ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಇಂದು ಗುರುವಾರ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ರಾಜ್ಯದಲ್ಲಿ 7 ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಪಾಸಾಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆಯಾಗಿದ್ದಾರೆ. 3,77,287 ಬಾಲಕರ ಪೈಕಿ 3,46,872 ಬಾಲಕರು ತೇರ್ಗಡೆ ಹೊಂದಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version