Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಜ್ಯದ ಹಲವೆಡೆ ಮತ್ತೆ ಮಳೆ
Nation News Latest News

ರಾಜ್ಯದ ಹಲವೆಡೆ ಮತ್ತೆ ಮಳೆ

Sambrama Prabha NewsBy Sambrama Prabha NewsNovember 3, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಇಂದು ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೆ, ರಾಜ್ಯದ ಇನ್ನೂ ಕೆಲವೆಡೆ ಒಣ ಹವೆಯಿರಲಿದೆ. ಮತ್ತು ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಮಳೆ : ಕರಾವಳಿ ಜಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಕೆಲವೆಡೆ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

ಇಲ್ಲೆಲ್ಲ ಒಣ ಹವೆ : ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದ ಭಾಗದಲ್ಲಿ ಒಣ ಹವೆ ಕಂಡು ಬರುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗವು ಗಂಟೆಗೆ 10 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದೇಶದ ವಿವಿಧೆಡೆ ಮಳೆ ಮುನ್ಸೂಚನೆ : ದೇಶದ ಪೂರ್ವ ಮತ್ತು ದಕ್ಷಿಣ ಭಾಗದ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಶನಿವಾರ ಮುನ್ಸೂಚನೆ ನೀಡಿತ್ತು. ಉತ್ತರ ಭಾರತದಾದ್ಯಂತ ಚಳಿಗಾಲ ಆರಂಭವಾಗುತ್ತಿದ್ದಂತೆ ತಾಪಮಾನ ಕಡಿಮೆಯಾಗಲಿದ್ದು, ದೆಹಲಿಯಲ್ಲಿ ಸ್ಪಷ್ಟ ಆಕಾಶ ಇರಲಿದೆ. ಪೂರ್ವ ಮತ್ತು ದಕ್ಷಿಣ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಬಿಹಾರ, ಸಿಕ್ಕೀಂ ಮತ್ತು ಪಶ್ಚಿಮ ಬಂಗಾಳಕ್ಕೆ ಐಎಂಡಿ ಭಾರಿ ಮಳೆ ಬೀಳುವ ಎಚ್ಚರಿಕೆ ಕೊಟ್ಟಿತ್ತು. ಗುಡುಗು ಸಹಿತ ಮತ್ತು ಬಿರುಗಾಳಿಯ ಗಾಳಿ ಬೀಸುವ ನಿರೀಕ್ಷೆಯಿದೆ. ಜಾರ್ಖಂಡ್ ಮತ್ತು ಒಡಿಶಾ ಕೂಡ ಹಗುರದಿಂದ ಮಧ್ಯಮ ಮಳೆಯಾಗುವ ಸಂಭವವಿದೆ ಎಂದು ತಿಳಿಸಿತ್ತು.

ಪಶ್ಚಿಮದಲ್ಲಿ, ಗುಜರಾತ್, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸಬಹುದು. ಮಹಾರಾಷ್ಟ್ರ ಮತ್ತು ಗೋವಾದಲ್ಲಿಯೂ ಅಲ್ಪ ಪ್ರಮಾಣದ ಮಳೆಯಾಗಬಹುದು. ಕೊಂಕಣ ಭಾಗ ಮತ್ತು ಉತ್ತರ ಮಹಾರಾಷ್ಟ್ರದಾದ್ಯಂತ ಹಗಲಿನ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಆದರೆ ರಾತ್ರಿ ವೇಳೆ ಬೆಚ್ಚಗಿನ ವಾತಾವರಣ ಇರಲಿದೆ ಐಎಂಡಿ ಮುನ್ಸೂಚನೆ ನೀಡಿತ್ತು.

ಅಲ್ಲದೆ, ದಕ್ಷಿಣ ಭಾರತದಲ್ಲಿ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪುದುಚೇರಿಯಲ್ಲಿ ಅರೇಬಿಯನ್ ಸಮುದ್ರದಿಂದ ತೇವಾಂಶದ ಒಳಹರಿವು ಮತ್ತು ಈಗ ಗಮನಾರ್ಹವಾಗಿ ದುರ್ಬಲಗೊಂಡಿರುವ ಚಂಡಮಾರುತ ಮೊಂಥಾ ಪರಿಣಾಮ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿತ್ತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Rain ಮಳೆ ರಾಜ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleಪ್ರಯಾಣಿಕ ಬಸ್ ಗೆ ಟ್ರಕ್ ಢಿಕ್ಕಿ, 18 ಮಂದಿ ಸಾವು
Next Article ದರ್ಶನ್ ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.