BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

, ,

ವಿಜಯೇಂದ್ರ ವಿರುದ್ದ ಸಿದ್ದರಾಮಯ್ಯ ಗರಂ

Author Picture
Published On: November 6, 2025

—Advertisement—

Updated By: Priyalachhi

ಬೆಂಗಳೂರು: ಕಬ್ಬಿನ ಬಾಕಿ ಪಾವತಿ (Payment of cane dues) ಮತ್ತು ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಕ್ಕೋಡಿಯ (Chikkodi) ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಪಕ್ಷಗಳು ಸಹ ಸರ್ಕಾರದ ವಿರುದ್ಧ ಕುರಿತು ಸಮರ ಸಾರಿವೆ; ಇದ್ರ ನಡುವೆ, ನಿನ್ನೆ ಸಚಿವ ಹೆಚ್​​ ಕೆ ಪಾಟಿಲ್ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದ್ದು, ಇದ್ರ ನಡುವೆ ವಿಜಯೇಂದ್ರ (Vijayendra) ಮೇಲೆ ಸಿಎಂ ಗರಂ ಆಗಿದ್ದಾರೆ ಎನ್ನಲಾಗಿದೆ.

ಸಿಎಂಗೆ ಪರಮಾಧಿಕಾರ ನೀಡಿದ ಕ್ಯಾಬಿನೆಟ್

ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡುವ ಅಥವಾ ಇನ್ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಪರಮಾಧಿಕಾರವನ್ನ ಇಂದು ನಡೆಸ ಸಚಿವ ಸಂಪುಟ ಸಭೆಯು ಸಹಕಾರಿ ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದೆ. ಹಾಗಾಗಿ, ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಗಳು ಸುದ್ದಿಗೋಷ್ಟಿ ನಡೆಸಿ, ಬೆಲೆ ನಿಗಧಿ ಬಗ್ಗೆ ಘೋಷಣೆ ಸಾಧ್ಯತೆಯಿದೆ.

ಚಿಕ್ಕೋಡಿಗೆ ಸಕ್ಕರೆ ಸಚಿವ

ಚಿಕ್ಕೋಡಿಯ ಗುರ್ಲಾಪುರ ಕ್ರಾಸ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರೊಂದಿಗಿನ ಸಚಿವ ಹೆಚ್.ಕೆ. ಪಾಟೀಲ ಅವರ ಸಭೆಯು ವಿಫಲವಾದ ಹಿನ್ನೇಲೆಯಲ್ಲಿ ಇಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್​ ಅವರೇ ರೈತರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಮೀಟಿಂಗ್

ಇಂದು ಮುಖ್ಯಮಂತ್ರಿಗಳು ಕಬ್ಬಿಗೆ ಬೆಲೆ ಘೋಷಣೆ ಮಾಡಿದ ನಂತರ, ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ತಿರ್ಮಾನ ಮಾಡಲಿದ್ದಾರೆ ಎಂದು ವರದಿಯಾಗಿದೆ.

ತೀವ್ರಗೊಂಡಿದೆ ರೈತರ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಚಿಕ್ಕೋಡಿ ಸೇರಿದಂತೆ ಹಲವು ಭಾಗಗಳಲ್ಲಿ  ಪ್ರತಿಭಟನೆ ತೀವ್ರಗೊಂಡಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್‌. ಕೆ ಪಾಟೀಲ್‌ ಅವರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿತ್ತು.

ಕಬ್ಬು ಬೆಳೆಗಾರರ ಬೇಡಿಕೆಗಳೇನು?

ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ. ಕಬ್ಬಿನ ತೆರಿಗೆ ಹಣದಲ್ಲಿ ರೈತರಿಗೆ 1 ಸಾವಿರ ರೂ. ನೀಡಬೇಕು. ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವುದು ನಿಲ್ಲಬೇಕು. ಸರ್ಕಾರವೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಮೆಷಿನ್ ಇಡಬೇಕು. ತೂಕ ಸೇರಿ ಪ್ರತಿಯೊಂದು ಮಾಹಿತಿ ಡಿಜಿಟಲೀಕರಣ ಮಾಡಬೇಕು. ಸಕ್ಕರೆ ಆಯುಕ್ತರ ಕಚೇರಿಗೆ 100 ಸಿಬ್ಬಂದಿ ನೇಮಕ‌ ಮಾಡಬೇಕು ಎಂಬ ಬೇಡಿಕೆಗಳನ್ನು ರೈತರು ಮುಂದಿಟ್ಟಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp