• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Sambrama Prabha News by Sambrama Prabha News
November 28, 2025
in Politics
0
ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Updated By: Priyalachhi

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಇಂದು ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲು ಆಗುವುದಿಲ್ಲ. ಒಟ್ಟಾರೆ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಈ ಹಿಂದೆ ನಾನೇ ಹೇಳಿದ್ದೇನೆ. ಅದರಲ್ಲಿ ದೈಹಿಕ ಶಿಕ್ಷಕರೂ ಸೇರಿದ್ದಾರೆ. ಆದಷ್ಟು ಬೇಗ ಶಿಕ್ಷಕರನ್ನು ನೇಮಕಾತಿ‌ ಮಾಡಿಕೊಳ್ಳಲಾಗುವುದು. ಶಿವಮೊಗ್ಗದ ದುರ್ಗಿಗುಡಿಯಲ್ಲಿ ಶಿಕ್ಷಕರ ಕೊರತೆ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ನೂರಾರು ವರ್ಷದ ಶಾಲೆ ಇದು. ಶೀಘ್ರವಾಗಿ ಶಿಕ್ಷಕರ ಕೊರತೆ ಪರಿಹರಿಸುವ ಕಾರ್ಯ ಮಾಡುತ್ತೇನೆ ಎಂದರು.

ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ: ಸಿಎಂ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್​​ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮಾಧ್ಯಮಗಳಲ್ಲಿ ತೋರಿಸಿದಷ್ಟು ನಮ್ಮ ಪಕ್ಷದಲ್ಲಿ ಏನೂ ಆಗಿಲ್ಲ‌, ಏನೇ ಇದ್ದರೂ ಹೈಕಮಾಂಡ್ ನಿರ್ಧರಿಸಲಿದೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ಕುರಿತೂ ಸಹ ಹೈಕಮಾಂಡ್ ಹೇಳಲಿದೆ ಎಂದರು.

ಪ್ರತಿಪಕ್ಷದವರು ಮೊದಲು ತಮ್ಮ ಪಕ್ಷದ ಬಾಗಿಲು ನೋಡಿ‌ಕೊಳ್ಳಲಿ‌. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಬೇಡ. ನಮ್ಮ ಪಕ್ಷದ ಹೈಕಮಾಂಡ್ ನಿಮ್ಮ‌ ನಿಮ್ಮ ಕೆಲಸ ಮಾಡಿ ಎಂದು ಹೇಳಿದೆ, ನಾನು ಅದನ್ನು ನೋಡಿ‌ಕೊಂಡು ಹೋಗುತ್ತಿದ್ದೇನೆ. ನಿನ್ನೆ ಸಚಿವ ಸಂಪುಟದಲ್ಲಿ ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪಕ್ಷದ ವಿಚಾರದಲ್ಲಿ ಬಾಯಿ ಮುಚ್ಚಿಕೊಂಡು ಇರಿ ಎಂದು ಹೈಕಮಾಂಡ್ ಹೇಳಿದೆ. ನಾನು ಹಾಗೆಯೇ ಇರುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಹೈಕಮಾಂಡ್ ಆದಷ್ಟು ಬೇಗ ಗೊಂದಲ ಬಗೆಹರಿಸಲಿ: ಇದೇ ಸಂದರ್ಭದಲ್ಲಿ ಮಾತನಾಡಿದ ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ಪಕ್ಷದಲ್ಲಿ ಇರುವ ಗೊಂದಲವನ್ನು ಹೈಕಮಾಂಡ್ ಆದಷ್ಟು ಬೇಗ ಬಗೆಹರಿಸಬೇಕು ಎಂದು ವಿನಂತಿಸಿದರು. ಭಾರತಕ್ಕೆ ರಾಹುಲ್ ಗಾಂಧಿ ಮರಳಿದ್ದು, ಒಂದು ನಿರ್ಧಾರ ತೆಗೆದುಕೊಳ್ಳುತ್ತಾರೆ. ವಿಪಕ್ಷದರಿಗೆ ನಮ್ಮ ಪಕ್ಷ ಆಹಾರ ಆಗುವುದು ಬೇಡ. ಗೊಂದಲದ ಕುರಿತು ನಮ್ಮ ಪಕ್ಷದ ಕಾರ್ಯಕರ್ತರಿಗೆ ಉತ್ತರ ಕೊಡಲು ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Tags: ಮಧು ಬಂಗಾರಪ್ಪ
Previous Post

77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

Next Post

ನಾಳೆ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ

Next Post
ನಾಳೆ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ

ನಾಳೆ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.