Updated By: Priyalachhi

ಬಳ್ಳಾರಿ: ಪೋಕ್ಸೊ ಸಂತ್ರಸ್ತೆ ಹೆಸರು ಮತ್ತು ವಿಳಾಸ ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಳ್ಳಾರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾಷಣದ ವೇಳೆ ಸಂವೇದನಾ ಶೀಲ ವಿವರ ಉಲ್ಲೇಖಿಸಿ, ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನನ್ವಯ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲಾಗಿದೆ.

ಜ.17ರಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುವಾಗ ಶ್ರೀರಾಮುಲು ಅವರು ಸಂತ್ರಸ್ತೆಯ ಹೆಸರು ಹಾಗೂ ವಿಳಾಸವನ್ನು ಬಹಿರಂಗಪಡಿಸಿದ್ದರು.

ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಡ್ರಗ್ ಸೇವಿಸಿಯೇ ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳುತ್ತಾ, ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ, ತರಗತಿ ಹಾಗೂ ಓದುವ ಶಾಲೆಯ ಹೆಸರನ್ನೂ ಬಗಿರಂಗಪಡಿಸಿದ್ದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version