Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು
Latest News Nation News

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

Sub EditorBy Sub EditorOctober 8, 2026No Comments2 Mins Read
Share WhatsApp Facebook Twitter Telegram
rahul-priyanka-fir-cec-protest
Share
WhatsApp Facebook Twitter Telegram

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಇಂಡಿಯಾ’ (INDIA) ಒಕ್ಕೂಟದ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಿರುದ್ಧ ಕನಿಷ್ಠ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಸಾರ್ವಜನಿಕ ಸೇವಕರು ಕರ್ತವ್ಯ ನಿರ್ವಹಿಸುವಾಗ ಅವರ ಮೇಲೆ ಹಲ್ಲೆ ನಡೆಸಿರುವುದು ಮತ್ತು ಅಡ್ಡಿಪಡಿಸಿರುವುದಕ್ಕೆ ಸಂಬಂಧಿಸಿದಂತೆ ಹೊಸ ಕ್ರಿಮಿನಲ್ ಕಾನೂನು ‘ಭಾರತೀಯ ನ್ಯಾಯ ಸಂಹಿತೆ’ (BNS) ಅಡಿಯಲ್ಲಿ ಈ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘಟನೆಯ ಹಿನ್ನೆಲೆ: ಚುನಾವಣಾ ಆಯೋಗದ ಕಚೇರಿ ಕಡೆಗೆ ಮೆರವಣಿಗೆ ಹೊರಟಿದ್ದ ವಿಪಕ್ಷ ನಾಯಕರನ್ನು ವಿಂಡ್ಸರ್ ಪ್ಲೇಸ್ ಬಳಿ ಪೊಲೀಸರು ತಡೆದಿದ್ದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರೀ ವಾಗ್ವಾದ ಹಾಗೂ ತಳ್ಳಾಟ-ನುಕಾಟ ನಡೆದಿದೆ. ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ರಸ್ತೆಯ ಮೇಲೆಯೇ ಕುಳಿತಾಗ, ಮಹಿಳಾ ಪೊಲೀಸರು ಅವರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಲು ಯತ್ನಿಸಿದರು.

ಈ ಸಂದರ್ಭದಲ್ಲಿ ಸಹೋದರಿಗೆ ರಕ್ಷಣೆಯಾಗಿ ನಿಂತ ರಾಹುಲ್ ಗಾಂಧಿ, “ಇದು ನನ್ನ ಸಹೋದರಿ” ಎಂದು ಕೂಗುತ್ತಾ ಪೊಲೀಸರನ್ನು ತಡೆಯಲು ಯತ್ನಿಸಿದರು. ಈ ಹೈಡ್ರಾಮಾದ ನಡುವೆ ರಾಹುಲ್ ಭದ್ರತೆಯಲ್ಲಿದ್ದ ಸಿಆರ್‌ಪಿಎಫ್ (CRPF) ಸಿಬ್ಬಂದಿ ಹಾಗೂ ದೆಹಲಿ ಪೊಲೀಸರ ನಡುವೆಯೂ ಮಾತಿನ ಚಕಮಕಿ ನಡೆದಿದೆ.

ವೈರಲ್ ಆದ ವಿಡಿಯೋ ದೃಶ್ಯಗಳು

 ಪೊಲೀಸರು ಸಂಸದರನ್ನು ವಶಕ್ಕೆ ಪಡೆದು ಬಸ್‌ಗೆ ಹತ್ತಿಸಲು ಮುಂದಾದಾಗ ನಡೆದ ನೂಕಾಟದಲ್ಲಿ, ಪ್ರಿಯಾಂಕಾ ಗಾಂಧಿ ಅವರು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ಮೊಣಕೈಯಿಂದ ಗುದ್ದಿದ್ದಾರೆ ಎನ್ನಲಾದ ವಿಡಿಯೋ ತುಣುಕೊಂದು ಹೊರಬಿದ್ದಿದೆ. ಮತ್ತೊಂದು ದೃಶ್ಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಪೊಲೀಸ್ ಅಧಿಕಾರಿಗೆ ಒದ್ದಿರುವುದು ಸೆರೆಯಾಗಿದೆ. ಇದೇ ವೇಳೆ, ತಳ್ಳಾಟದಲ್ಲಿ ತಮಗೆ ಗಾಯವಾಗಿದ್ದು, ರಕ್ತಸ್ರಾವವಾಗಿದೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

ನನ್ನ ಮೇಲೆ 100 ಎಫ್‌ಐಆರ್ ಆದರೂ ಹೋರಾಟ ನಿಲ್ಲಲ್ಲ

ತಮ್ಮ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆಯ ಬಗ್ಗೆ ಮಂಗಳವಾರವಷ್ಟೇ ಪ್ರತಿಕ್ರಿಯಿಸಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, “ನನ್ನ ಮೇಲೆ ಈಗಾಗಲೇ 45 ಎಫ್‌ಐಆರ್‌ಗಳಿವೆ. ಈ ಸಂಖ್ಯೆ 100 ತಲುಪಲಿ ಎಂದು ನಾನು ಬಯಸುತ್ತೇನೆ. ಆದರೆ ನಮ್ಮ ಈ ಹೋರಾಟ ಮಾತ್ರ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ,” ಎಂದು ಗುಡುಗಿದ್ದರು.

ಕಳೆದ ಎರಡು ದಿನಗಳಿಂದ ಸಿಇಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಹುವಾ ಮೊಯಿತ್ರಾ ಸೇರಿದಂತೆ ಹಲವು ವಿಪಕ್ಷ ಸಂಸದರನ್ನು ದೆಹಲಿ ಪೊಲೀಸರು ಬುಧವಾರ ಎರಡನೇ ಬಾರಿಗೆ ವಶಕ್ಕೆ ಪಡೆದುಕೊಂಡಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
CEC Gyanesh Kumar Congress Delhi Police Election Commission FIR INDIA bloc Priyanka Gandhi Rahul Gandhi ಇಂಡಿಯಾ ಒಕ್ಕೂಟ ಎಫ್‌ಐಆರ್ ಕಾಂಗ್ರೆಸ್ ಚುನಾವಣಾ ಆಯೋಗ ಜ್ಞಾನೇಶ್ ಕುಮಾರ್ ದೆಹಲಿ ಪೊಲೀಸ್ ಪ್ರಿಯಾಂಕಾ ಗಾಂಧಿ ರಾಹುಲ್ ಗಾಂಧಿ
Add as Preferred on Google Follow on Google News
Share. WhatsApp Facebook Twitter Telegram
Previous Articleತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!
Sub Editor
  • Website

Related Posts

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.