Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ
Sports News Latest News Nation News

ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ

Sambrama Prabha NewsBy Sambrama Prabha NewsNovember 4, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್​ನಿಂದ ಹೆಸರುವಾಸಿಯಾಗಿದ್ದಾರೆ. ಯುವ ಆಟಗಾರರ ಪ್ರತಿಭೆಗೆ ವೇದಿಕೆಯಾಗಿರುವ ಈ ಟೂರ್ನಿಯಲ್ಲಿ ಅನ್ವಯ್ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಕಿರಿಯ ಮಗ ಅನ್ವಯ್ ದ್ರಾವಿಡ್​ಗೆ (Anvay Dravid) ಭಾರತ ಅಂಡರ್ 19 ತಂಡದಲ್ಲಿ ಸ್ಥಾನ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಅನ್ವಯ್ ಅವರನ್ನು ಇತ್ತೀಚೆಗಷ್ಟೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನಿಸಿತ್ತು. ಹಾಗೆಯೇ ಕಳೆದ ತಿಂಗಳು ನಡೆದಿದ್ದ ವಿನೂ ಮಂಕಡ್ ಟ್ರೋಫಿಯಲ್ಲಿ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್ ಅವರನ್ನು ಇದೀಗ ಪ್ರಮುಖ ಟೂರ್ನಮೆಂಟ್‌ಗಾಗಿ ಭಾರತದ ತಂಡದಲ್ಲಿ ಆಯ್ಕೆ ಮಾಡಲಾಗಿದೆ.

ಭಾರತ ತಂಡಕ್ಕೆ ದ್ರಾವಿಡ್ ಪುತ್ರ ಆಯ್ಕೆ

ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಅವರನ್ನು ಬುಧವಾರ ಹೈದರಾಬಾದ್‌ನಲ್ಲಿ ಪ್ರಾರಂಭವಾಗುವ ಪುರುಷರ ಅಂಡರ್-19 ಏಕದಿನ ಚಾಲೆಂಜರ್ ಟ್ರೋಫಿಗೆ ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಈ ಪಂದ್ಯಾವಳಿಯನ್ನು ವಾರ್ಷಿಕವಾಗಿ ನಡೆಸಲಾಗುತ್ತಿದ್ದು, ಯುವ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸುತ್ತದೆ. ನಾಲ್ಕು ತಂಡಗಳ ನಡುವೆ ನಡೆಯಲಿರುವ ಈ ಟೂರ್ನಿಯಲ್ಲಿ ಅನ್ವಯ್ ಅವರನ್ನು ಸಿ ತಂಡದಲ್ಲಿ ಸೇರಿಸಲಾಗಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪರ್ ಪಾತ್ರಗಳನ್ನು ನಿರ್ವಹಿಸುವ ಅನ್ವಯ್, ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಈ ಪಂದ್ಯಾವಳಿಯು ನವೆಂಬರ್ 5 ರಿಂದ 11, 2025 ರವರೆಗೆ ಹೈದರಾಬಾದ್‌ನಲ್ಲಿ ನಡೆಯಲಿದೆ.

ಸಿ ತಂಡವನ್ನು ಆರನ್ ಜಾರ್ಜ್ ಮುನ್ನಡೆಸಲಿದ್ದು, ಆರ್ಯನ್ ಯಾದವ್ ಉಪನಾಯಕನಾಗಿದ್ದಾರೆ. ತಂಡದ ಮೊದಲ ಪಂದ್ಯ ಶುಕ್ರವಾರ ವೇದಾಂತ್ ತ್ರಿವೇದಿ ನೇತೃತ್ವದ ಬಿ ತಂಡದ ವಿರುದ್ಧ ನಡೆಯಲಿದೆ. ಈ ಪಂದ್ಯದಲ್ಲಿ ಅನ್ವಯ್ ದ್ರಾವಿಡ್ ಆಡುವುದನ್ನು ಕಾಣಬಹುದು. ರಾಹುಲ್ ದ್ರಾವಿಡ್ ಅವರ ಹಿರಿಯ ಮಗ ಸಮಿತ್ ದ್ರಾವಿಡ್ ಕೂಡ ಬ್ಯಾಟ್ಸ್‌ಮನ್ ಎಂಬುದು ಗಮನಿಸಬೇಕಾದ ಸಂಗತಿ.

ಅಂಡರ್-19 ಏಕದಿನ ಚಾಲೆಂಜರ್ ಟ್ರೋಫಿಗಾಗಿ ಎಲ್ಲಾ ತಂಡಗಳು

ಎ ತಂಡ: ವಿಹಾನ್ ಮಲ್ಹೋತ್ರಾ (ನಾಯಕ), ಅಭಿಜ್ಞಾನ್ ಕುಂದು (ಉಪನಾಯಕ ಮತ್ತು ವಿಕೆಟ್‌ಕೀಪರ್), ವಂಶ್ ಆಚಾರ್ಯ, ಬಾಲಾಜಿ ರಾವ್ (ವಿಕೆಟ್‌ಕೀಪರ್), ಲಕ್ಷ ರಾಯಚಂದನಿ, ವಿನೀತ್ ವಿಕೆ, ಮಾರ್ಕಂಡೇಯ ಪಾಂಚಾಲ್, ಸಾತ್ವಿಕ್ ದೇಸ್ವಾಲ್, ವಿ ಯಶವೀರ್, ಹೇಮಚೂಡೇಶನ್ ಜೆ, ಆರ್.ಎಸ್. ಅಂಬ್ರಿಶ್, ಹನಿ ಪ್ರತಾಪ್ ಸಿಂಗ್, ವಾಸು ದೇವಾನಿ, ಯುಧಾಜಿತ್ ಗುಹಾ, ಇಶಾನ್ ಸೂದ್.

ಬಿ ತಂಡ: ವೇದಾಂತ್ ತ್ರಿವೇದಿ (ನಾಯಕ), ಹರ್ವಂಶ್ ಸಿಂಗ್ (ಉಪನಾಯಕ ಮತ್ತು ವಿಕೆಟ್ ಕೀಪರ್), ವಾಫಿ ಕಚಿ, ಸಾಗರ್ ವಿರ್ಕ್, ಸಯಾನ್ ಪಾಲ್, ವೇದಾಂತ್ ಸಿಂಗ್ ಚೌಹಾಣ್, ಪ್ರಣವ್ ಪಂತ್, ಎಹಿತ್ ಸಲಾರಿಯಾ (ವಿಕೆಟ್ ಕೀಪರ್), ಬಿಕೆ ಕಿಶೋರ್, ಅನ್ಮೋಲ್ಜಿತ್ ಸಿಂಗ್, ನಮನ್ ಪುಷ್ಪಕ್, ಡಿ ದೀಪೇಶ್, ಮೊಹಮ್ಮದ್ ಮಲಿಕ್, ಮಹಮದ್ ಯಾಸೀನ್ ಸೌದಾಗರ್, ವೈಭವ್ ಶರ್ಮಾ.

ಸಿ ತಂಡ: ಆರನ್ ಜಾರ್ಜ್ (ನಾಯಕ), ಆರ್ಯನ್ ಯಾದವ್ (ಉಪನಾಯಕ), ಅನಿಕೇತ್ ಚಟರ್ಜಿ, ಮಣಿಕಾಂತ್ ಶಿವಾನಂದ್, ರಾಹುಲ್ ಕುಮಾರ್, ಯಶ್ ಕಸ್ವಾಂಕರ್, ಅನ್ವಯ್ ದ್ರಾವಿಡ್ (ವಿಕೆಟ್ ಕೀಪರ್), ಯುವರಾಜ್ ಗೋಹಿಲ್ (ವಿಕೆಟ್ ಕೀಪರ್), ಹೆನಿಲ್ ಪಟೇಲ್, ಲಕ್ಷ್ಮಣ್ ಪ್ರುತಿ, ರೋಹಿತ್ ಕುಮಾರ್ ದಾಸ್, ಮೋಹಿತ್ ಉಲ್ವಾ

ಡಿ ತಂಡ: ಚಂದ್ರಹಾಸ್ ದಾಶ್ (ನಾಯಕ), ಮೌಲ್ಯರಾಜ್‌ಸಿಂಗ್ ಚಾವ್ಡಾ (ಉಪನಾಯಕ), ಶಂತನು ಸಿಂಗ್, ಅರ್ನವ್ ಬುಗ್ಗಾ, ಅಭಿನವ್ ಕಣ್ಣನ್, ಕುಶಾಗ್ರ ಓಜಾ, ಆರ್ಯನ್ ಸಕ್ಪಾಲ್, ಎ. ರಾಪೋಲ್, ಇಸಿಎಸ್‌ನಹಮ್, ಅಯಾನ್ ಅಕ್ರಮ್, ಉಧವ್ ಮೋಹನ್, ಅಶುತೋಷ್ ಮಹಿದಾ, ಎಂ ತೋಶಿತ್ ಯಾದವ್, ಸೊಲಿಬ್ ತಾರಿಕ್.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Anvay Dravid ಟೀಂ ಇಂಡಿಯಾ ರಾಹುಲ್ ದ್ರಾವಿಡ್
Add as Preferred on Google Follow on Google News
Share. WhatsApp Facebook Twitter Telegram
Previous Articleರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಲ್ಲಿ EV 40 ಚಾರ್ಜಿಂಗ್ ಸ್ಟೇಷನ್‌: ಬೆಸ್ಕಾಂ ಸ್ಥಾಪನೆ
Next Article ಕರ್ನಾಟಕದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ರಜೆ ನೀಡುವಂತೆ ಡಿಕೆಶಿ ಮನವಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.