• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

Sambrama Prabha News by Sambrama Prabha News
November 1, 2025
in Exclusive, Latest News, Politics, Special News
0
ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

Updated By: Priyalachhi 

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “೭೦ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ, ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ನಾಡಿನ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ  ಗೌರವಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು: ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “೭೦ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ೭೦ ಮಂದಿ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯೋತ್ಸವ ಪ್ರಶಸ್ತಿ ನೀಡಿ, ಸನ್ಮಾನಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಯಾರು ಯಾವ ಭಾಷೆಯಲ್ಲಿ ಮಾತನಾಡಿಸಿದರೂ ಕನ್ನಡದಲ್ಲೇ ಉತ್ತರ ಕೊಡುತ್ತೀವಿ ಎಂಬ ಸಂಕಲ್ಪ ಮಾಡೋಣ ಎಂದರು.

ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.

ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ, ನಿಮ್ಮ ಬದುಕು ಸಾರ್ಥಕವಾಗಲಿ ಎಂದು ಹಾರೈಸುತ್ತೇನೆ ಎಂದರು.

ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.

ಕನ್ನಡ ನಾಡು – ನುಡಿಯ ಬೆಳವಣಿಗೆಗೆ ಈ ಎಲ್ಲಾ ಸಾಧಕರ ಸೇವೆಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ. ಪ್ರಶಸ್ತಿ ಪುರಸ್ಕೃತರ ಜೀವನ ಸಾಧನೆ ಇತರರಿಗೆ ಮಾದರಿಯಾಗಲಿ. ಕನ್ನಡ ಭಾಷೆ ನಾಡಿನ ಮನೆ ಮನೆಗಳಲ್ಲಿ ನೆಲೆಸುವಂತಾಗಲಿ ಎಂದು ಹಾರೈಸಿದರು.

 

Tags: achieversRajyotsava Awardಡಿ.ಕೆ.ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯೋತ್ಸವ ಪ್ರಶಸ್ತಿ
Previous Post

ಕಂಗೊಳಿಸುತ್ತಿರುವ ವಿಧಾನ ಸೌಧ

Next Post

ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರುವುದಿಲ್ಲ; ಮಹಾಜನ ಸಮಿತಿ ವರದಿಯೇ ಅಂತಿಮ!

Next Post
ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರುವುದಿಲ್ಲ; ಮಹಾಜನ ಸಮಿತಿ ವರದಿಯೇ ಅಂತಿಮ!

ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರುವುದಿಲ್ಲ; ಮಹಾಜನ ಸಮಿತಿ ವರದಿಯೇ ಅಂತಿಮ!

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.