Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?
Latest News Politics

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Sambrama Prabha NewsBy Sambrama Prabha NewsSeptember 19, 2026No Comments2 Mins Read
Share WhatsApp Facebook Twitter Telegram
ಸಿದ್ದರಾಮಯ್ಯ ತುಮಕೂರು ಭೇಟಿ ಕೆ ಎನ್ ರಾಜಣ್ಣ Sambrama Prabha
Share
WhatsApp Facebook Twitter Telegram

ತುಮಕೂರು (ಸಂಭ್ರಮ ಪ್ರಭ ನ್ಯೂಸ್ ಡೆಸ್ಕ್): ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರ ನಡೆಗಳು ತೀವ್ರ ಕುತೂಹಲ ಕೆರಳಿಸುತ್ತಿವೆ. ಒಂದು ಕಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಚಿವರ ಪಡೆಯೊಂದಿಗೆ ಮಂಗಳೂರಿನಲ್ಲಿ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಬ್ಯುಸಿಯಾಗಿದ್ದರೆ, ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರಿನಲ್ಲಿ ತಮ್ಮ ಆಪ್ತ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

ಕಾಂಗ್ರೆಸ್ ನಾಯಕತ್ವ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಿಎಂ ಸ್ಥಾನದ ಕುರಿತು ನಡೆಯುತ್ತಿರುವ ವಾಕ್ಸಮರದ ನಡುವೆಯೇ ಸಿದ್ದರಾಮಯ್ಯ ಮತ್ತು ರಾಜಣ್ಣ ಅವರ ಈ ಭೇಟಿ ತೀವ್ರ ಮಹತ್ವ ಪಡೆದುಕೊಂಡಿದೆ.

Read this: ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ತುಮಕೂರಿನಲ್ಲಿ ಸಿದ್ದರಾಮಯ್ಯ: ಕುರುಬ ಸಮುದಾಯದ ಕಾರ್ಯಕ್ರಮಗಳಲ್ಲಿ ಭಾಗಿ

ಸಿದ್ದರಾಮಯ್ಯ ಅವರು ಖ್ಯಾತ ಕಲಾವಿದ ದಿವಂಗತ ಪಿ.ಆರ್. ತಿಪ್ಪೇಸ್ವಾಮಿ ಅವರ ಸಾಹಿತ್ಯ ಕೃತಿಗಳ ಕುರಿತ ಪುಸ್ತಕ ಬಿಡುಗಡೆ ಹಾಗೂ ಖಾಸಗಿ ಆಸ್ಪತ್ರೆಯೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತುಮಕೂರಿಗೆ ಆಗಮಿಸಿದ್ದರು. ವಿಶೇಷವೆಂದರೆ, ಈ ಎರಡೂ ಕಾರ್ಯಕ್ರಮಗಳು ಕುರುಬ ಸಮುದಾಯಕ್ಕೆ ಸಂಬಂಧಿಸಿದ್ದಾಗಿದ್ದು, ಸಮುದಾಯದ ಮೇಲೆ ಸಿದ್ದರಾಮಯ್ಯ ಅವರಿಗಿರುವ ಹಿಡಿತ ಮತ್ತು ಪ್ರಭಾವವನ್ನು ಮತ್ತೊಮ್ಮೆ ಸಾಬೀತುಪಡಿಸಿವೆ.

ಸಿದ್ದರಾಮಯ್ಯ ಪ್ರಶ್ನಾತೀತ ನಾಯಕ: ರಾಜಣ್ಣ ಬ್ಯಾಟಿಂಗ್

ಸಿದ್ದರಾಮಯ್ಯ ಭೇಟಿಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕೆ.ಎನ್. ರಾಜಣ್ಣ, “ಸಿದ್ದರಾಮಯ್ಯ ಅವರು ರಾಜ್ಯದ ಪ್ರಶ್ನಾತೀತ ನಾಯಕರು. ಅವರು ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಏಳು-ಬೀಳುಗಳು ಸಹಜ, ಆದರೆ ಅವರು ಸದಾ ಸಕ್ರಿಯವಾಗಿಯೇ ಇರುತ್ತಾರೆ” ಎಂದು ಹೇಳುವ ಮೂಲಕ ತಮ್ಮ ನಾಯಕನಿಗೆ ಬಲವಾದ ಬೆಂಬಲ ಸೂಚಿಸಿದರು.

ರಾಜಣ್ಣ ಹೇಳಿಕೆ ಮತ್ತು ಅಶೋಕ್ ತಿರುಗೇಟು: ಇತ್ತೀಚೆಗಷ್ಟೇ ಒಕ್ಕಲಿಗ ಮತಗಳ ಬಗ್ಗೆ ರಾಜಣ್ಣ ನೀಡಿದ್ದ ಹೇಳಿಕೆ ಭಾರೀ ಸದ್ದು ಮಾಡಿತ್ತು. “ಒಕ್ಕಲಿಗರು ಡಿ.ಕೆ. ಶಿವಕುಮಾರ್ ಅವರಿಗೆ ಮತ ಹಾಕುತ್ತಾರೆ, ಅದಕ್ಕಾಗಿಯೇ ಕಾಂಗ್ರೆಸ್ ಅವರನ್ನು ಮುಖ್ಯಮಂತ್ರಿ ಮಾಡಿದೆ” ಎಂದು ರಾಜಣ್ಣ ಹೇಳಿದ್ದರು.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಆರ್. ಅಶೋಕ್, “ಒಕ್ಕಲಿಗರು ಡಿ.ಕೆ. ಶಿವಕುಮಾರ್ ಮುಖ ನೋಡಿ ವೋಟ್ ಹಾಕಲ್ಲ, ಹಾಕಿದರೂ ಅದು ಶೇ. 5ರಷ್ಟು ಮಾತ್ರ ಎಂದು ಸ್ವತಃ ರಾಜಣ್ಣ ಅವರೇ ಹೇಳಿದ್ದಾರೆ. ಡಿಕೆಶಿ ಅವರು ‘ನಾನು 2028ರಲ್ಲಿ ಬರುತ್ತೇನೆ’ ಎನ್ನುತ್ತಾರೆ. ಎಲ್ಲಿಂದ ಬರುತ್ತೀರಿ? ನಿಮ್ಮ ಪಕ್ಷದವರೇ ನಿಮಗೆ ವೋಟ್ ಬೀಳಲ್ಲ ಎನ್ನುತ್ತಿದ್ದಾರೆ” ಎಂದು ಕಾಲೆಳೆದಿದ್ದರು.

ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ರಾಜಣ್ಣ ಅವರ ನಿವಾಸದಲ್ಲಿ ಭೋಜನಕೂಟ ಮುಗಿಸಿ ಹೊರಬಂದ ಸಿದ್ದರಾಮಯ್ಯ ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸುವುದನ್ನು ಅವರು ನಿರಾಕರಿಸಿದರು.

“ನಾನು ಮಾಧ್ಯಮಗಳ ಮುಂದೆ ರಾಜಕೀಯ ಮಾತನಾಡುವುದಿಲ್ಲ. ರಾಜಣ್ಣ ಅವರು ಅತ್ಯುತ್ತಮ ಊಟದ ವ್ಯವಸ್ಥೆ ಮಾಡಿದ್ದರು. ಮಾಂಸಾಹಾರ ಮತ್ತು ಸಸ್ಯಾಹಾರ ಎರಡೂ ಇತ್ತು, ನಾನು ಸಸ್ಯಾಹಾರವನ್ನು ಸ್ವಲ್ಪ ಹೆಚ್ಚೇ ತಿಂದೆ. ನಮ್ಮ ನಡುವೆ ಯಾವುದೇ ರಾಜಕೀಯ ವಿಚಾರಗಳ ಚರ್ಚೆಯಾಗಿಲ್ಲ” ಎಂದು ನಗುಮುಖದಿಂದಲೇ ಸ್ಪಷ್ಟಪಡಿಸಿದರು.

ಅಹಿಂದ ನಾಯಕರ ಒಗ್ಗಟ್ಟು?

ಕಾಂಗ್ರೆಸ್ ಪಕ್ಷದೊಳಗೆ ಸಿದ್ದರಾಮಯ್ಯ ಅವರ ರಾಜಕೀಯ ಸಮೀಕರಣಗಳು ಬದಲಾಗುತ್ತಿರುವ ಈ ಸಂದರ್ಭದಲ್ಲಿ, ಕೆ.ಎನ್. ರಾಜಣ್ಣ ಅವರೊಂದಿಗಿನ ನಿಕಟ ಒಡನಾಟ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರ ಕಟ್ಟಾ ‘ಅಹಿಂದ’ ಬೆಂಬಲಿಗರ ಪೈಕಿ ರಾಜಣ್ಣ ಮುಂಚೂಣಿಯಲ್ಲಿದ್ದು, ಬಹಿರಂಗವಾಗಿಯೇ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿರುವುದು ಡಿಕೆಶಿ ಬಣಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕರ್ನಾಟಕ ಕಾಂಗ್ರೆಸ್ ರಾಜಕೀಯ ತುಮಕೂರು ಸುದ್ದಿ ಸಿದ್ದರಾಮಯ್ಯ ರಾಜಣ್ಣ ಭೇಟಿ
Add as Preferred on Google Follow on Google News
Share. WhatsApp Facebook Twitter Telegram
Previous Articleಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

September 19, 2026

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

September 13, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.