರು.

ಈ ಕುರಿತಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಂದು ಮಾತನಾಡಿದ್ದರು. ರೈತರು ಜಿಲ್ಲೆಯಲ್ಲಿ ಬೃಹತ್ ಹೋರಾಟ ಮಾಡಿಕೊಂಡು ಬಂದಿದ್ದಾರೆ. ರೈತರ ಏಳಿಗೆಗಾಗಿ ನಾನು ಶ್ರಮಿಸುತ್ತೇನೆ. ಕಾರ್ಖಾನೆ ಮಾಲೀಕರ ಜೊತೆಗೆ ಸಭೆ ನಡೆಸಲಾಗಿತ್ತು. ಆದರೆ ಕಾರ್ಖಾನೆ ಮಾಲೀಕರು 3,200 ರೂ. ಕೊಡುವುದಾಗಿ ಒಪ್ಪಿಕೊಂಡಿದ್ದಾರೆ. ನಿಮ್ಮ ಜೊತೆ ನಾನು ನಿರಂತರವಾಗಿ ಇರುತ್ತೇನೆ. ನಿಮ್ಮ ಬೇಡಿಕೆಗೆ ನಾನು ಸ್ಪಂದನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ರೈತರು ಬೀದಿಯಲ್ಲಿ ಕೂರಬಾರದು. ನಾನು ರೈತ ಸ್ನೇಹಿ ಅಧಿಕಾರಿಯಾಗಿ ನಿಮಗೆ ಮನವಿ ಮಾಡಿಕೊಳ್ಳುತ್ತೇನೆ. ನೀವು ಈ ಪ್ರತಿಭಟನೆಯನ್ನು ಕೈ ಬಿಡಿ, ನಾನು ನಿಮ್ಮ ಜೊತೆ ಇರುತ್ತೇನೆ ಎಂದು ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ರೈತರು, ಡಿಸಿ ಅವರ ಮನವೊಲಿಕೆಗೆ ಬಗ್ಗದೇ ಪ್ರತಿಭಟನೆ ಮುಂದುವರೆಸಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Minister's negotiation ಕಬ್ಬು ಸಭೆ ವಿಫಲ
Add as Preferred on Google Follow on Google News
Share. WhatsApp Facebook Twitter Telegram
Previous Articleನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ
Next Article ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ಪ್ರಕಟ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.