Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!
Latest News Exclusive

ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!

Sub EditorBy Sub EditorJune 4, 2026No Comments1 Min Read
Share WhatsApp Facebook Twitter Telegram
siddaramaiah-no-election-2028
Share
WhatsApp Facebook Twitter Telegram

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದರೂ ಅಹಿಂದ ನಾಯಕ ಸಿದ್ದರಾಮಯ್ಯ ಅವರ ತೂಕ ಹೈಕಮಾಂಡ್ ಮಟ್ಟದಲ್ಲಿ ಕಿಂಚಿತ್ತೂ ಕಡಿಮೆಯಾಗಿಲ್ಲ. ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ಹೆಜ್ಜೆ ಇಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ಅವರ ಬೇಡಿಕೆಗಳಿಗೆ ಸಂಪೂರ್ಣ ಮಣೆ ಹಾಕಿದೆ. ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ ಹಾಗೂ ಸಚಿವ ಸಂಪುಟದಲ್ಲಿ ಸಿದ್ದು ಆಪ್ತರಿಗೆ ಸಿಂಹಪಾಲು ಸಿಕ್ಕಿರುವುದು ಇದಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ಬಿ.ಕೆ. ಹರಿಪ್ರಸಾದ್‌ಗೆ ಕೆಪಿಸಿಸಿ ಪಟ್ಟ ಹಾಗೂ ಎಂಎಲ್ಸಿ ಸ್ಥಾನ:

ಹೈಕಮಾಂಡ್ ಮುಂದೆ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದರು. ಸಿದ್ದರಾಮಯ್ಯ ಅವರ ಮಾತಿಗೆ ಒತ್ತು ನೀಡಿರುವ ಹೈಕಮಾಂಡ್, ನಿನ್ನೆ ಪದಗ್ರಹಣ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅಲ್ಲದೇ ಮುಂಬರುವ ಜೂನ್ 18 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿರುವ 4 ಅಭ್ಯರ್ಥಿಗಳ ಪಟ್ಟಿಯಲ್ಲಿ ಹರಿಪ್ರಸಾದ್ ಅವರಿಗೆ ಮತ್ತೆ ಎಂಎಲ್ಸಿ ಟಿಕೆಟ್ ಕೂಡ ನೀಡಲಾಗಿದೆ. ಇದೇ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ ಮಳವಳ್ಳಿ ಶಿವಣ್ಣ ಕೂಡ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪರಮೇಶ್ವರ್‌ಗೆ ಡಿಸಿಎಂ, ಆಪ್ತರಿಗೆ ಮಂತ್ರಿಗಿರಿ:

ಡಿ.ಕೆ. ಶಿವಕುಮಾರ್ ಅವರ ನೂತನ ಸಂಪುಟದಲ್ಲಿ ತಮ್ಮ ಆಪ್ತರಿಗೆ ಸ್ಥಾನ ಕೊಡಿಸುವಲ್ಲಿ ಸಿದ್ದರಾಮಯ್ಯ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಪಟ್ಟು ಹಿಡಿದು ಡಾ. ಜಿ. ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ಒದಗಿಸಿದ್ದಾರೆ.

ನಿನ್ನೆ ನಡೆದ ಕ್ಯಾಬಿನೆಟ್ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಬಳಗದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಶಾಸಕರಿಗೆ ಮನೆ ಹಾಕಲಾಗಿದೆ. ಪ್ರಮುಖವಾಗಿ ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕ್ಯಾಬಿನೆಟ್‌ಗೆ ಸೇರ್ಪಡೆಯಾಗಿದ್ದು, ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಒಟ್ಟಾರೆಯಾಗಿ, ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರೂ ಪಕ್ಷದ ಸಂಘಟನೆ ಹಾಗೂ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಹಿಡಿತ ಮತ್ತು ಪ್ರಭಾವ ಮುಂದುವರಿದಿರುವುದು ಈ ನೇಮಕಗಳ ಮೂಲಕ ಸಾಬೀತಾಗಿದೆ.

 

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
BK Hariprasad Congress Karnataka News Karnataka Politics KPCC President Siddaramaiah ಕರ್ನಾಟಕ ರಾಜಕೀಯ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಡಿಕೆ.ಶಿವಕುಮಾರ್ ಬಿ.ಕೆ.ಹರಿಪ್ರಸಾದ್ ಸಚಿವ ಸಂಪುಟ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
Next Article ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!
Sub Editor
  • Website

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

September 13, 2026

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

September 12, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.