BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

, ,

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Author Picture
Published On: November 15, 2025

—Advertisement—

Updated By: Priyalachhi

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಪಕ್ಷದ ಸೋಲಿನ ಕುರಿತಂತೆ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದರು. ಆದರೆ ನವೆಂಬರ್ ಕ್ರಾಂತಿ ನಡೆಯುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಬದಲಿಗೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸೂಚನೆ ನೀಡಿದೆ.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ರಾಜ್ಯದಲ್ಲಿ 8ರಿಂದ 12 ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಯಾರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಬೇಳೂರು ಗೋಪಾಲಕೃಷ್ಣ, ಬಿಕೆ ಹರಿಪ್ರಸಾದ್, ಎನ್ಎ ಹ್ಯಾರಿಸ್, ಸಲೀಂ ಅಹಮದ್, ಆರ್ ವಿ ದೇಶಪಾಂಡೆ, ನಾಗೇಂದ್ರ, ಬಿಕೆ ಸಂಗಮೇಶ್, ನರೇಂದ್ರ ಸ್ವಾಮಿ, ಶರತ್ ಬಚ್ಚೆಗೌಡ, ಎಂ. ಕೃಷ್ಣಪ್ಪ, ಮಾಗಡಿ ಬಾಲಕೃಷ್ಣ, ಲಕ್ಷ್ಮಣ್ ಸವದಿ, ಎಸ್ ಪೊನ್ನಣ್ಣ, ರಿಜ್ವಾನ್ ಅರ್ಷದ್, ಶಿವಲಿಂಗೇಗೌಡ, ರೂಪಕಲಾ ಶಶಿಧರ್, ಮಾಲೂರು ನಂಜೇಗೌಡ ಸೇರಿ ಹಲವು ನಾಯಕರು ಸಚಿವ ಸಂಪುಟದ ಮೇಲೆ ಕಣ್ಣಿಟ್ಟಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp