Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಜ್ಯ ಕಾಂಗ್ರೆಸ್​​ನಲ್ಲಿ ಪವರ್ ಫೈಟ್
Politics

ರಾಜ್ಯ ಕಾಂಗ್ರೆಸ್​​ನಲ್ಲಿ ಪವರ್ ಫೈಟ್

Sambrama Prabha NewsBy Sambrama Prabha NewsNovember 23, 2025No Comments3 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ, ಅಧಿಕಾರ ಹಂಚಿಕೆಯ ಒತ್ತಾಯ, ಬಣ ರಾಜಕೀಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸುವ ಅನಿವಾರ್ಯತೆ ಹೈಕಮಾಂಡ್​​ಗೆ ಎದುರಾಗಿದೆ. ಆದಷ್ಟು ಬೇಗ ಹೈಕಮಾಂಡ್​ ರಾಜ್ಯದ ಬಣ ರಾಜಕೀಯ ಕ್ಷಿಪ್ರ ಬೆಳವಣಿಗೆಯನ್ನು ತಣಿಸುವ ಸಂದಿಗ್ಧತೆ, ಅನಿವಾರ್ಯತೆಯಲ್ಲಿ ಸಿಲುಕಿದೆ. ಇಲ್ಲವಾದರೆ ಪಕ್ಷಕ್ಕೆ ಹಾನಿಯಾಗುವ ಸಾಧ್ಯತೆಯೂ ಗೋಚರಿಸಿದೆ.‌

ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಇದೀಗ ಇನ್ನಷ್ಟು ಹೆಚ್ಚಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2.5 ವರ್ಷ ಪೂರ್ಣಗೊಳಿಸುತ್ತಿದ್ದ ಹಾಗೆಯೇ ಅಧಿಕಾರ ಹಂಚಿಕೆಯ ಒಳಸುಳಿ ಹೊರಚಿಮ್ಮುವ ಲಕ್ಷಣ ಕಾಣುತ್ತಿದೆ. ಡಿ.ಕೆ.ಶಿವಕುಮಾರ್ ಬಣದ ಕೆಲವರು ದೆಹಲಿ ಯಾತ್ರೆ ನಡೆಸಿದ್ದರೆ, ಇತ್ತ ಸಿಎಂ ಆಪ್ತ ಬಣದ ಸಚಿವರು ಡಿನ್ನರ್ ಮೀಟಿಂಗ್ ಆರಂಭಿಸಿದ್ದಾರೆ.

ಅಧಿಕಾರ ಹಂಚಿಕೆ ಚರ್ಚೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಸಿದ್ದರಾಮಯ್ಯ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಮುಂದಿನ ಬಜೆಟ್ ಮಂಡಿಸುತ್ತೇನೆ ಎನ್ನುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಇತ್ತ ಡಿ.ಕೆ.ಬ್ರದರ್ಸ್ ಮನೆಯಲ್ಲೇ ಕೂತು ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದು, ಕೆಲ ಶಾಸಕರ ಜೊತೆಗೂ ಚರ್ಚಿಸಿದ್ದಾರೆ.

ಸಂದಿಗ್ಧ, ಅನಿವಾರ್ಯ ಸ್ಥಿತಿಯಲ್ಲಿ ‘ಕೈ’ ಹೈಕಮಾಂಡ್: ಇತ್ತ ರಾಜ್ಯದಲ್ಲಿ ಬಣ ರಾಜಕೀಯ, ಅಧಿಕಾರ ಹಂಚಿಕೆಯ ಮೇಲಾಟ ತೀವ್ರ ಸ್ವರೂಪ ಪಡೆದಿದ್ದು, ಚೆಂಡು ಇದೀಗ ಹೈಕಮಾಂಡ್ ಅಂಗಳದಲ್ಲಿದೆ. ಕೈ ಪಾಳಯದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆ ಹೈಕಮಾಂಡನ್ನೂ ಸಂದಿಗ್ದತೆಗೆ ಸಿಲುಕಿಸಿದೆ. ಅಧಿಕಾರ ಹಂಚಿಕೆಯ ಚರ್ಚೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಣಗಳ ಮಧ್ಯೆ ರಾಜಕೀಯ ಮುನ್ನಲೆಗೆ ಬರುತ್ತಿದೆ. ಡಿ.ಕೆ.ಶಿವಕುಮಾರ್​ ಆಪ್ತರ ಬಣ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಗೆ ಹೋಗುವ ಮೂಲಕ ಬಣ ರಾಜಕೀಯದ ಒಳಸುಳಿಯನ್ನು ಹೊರ ಬರುವಂತೆ ಮಾಡಿದೆ.

ಸಿದ್ದರಾಮಯ್ಯ ಆಪ್ತ ಬಣವೂ ಡಿನ್ನರ್ ಮೀಟಿಂಗ್ ಮಾಡಿ ತಮ್ಮದೇ ಕಾರ್ಯತಂತ್ರ ರೂಪಿಸಲು ಮುಂದಾಗಿದೆ. ಅಧಿಕಾರ ಹಸ್ತಾಂತರವಾದರೆ ಏನು, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆನೂ ಈ ಬಣದಿಂದ ಚರ್ಚೆ ನಡೆಯುತ್ತಿದೆ. ಹೀಗಾಗಿ ಹೈಕಮಾಂಡ್ ಬಾಗಿಲಿಗೆ ಕಾಂಗ್ರೆಸ್ ಪಾಳಯದ ಕ್ಷಿಪ್ರ ರಾಜಕೀಯ ಬೆಳವಣಿಗೆ ತಲುಪಿದೆ. ಸಿಎಂ ಬಣ ಹಾಗೂ ಡಿಸಿಎಂ ಬಣವನ್ನು ಮನವೊಲಿಸುವ ಸಂದಿಗ್ದತೆಯಲ್ಲಿ ಹೈಕಮಾಂಡ್ ಇದೆ.

ಹೈಕಮಾಂಡ್ ಮೌನವಾಗಿದ್ದರೆ ದೊಡ್ಡ ಕ್ರಾಂತಿ ಭೀತಿ: ಕಾಂಗ್ರೆಸ್ ಪಾಳಯದಲ್ಲಿ ಕಂಡು ಬಂದಿರುವ ಕ್ಷಿಪ್ರ ರಾಜಕೀಯ ವಿಪ್ಲವದ ಬಗ್ಗೆ ಹೈಕಮಾಂಡ್ ಮೌನವಾಗಿದ್ದರೆ ಅದು ದೊಡ್ಡ ಕ್ರಾಂತಿಯಾಗಿ ಪರಿವರ್ತನೆಯಾಗುವುದರಲ್ಲಿ ಅನುಮಾನ ಇಲ್ಲ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ಪಾಳಯದಲ್ಲಿ ವ್ಯಕ್ತವಾಗುತ್ತಿರುವ ಭೀತಿ. ಉಭಯ ನಾಯಕರನ್ನು ಕೂರಿಸಿ ಚರ್ಚೆ ನಡೆಸಿ, ಉದ್ಭವಿಸಿರುವ ಗೊಂದಲ ನಿವಾರಿಸುವುದು ಅನಿವಾರ್ಯ ಎಂಬುದು ಕಾಂಗ್ರೆಸ್ ಪಾಳಯದಲ್ಲಿನ ಹಲವರ ಒತ್ತಾಸೆ. ಇಲ್ಲವಾದರೆ ಬಣ ರಾಜಕೀಯ ಸ್ಫೋಟಗೊಂಡು ಅದು ಕ್ರಾಂತಿ ಸ್ವರೂಪ ಪಡೆದು ರಾಜ್ಯ ಕಾಂಗ್ರೆಸ್​ಗೆ ದೊಡ್ಡ ಆಘಾತ ನೀಡಲಿದೆ ಎಂಬುದು ಕಾಂಗ್ರೆಸ್ ಹಿರಿಯ ಮುಖಂಡರ ಆತಂಕ.

ಬೇರೆ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಾಯಕತ್ವ ಬಂಡಾಯ ಏಳುವ ಭೀತಿ ಹೊಂದಿದೆ. ಹೈಕಮಾಂಡ್ ಎಚ್ಚರಿಕೆಯ ಮಾತುಗಳು ಕಾಂಗ್ರೆಸ್ ಬಣ ರಾಜಕೀಯವನ್ನು ಮುಂಬರುವ ದಿನಗಳಲ್ಲಿ ತಣ್ಣಗಾಗಿಸುವ ಸಾಧ್ಯತೆ ಕ್ಷೀಣವಾಗಿದೆ‌‌. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್​ಗೆ ಒಂದು ನಿರ್ಣಾಯಕ ತೀರ್ಮಾನ ಕೈಗೊಳ್ಳುವ ಅನಿವಾರ್ಯತೆ ಎದುರಾಗಿದೆ. ಹೈಕಮಾಂಡ್ ಮಧ್ಯ ಪ್ರವೇಶಿಸದೇ ಇದ್ದರೆ ಬಣ ರಾಜಕೀಯ ತೀವ್ರ ಸ್ವರೂಪಕ್ಕೆ ತಿರುಗುವ ಸಾಧ್ಯತೆ ಹೆಚ್ಚಿದೆ‌. ಈಗಾಗಲೇ ಶಾಸಕರ ಬಣಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ತೆರಳುತ್ತಿದ್ದು, ಗುಂಪುಗಾರಿಕೆ ಹೆಚ್ಚಾಗಿ ಪವರ್ ಫೈಟ್ ತೀವ್ರವಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಪವರ್ ಫೈಟನ್ನು ಸೂಕ್ಷ್ಮವಾಗಿ ನಿಭಾಯಿಸುವ ಕಠಿಣ ಸವಾಲು ಹೈಕಮಾಂಡ್​​ನದ್ದಾಗಿದೆ.‌ ಎರಡು ಬಣಗಳಿಗೂ ಸಮಾಧಾನಕರ ಪರಿಹಾರ ಹುಡುಕುವ ಸಂದಿಗ್ದತೆ, ಅನಿವಾರ್ಯತೆ ಹೈಕಮಾಂಡ್​​ನದ್ದಾಗಿದೆ.

ಅಧಿಕಾರ ಹಸ್ತಾಂತರದ ಗೊಂದಲದ ಮಧ್ಯೆ ಹೈಕಮಾಂಡ್ ಮಧ್ಯ ಪ್ರವೇಶಿಸುವಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಹಿರಿಯ ಸಚಿವ ಕೆ.ಹೆಚ್.ಮುನಿಯಪ್ಪ ಹೈಕಮಾಂಡ್ ಮಧ್ಯಪ್ರವೇಶಕ್ಕೆ ಬಲವಾಗಿ ಒತ್ತಾಯಿಸುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಪದೇ ಪದೆ ಮಾತನಾಡುವುದು, ಗುಂಪುಗಾರಿಕೆ ಮಾಡುವುದರಿಂದ ಪಕ್ಷಕ್ಕೂ ಹಾನಿ, ಸರ್ಕಾರಕ್ಕೂ ಹಾನಿಯಾಗಲಿದೆ. ಹೀಗೆ ಆಗಬಾರದು ಎಂದು ನಾವು ಹಿರಿಯ ನಾಯಕರು ಹೈಕಮಾಂಡನ್ನು ಒತ್ತಾಯಿಸುತ್ತೇವೆ. ಹೈಕಮಾಂಡ್ ಒಂದು ತೀರ್ಮಾನ ಮಾಡಬೇಕು ಅಥವಾ ಎಐಸಿಸಿ ಪ್ರಧಾನ‌ ಕಾರ್ಯದರ್ಶಿ ಬೆಂಗಳೂರಿಗೆ ಬಂದು ಎಲ್ಲರನ್ನೂ ಕೂರಿಸಿ ಹೈಕಮಾಂಡ್ ನಿರ್ಣಯ ಹೀಗಿದೆ ಎಂದು ಹೇಳಬೇಕು. ಆ ಮೂಲಕ ಗೊಂದಲ ನಿವಾರಿಸಿ, ಸರ್ಕಾರ ಸುಲಲಿತವಾಗಿ ನಡೆಯಲು ದಾರಿ ಮಾಡಿಕೊಡಬೇಕು ಎಂದು ಖಡಕ್ ಆಗಿ ಆಗ್ರಹಿಸಿದ್ದಾರೆ.

ಹಿರಿಯ ಶಾಸಕ ಬಾಲಕೃಷ್ಣ ಕೂಡ ಇದೇ ಒತ್ತಾಯ ಮಾಡಿದ್ದಾರೆ. ಡಿಕೆಶಿ ಅವರಿಗೆ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದರ ಬಗ್ಗೆ ಹೈಕಮಾಂಡ್ ಒಂದು ಇತ್ಯರ್ಥ ಮಾಡಬೇಕು. ಹೈಕಮಾಂಡ್ ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ಇಲ್ಲದಿದ್ದರೆ ಪಕ್ಷದಲ್ಲಿ, ಕಾರ್ಯಕರ್ತರಲ್ಲಿ ಗೊಂದಲ ಆಗುತ್ತದೆ. ಗೊಂದಲ ಈಗಾಗಲೇ ಆಗಿರುವ ಹಿನ್ನೆಲೆಯಲ್ಲಿ ಇದಕ್ಕೆ ಹೈಕಮಾಂಡ್ ಒಂದು ಅಂತಿಮ ರೂಪ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Congres
Add as Preferred on Google Follow on Google News
Share. WhatsApp Facebook Twitter Telegram
Previous Article‘ಡೆವಿಲ್’ ಗೆಲ್ಲಿಸಲು ದರ್ಶನ್ ಪತ್ನಿ ಸರ್ಕಸ್: ಸಿನಿಮಾ ಪ್ರಮೋಶನ್ ಆರಂಭಿಸಿದ ವಿಜಯಲಕ್ಷ್ಮಿ
Next Article ಏಕದಿನ ಸರಣಿಗೆ ತಂಡ ಪ್ರಕಟಿಸಿದ BCCI, ಕನ್ನಡಿಗನಿಗೆ ನಾಯಕನ ಜವಾಬ್ದಾರಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.