• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ

Sambrama Prabha News by Sambrama Prabha News
November 7, 2025
in Latest News, Politics
0
ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ

Updated By: Priyalachhi

ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ.

ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಗೆ ಆಗ್ರಹಿಸಿ ರೈತರು ರಾಷ್ಟ್ರೀಯ‌ ಹೆದ್ದಾರಿ ತಡೆದು ಪ್ರತಿಭಟಿಸುವಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಈ ವೇಳೆ ರೈತರನ್ನು ಹೊರತು ಪಡಿಸಿ ಕೆಲ ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ವಾಗ್ವಾದ, ನೂಕಾಟ, ತಳ್ಳಾಟ ಶುರುವಾಗಿದ್ದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ, ಹಲವು ಪೊಲೀಸರಿಗೆ ಕಲ್ಲು ತಾಗಿ ಗಾಯವಾಗಿದೆ. ಸಾರಿಗೆ ಬಸ್, ಲಾರಿ ಸೇರಿ ಐದಕ್ಕೂ ಅಧಿಕ ವಾಹನಗಳಿಗೆ ಕಲ್ಲು ತೂರಿದ ಪರಿಣಾಮ ಆ ವಾಹನಗಳ ಗಾಜು ಪುಡಿ ಪುಡಿ ಆಗಿವೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಭೇಟಿ ನೀಡಿದ್ದು, ರೈತ ಮುಖಂಡರೊಂದಿಗೆ ಮಾತನಾಡಿ ಅವರನ್ನು ಮನವಲಿಸಲು ಪ್ರಯತ್ನಿಸುತ್ತಿದ್ದಾರೆ. ಈ ವೇಳೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಚೂನಪ್ಪ ಪೂಜಾರಿ ಸೇರಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದು ಕಿಡಿಗೇಡಿಗಳ ಕೆಲಸ ಎಂದ ಶಶಿಕಾಂತ ಗುರೂಜಿ: ಕಲ್ಲು ತೂರಾಟ ನಮ್ಮ ರೈತರು ಮಾಡಿಲ್ಲ, ಯಾರೋ ಕಿಡಿಗೇಡಿಗಳು ಮಾಡಿರಬಹುದು. ಕಲ್ಲು ತೂರಾಟ ಮಾಡಿದವರನ್ನು ಬಂಧನ ಮಾಡುವಂತೆ ರೈತ ಮುಖಂಡ ಶಶಿಕಾಂತ ಗುರೂಜಿ ಬೆಳಗಾವಿ ಪೊಲೀಸರಿಗೆ ಮನವಿ ಮಾಡಿಕೊಂಡರು.

ಗುರ್ಲಾಪುರ ಗ್ರಾಮದ ಕಬ್ಬು ಬೆಳೆಗಾರರ ಹೋರಾಟ ವೇದಿಕೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹುಕ್ಕೇರಿ ತಾಲೂಕಿನ ಹತ್ತರಕಿ ಟೋಲ್ ಗೇಟ್ ಬಳಿ ನಮ್ಮ ರೈತರು ಶಾಂತ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದರೆ, ಯಾರೋ ಕಿಡಿಗೇಡಿಗಳು ಪೊಲೀಸರ​ ವಾಹನಕ್ಕೆ ಕಲ್ಲು ತೂರಿದ್ದಾರೆಂದು ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ನಮ್ಮ ರೈತರು ಅಲ್ಲಿಯೇ ಇದ್ದು, ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದ್ದೇನೆ. ನಾವು ಕಳೆದ ಒಂಬತ್ತು ದಿನಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಲಕ್ಷಾಂತರ ಜನ ರೈತರು ಸೇರಿದ್ದಾರೆ. ಇದುವರೆಗೂ ಯಾವುದೇ ಅಹಿತಕರ ಘಟನೆ ಆಗಿಲ್ಲ. ಹಾಗೂ ಸರ್ಕಾರದ ಆಸ್ತಿ ಪಾಸ್ತಿಗೆ ನಾವು ಹಾನಿ ಮಾಡಿಲ್ಲ. ಇದು ಕಿಡಿಗೇಡಿಗಳ ಕೆಲಸ. ಹಾಗಾಗಿ ಪೊಲೀಸರು ಅಂತವರನ್ನು ತಕ್ಷಣವೇ ಬಂಧನ ಮಾಡಬೇಕೆಂದು ಶಶಿಕಾಂತ ಗುರೂಜಿ ಆಗ್ರಹಿಸಿದರು.

Tags: ಕಲ್ಲು ತೂರಾಟಟೋಲ್ ಗೇಟ್
Previous Post

ಏರದ ದರ, ನಿಲ್ಲದ ಕಬ್ಬು ಸಮರ

Next Post

ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು

Next Post
ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು

ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.