• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

2 ತಿಂಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪತ್ತೆ

Sambrama Prabha News by Sambrama Prabha News
November 13, 2025
in Latest News, Nation News
0
2 ತಿಂಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪತ್ತೆ

Updated By: Priyalachhi

ಬೆಂಗಳೂರು: ಕೋವಿಡ್ ಬಳಿಕ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದಲ್ಲಿ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದ್ದು ಜನರ ಜೀವ ತಗೆಯುತ್ತಿವೆ. ಅದರಲ್ಲೂ ಕೋಮಾರ್ಬಿಟಿಸ್ ರೋಗಿಗಳು ಸಾಂಕ್ರಾಮಿಕ ಖಾಯಿಲೆಗಳಿಂದ ಪರದಾಡುವಂತಾಗಿದೆ. ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯದ ಸಮಸ್ಯೆಗಳು ವ್ಯಾಪಕ ಹಿನ್ನಲೆ ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಲಿಸ್ಟ್ ಮಾಡಲಾಗಿದ್ದು ಇವರಿಗೆಲ್ಲ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ಹಾಗೂ ಔಷಧ ನೀಡುವ ‘ಗೃಹ ಆರೋಗ್ಯ’ ಯೋಜನೆಯನ್ನು (Gruha Arogya Scheme) ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲಾಗುತ್ತಿದೆ. ಕಳೆದ ಎರಡು ತಿಂಗಳಲ್ಲಿ ‘ಗೃಹ ಆರೋಗ್ಯದಡಿ’ ಲಕ್ಷಾಂತರ ಜನರಿಗೆ ಆರೋಗ್ಯ ಇಲಾಖೆ ಕ್ಯಾನ್ಸರ್ ಸ್ಕ್ರಿನಿಂಗ್ ಮಾಡಿದೆ. ಈ ವೇಳೆ 5664 ಕ್ಯಾನ್ಸರ್ (Cancer) ಪೀಡಿತ ರೋಗಿಗಳು ಪತ್ತೆಯಾಗಿದ್ದಾರೆ.

ಕಳೆದ ಎರಡು ತಿಂಗಳ ‘ಗೃಹ ಆರೋಗ್ಯ’ದಲ್ಲಿ 5664 ಕ್ಯಾನ್ಸರ್ ಪೀಡಿತ ರೋಗಿಗಳು ಪತ್ತೆಯಾಗಿದ್ದು ಹೆಚ್ಚುವರಿ ಚಿಕಿತ್ಸೆಗೆ ಇಲಾಖೆ ಸೂಚಿಸಿದೆ. ಈ ಪೈಕಿ ಓರಲ್ ಕ್ಯಾನ್ಸರ್ 3403 ಜನರಲ್ಲಿ ಕಂಡು ಬಂದಿದೆ. ಆರೋಗ್ಯ ಇಲಾಖೆ ಇದೀಗ ಮತ್ತಷ್ಟು ಜನರನ್ನ ಸ್ಕ್ರೀನಿಂಗ್​ಗೆ ಒಳಪಡಿಸಲು ಮುಂದಾಗಿದೆ.

ಗೃಹ ಆರೋಗ್ಯ ಸ್ಕ್ರೀನಿಂಗ್ ವೇಳೆ ಬೆಳಕಿಗೆ ಬಂದ ಕ್ಯಾನ್ಸರ್ ಪ್ರಕರಣಗಳು

ಓರಲ್ ಕ್ಯಾನ್ಸರ್

  • ಸ್ಕ್ರಿನಿಂಗ್ – 11,92,436
  • ಕ್ಯಾನ್ಸರ್ ಪತ್ತೆ – 3403

ಬ್ರೆಸ್ಟ್ ಕ್ಯಾನ್ಸರ್

  • ಸ್ಕ್ರಿನಿಂಗ್- 5,38,688
  • ಕ್ಯಾನ್ಸರ್ ಪತ್ತೆ- 1311

ಸರ್ವೈಕಲ್ ಕ್ಯಾನ್ಸರ್

  • ಸ್ಕ್ರಿನಿಂಗ್- 3,85,714
  • ಕ್ಯಾನ್ಸರ್ ಪತ್ತೆ- 950

ಮಹಿಳೆಯರಲ್ಲೇ ಹೆಚ್ಚು ಕ್ಯಾನ್ಸರ್

ಪ್ರತಿ ವರ್ಷ ಭಾರತದಲ್ಲಿ ಸುಮಾರು 13.9 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ ವರ್ಷ 87 ಸಾವಿರ ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಪ್ರಮುಖವಾಗಿ ಮಹಿಳೆಯರೇ ಹೆಚ್ಚಾಗಿ ಮಾರಕ‌ ಕ್ಯಾನ್ಸರ್‌ಗೆ ತುತ್ತಾಗುತ್ತಿರುವುದು ತಿಳಿದುಬಂದಿದೆ. ಕಳೆದ ವರ್ಷ ಬರೋಬ್ಬರಿ 48685 ಮಹಿಳೆಯರಲ್ಲಿ ಹಾಗೂ 39170 ಪುರುಷರಲ್ಲಿ‌ ಕ್ಯಾನ್ಸರ್ ಪತ್ತೆಯಾಗಿದೆ.

ಬೆಂಗಳೂರಿನಲ್ಲೇ ಹೆಚ್ಚು ಕ್ಯಾನ್ಸರ್ ಪ್ರಕರಣ

ಬೆಚ್ಚಿಬೀಳಿಸುವ ಸಂಗತಿಯೆಂದರೆ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಲ್ಲೇ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಒಟ್ಟಿನಲ್ಲಿ ಬದಲಾದ ಜೀವನಶೈಲಿ, ಮಾಲಿನ್ಯ ಇತರ ಕಾರಣಗಳಿಂದ ಕ್ಯಾನ್ಸರ್ ವ್ಯಾಪಕವಾಗಿ ಹರಡುತ್ತಿದ್ದು, ಜನರು ಆರೋಗ್ಯದ ಬಗ್ಗೆ ಕೊಂಚ ಹೆಚ್ಚಿನ ಎಚ್ಚರವಹಿಸಬೇಕಿದೆ.

Tags: BengaluruCancerGruha Arogya Schemeಕ್ಯಾನ್ಸರ್
Previous Post

ಜೀವಭಯ… ಪಾಕಿಸ್ತಾನದಿಂದ ತವರಿಗೆ ಮರಳಲಿರುವ ಶ್ರೀಲಂಕಾ ಆಟಗಾರರು..!

Next Post

ಗೃಹ ಸಚಿವ ಪರಮೇಶ್ವರ್ ಬಗ್ಗೆ ನಿಂದನೆ

Next Post
ಗೃಹ ಸಚಿವ ಪರಮೇಶ್ವರ್ ಬಗ್ಗೆ ನಿಂದನೆ

ಗೃಹ ಸಚಿವ ಪರಮೇಶ್ವರ್ ಬಗ್ಗೆ ನಿಂದನೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.