BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಸತೀಶ್ ಜಾರಕಿಹೊಳಿ ಬೆಂಬಲ ಕೋರಿದ ಡಿಕೆಶಿ?

Author Picture
Published On: November 26, 2025

—Advertisement—

Updated By: Priyalachhi

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮಂಗಳವಾರ ತಡರಾತ್ರಿಯ ಭೇಟಿ ರಾಜ್ಯ ಪವರ್ ಫೈಟ್​​ಗೆ ಮತ್ತಷ್ಟು ತಿರುವು ನೀಡಿದೆ.

ಖಾಸಗಿ ಹೊಟೇಲ್​ನಲ್ಲಿ ಸತೀಶ್ ಜಾರಕಿಹೊಳಿ, ಡಿಕೆಶಿ ನಡುವೆ ಮಾತುಕತೆ ನಡೆದಿದೆ. ಸತೀಶ್ ಜಾರಕಿಹೊಳಿ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದೀರ್ಘ ಚರ್ಚೆ ನಡೆಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಸಿಎಂ ಅವರ ಮನವೊಲಿಸುವ ಜೊತೆಗೆ ತಮ್ಮ ಸಹಕಾರ ಬೇಕೆಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಹೈಕಮಾಂಡ್ ನಿರ್ಧರಿಸಿ ಸಿಎಂ ಸ್ಥಾನ ಕೊಟ್ಟರೆ ನೀವು ಬೆಂಬಲಿಸಬೇಕು. ನಿಮ್ಮ ಜೊತೆಗಿನ ವಿಶ್ವಾಸವನ್ನು ಹೀಗೇ ಮುಂದುವರೆಸುತ್ತೇನೆ ಎಂದು ಡಿಕೆಶಿ ಭರವಸೆ ನೀಡಿದ್ದಾರೆ. ಈ ವೇಳೆ ಸತೀಶ್ ಜಾರಕಿಹೊಳಿ, ನಾವು ಸಿದ್ದರಾಮಯ್ಯನವರನ್ನು ಬಿಟ್ಟು ಬರಲು ಆಗಲ್ಲ. ಹೈಕಮಾಂಡ್ ನಿರ್ಧಾರ ಮಾಡಿದ್ರೆ ಅದಕ್ಕೆ‌ ನಾವು ಬದ್ಧರು. ಹೈಕಮಾಂಡ್ ನಿರ್ಣಯ ಮಾಡಲಿ ನೋಡೋಣ. ನಾವಾಗಿಯೇ ಇವರನ್ನು ಮಾಡಿ, ಅವರನ್ನು ‌ಮಾಡಿ ಎಂದು ಹೇಳುವುದು ಕಷ್ಟ ಎಂದು ಡಿಕೆಶಿಗೆ ಹೇಳಿರುವುದಾಗಿ ಬಲ್ಲ ಮೂಲಗಳು ತಿಳಿಸಿವೆ.

ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ”ಪಕ್ಷದ ಅಧ್ಯಕ್ಷರು ಅನೇಕರ ಬಾರಿ ಭೇಟಿಯಾಗಿದ್ದೇವೆ. ಪಕ್ಷದ ಕಚೇರಿಯಲ್ಲೂ ಭೇಟಿಯಾಗಿದ್ದೆವು. ಅವರ ಮನೆಯಲ್ಲೂ ಭೇಟಿಯಾಗಿದ್ದೇವೆ. ಎಲ್ಲರೂ ಒಗ್ಗಟ್ಟನಿಂದ ಇರಬೇಕು, ಪಕ್ಷದಿಂದ ಒಗ್ಗಟ್ಟಿನಿಂದ ಇರುವುದು ಉದ್ದೇಶ. ಸಿಎಂ ಮಾಡುವ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು. ಭೇಟಿ ವೇಳೆ ಪಕ್ಷ ಸಂಘಟನೆ, ಮುಂದಿನ ಎಲೆಕ್ಷನ್ ಬಗ್ಗೆ ಚರ್ಚೆ ಆಗಿದೆ. ಇನ್ನೂ ಸುಮಾರು ವಿಷಯಗಳು ಚರ್ಚೆ ಆಗಿವೆ. ಹೈಕಮಾಂಡ್ ಅಳೆದು ತೂಗಿ ನಿರ್ಧಾರ ಮಾಡ್ತಾರೆ. ಪಾರ್ಟಿ ಹೇಳಿದಂತೆ ನಾವು ಕೇಳ್ತೇವೆ‌. ಡಿಕೆಶಿ ಎಲ್ಲ ಸಚಿವರನ್ನು, ಶಾಸಕರನ್ನು ಭೇಟಿಯಾಗಿದ್ದಾರೆ” ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp