• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಎದ್ದು ಬಿದ್ದು ಕೊನೆಗೂ ಗೆದ್ದ ಪಾಕಿಸ್ತಾನ್

Sambrama Prabha News by Sambrama Prabha News
November 5, 2025
in Home, Latest News, Special News, Sports News
0
ಎದ್ದು ಬಿದ್ದು ಕೊನೆಗೂ ಗೆದ್ದ ಪಾಕಿಸ್ತಾನ್

Updated By: Priyalachhi

ಫೈಸಲಾಬಾದ್​ನ ಇಕ್ಬಾಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಶಾಹೀನ್ ಅಫ್ರಿದಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ 63 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 49.1 ಓವರ್​ಗಳಲ್ಲಿ 263 ರನ್​ಗಳಿಸಿ ಆಲೌಟ್ ಆಯಿತು.

264 ರನ್​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಸೈಮ್ ಅಯ್ಯೂಬ್ (39) ಹಾಗೂ ಫಖರ್ ಝಮಾನ್ (45) ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 55 ರನ್​ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ಸಲ್ಮಾನ್ ಅಲಿ ಅಘಾ 62 ರನ್ ಬಾರಿಸಿದರು.

ಇದಾಗ್ಯೂ ಪಾಕಿಸ್ತಾನ್ ತಂಡ 257 ರನ್​ಗಳಿಗೆ 7 ವಿಕೆಟ್​ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತು. ಈ ಹಂತದಲ್ಲಿ ಮೊಹಮ್ಮದ್ ನವಾಝ್ 9 ರನ್​ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಈ ಮೂಲಕ ಹಾಗೂ ಹೀಗೂ ಮಾಡಿ 49.4 ಓವರ್​ಗಳಲ್ಲಿ 264 ರನ್​ಗಳಿಸಿ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

Tags: Pakistanಗೆದ್ದ ಪಾಕಿಸ್ತಾನ್
Previous Post

ಬುಧವಾರದ ಪಂಚಾಂಗ, ಭವಿಷ್ಯ

Next Post

ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

Next Post
ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.