Updated By: Priyalachhi

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ಐಸಿಸಿ ಟಿ20 ವಿಶ್ವಕಪ್ ಟೂರ್ನಿ 2026ರಲ್ಲಿ ಭಾಗವಹಿಸುವಿಕೆ ಕುರಿತ ಗೊಂದಲ ಮುಂದುವರೆದಿದ್ದು, ಇದೀಗ ಪಿಸಿಬಿ ICC ಈವೆಂಟ್ ಅನ್ನೇ ಮುಂದೂಡಿದೆ.

ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ರೊಂದಿಗಿನ ಪಾಕಿಸ್ತಾನದ ಅಹಿತಕರ ಸಂಬಂಧವು ಶನಿವಾರ ಮತ್ತೊಂದು ಹಂತ ಪ್ರವೇಶಿಸಿದ್ದು, ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾಗವಹಿಸುವಿಕೆಯ ಸಸ್ಪೆನ್ಸ್ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡ ಟಿ20 ವಿಶ್ವಕಪ್ 2026 ರ ಈವೆಂಟ್ ಅನ್ನು ರದ್ದುಗೊಳಿಸಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ರಾಷ್ಟ್ರೀಯ ತಂಡದ ವಿಶ್ವಕಪ್ ಕಿಟ್‌ನ ಯೋಜಿತ ಅನಾವರಣ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. “ಅನಿವಾರ್ಯ ಸಂದರ್ಭ”ಗಳನ್ನು ಉಲ್ಲೇಖಿಸಿ ಪಿಸಿಬಿ ಕಾರ್ಯಕ್ರಮ ರದ್ದು ಮಾಡಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪಾಕಿಸ್ತಾನ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಐ ಪಂದ್ಯದ ಟಾಸ್ ನಂತರ ಪಾಕಿಸ್ತಾನ ಕ್ರಿಕೆಟ್ ತಂಡ ಕಿಟ್ ಅನಾವರಣ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅದನ್ನು ದಿಢೀರ್ ರದ್ದು ಮಾಡಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version