Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
Politics

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Sambrama Prabha NewsBy Sambrama Prabha NewsSeptember 23, 2026No Comments1 Min Read
Share WhatsApp Facebook Twitter Telegram
r-ashoka-congress-govt-criminal-cases
Share
WhatsApp Facebook Twitter Telegram

ಬೆಂಗಳೂರು: “ರಾಜ್ಯದ ಹಣಕಾಸು ಇಲಾಖೆಯ ಆಂತರಿಕ ಪತ್ರಗಳು ಬೀದಿಯಲ್ಲಿ ಹರಿದಾಡುತ್ತಿವೆ. ನಿಮ್ಮದೇ ಇಲಾಖೆಯನ್ನು ನಿಯಂತ್ರಿಸಲು ನಿಮ್ಮಿಂದ ಆಗುತ್ತಿಲ್ಲ ಎಂದ ಮೇಲೆ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯಲು ನಾಲಾಯಕ್. ಕೂಡಲೇ ರಾಜೀನಾಮೆ ಕೊಟ್ಟು ತೊಲಗಿ,” ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇದು ಯಾರ ಷಡ್ಯಂತ್ರ?

ಹಣಕಾಸು ಇಲಾಖೆಯ ಪತ್ರ ಲೀಕ್ ಆಗಿರುವ ಹಿಂದೆ ಯಾರ ಷಡ್ಯಂತ್ರ ಅಡಗಿದೆ? ಇದು ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯನವರ ಷಡ್ಯಂತ್ರವೋ ಅಥವಾ ಜಾರಕಿಹೊಳಿ ಅವರ ಷಡ್ಯಂತ್ರವೋ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಹಣಕಾಸು ಇಲಾಖೆಯ ದಾಖಲೆಗಳು ಲೀಕ್ ಆಗಬೇಕಾದರೆ ಅದರ ಹಿಂದೆ ಖಂಡಿತಾ ಷಡ್ಯಂತ್ರವಿದ್ದೇ ಇರುತ್ತದೆ. ಇದು ಆಡಳಿತರೂಢ ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳವನ್ನು ಸ್ಪಷ್ಟವಾಗಿ ಎತ್ತಿತೋರಿಸುತ್ತಿದೆ ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳುಗಳಲ್ಲಿ ಇಂತಹ ಆಂತರಿಕ ಭಿನ್ನಮತ ಸ್ಫೋಟಗೊಂಡಿರುವುದು ಸರ್ಕಾರದ ಸ್ಥಿರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.

ಬರಗಾಲ ನಿರ್ವಹಣೆಗೆ ಹಣವಿಲ್ಲ!

“ಒಂದೆಡೆ ಅಧಿವೇಶನದಲ್ಲಿ ಶಾಸಕರು ರೈತರ ಬರಗಾಲದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ರೈತರು ಪರಿಹಾರದ ಹಣ ಬರುತ್ತದೆ ಎಂದು ಕಾಯುತ್ತಿದ್ದಾರೆ. ಆದರೆ, ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರದಲ್ಲಿ ‘ನಮಗೆ ಬರದ ಸಮಸ್ಯೆ ಇದೆ, ಆದರೆ ಪರಿಹಾರ ನೀಡಲು ನಮ್ಮ ಬಳಿ ಹಣವಿಲ್ಲ, ಯೋಚನೆ ಮಾಡಿ’ ಎಂದು ಮುಖ್ಯಮಂತ್ರಿಗಳಿಗೆ ಬರೆಯಲಾಗಿದೆ. ಪರಿಹಾರ ನೀಡುವ ಮುಂಚೆಯೇ ದುಡ್ಡಿಲ್ಲ ಎಂದು ಸರ್ಕಾರ ಕೈಚೆಲ್ಲಿದೆ. ಇದು ರಾಜ್ಯ ಸರ್ಕಾರಕ್ಕೆ ಬಿದ್ದ ಕಪಾಳಮೋಕ್ಷ” ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಸಂಪೂರ್ಣ ಪಾಪರ್ ಆಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಆಗುತ್ತಿಲ್ಲ ಎಂದ ಮೇಲೆ ಡಿ.ಕೆ. ಶಿವಕುಮಾರ್ ಅಧಿಕಾರ ಬಿಟ್ಟು ತೊಲಗಬೇಕು. ಇಲ್ಲವಾದರೆ ರಾಜ್ಯದ ಜನರೇ ನಿಮ್ಮನ್ನು ಓಡಿಸುವ ಪರಿಸ್ಥಿತಿ ಬರುತ್ತದೆ. ರಾಜ್ಯವನ್ನು ದಿವಾಳಿ ಮಾಡಿ ಕೇರಳ ಮತ್ತು ಹಿಮಾಚಲ ಪ್ರದೇಶದ ರೀತಿಯಲ್ಲಿ ಭಿಕ್ಷೆ ಬೇಡುವ ಸ್ಥಿತಿಗೆ ತಂದಿರುವ ಈ ಸರ್ಕಾರ ನಾಚಿಕೆಗೇಡು ಎಂದು ಅವರು ಕಿಡಿಕಾರಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
BJP vs Congress CM DK Shivakumar Drought Relief Karnataka Finance Department Leak Jarkiholi Kannada News Karnataka News Karnataka Politics R Ashoka Siddaramaiah ಆರ್ ಅಶೋಕ್ ಕರ್ನಾಟಕ ರಾಜಕೀಯ. ಕಾಂಗ್ರೆಸ್ ಒಳಜಗಳ ಫೈನಾನ್ಸ್ ಡಿಪಾರ್ಟ್ಮೆಂಟ್ ಬರಗಾಲ ಪರಿಹಾರ ಸಿಎಂ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.