Updated By: Priyalachhi

ಬೆಂಗಳೂರು: ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಆದೇಶ ಹೊರಡಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಪ್ರಮುಖರ ಸಮಿತಿ (ಕೋರ್ ಕಮಿಟಿ) ರಚಿಸಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಮಾಜಿ ಉಪ ಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರು ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿದ್ದಾರೆ. ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ ಮಾಜಿ ಸಚಿವ ಡಿ. ನಾಗರಾಜಯ್ಯ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರನ್ನು ನೇಮಿಸಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version