Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
Latest News Exclusive Home

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Sambrama Prabha NewsBy Sambrama Prabha NewsNovember 4, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು, (ನವೆಂಬರ್ 04): ಧರ್ಮಸ್ಥಳದಲ್ಲಿ (dharmasthala mass burial Case) ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯ ಜೈಲು ಪಾಲಾಗಿದ್ದು, ಈ ಪ್ರಕರಣ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎನ್ನುವಾಗಲೇ ಮಹಿಳಾ ಆಯೋಗ ಮಧ್ಯೆ ಪ್ರವೇಶ ಮಾಡಿದೆ. ಹೌದು..ಧರ್ಮಸ್ಥಳ ಪ್ರಕರಣದ  ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿ ರಾಜ್ಯ ಮಹಿಳಾ ಆಯೋಗವು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.

ಆಯೋಗದ ಪತ್ರದಲ್ಲೇನಿದೆ?

ಧರ್ಮಸ್ಥಳದಲ್ಲಿ ಕಳೆದ 20ಕ್ಕೂ, ಹೆಚ್ಚು ವರ್ಷಗಳಿಂದ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಈ ಹಿಂದೆ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿತ್ತು. ಅದಾದ ಬಳಿಕ ಎಸ್‌ಐಟಿ ರಚನೆಯಾಗಿದೆ. ಎಸ್‌ಐಟಿ ರಚನೆಯಾಗಬೇಕೆಂಬ ಕೋರಿಕೆಯ ಆಶಯವೂ ಮತ್ತು ಸರ್ಕಾರದ ಆದೇಶವೂ ಕೇವಲ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211 (ಎ), ಬಿಎನ್‌ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ’ ತನಿಖೆಯನ್ನು ಎಸ್‌ಐಟಿ ಮಾಡಬೇಕೆಂಬುದನ್ನು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್‌ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ.

ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‌ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಪನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಪನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡಿ ಎಂದು ಮನವಿ ಮಾಡಿದ್ದಾರೆ.

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಹಿಳಾ ಸಂಘಟನೆಗಳು, ಹೋರಾಟಗಾರರು ಒಟ್ಟುಗೂಡಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
dharmasthala mass burial Case
Add as Preferred on Google Follow on Google News
Share. WhatsApp Facebook Twitter Telegram
Previous Articleಕೋಟ್ಯಂತರ ರೂ ವೆಚ್ಚದಲ್ಲಿ ‘ಹಿಂದೂ ದೇವಾಲಯ’ ಕಟ್ಟಿಸಿಕೊಟ್ಟ ಮುಸ್ಲಿಂ ಉದ್ಯಮಿ!
Next Article ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.