ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ರೈಲು ನಿಲ್ದಾಣವಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲು ನಿಲ್ದಾಣದಲ್ಲಿ ರೈಲುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಹಾಗೂ ರೈಲುಗಳು ಹೊರವಲಯದಲ್ಲಿ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಲು ನೈರುತ್ಯ ರೈಲ್ವೆ ಮಹತ್ವದ ಹೆಜ್ಜೆ ಇಟ್ಟಿದೆ. ರೈಲ್ವೆ ಯಾರ್ಡ್ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜೂನ್ 15ರಿಂದ ಕೆಎಸ್ಆರ್ ನಿಲ್ದಾಣದಲ್ಲಿ ಈ ಕಾಮಗಾರಿ ಆರಂಭವಾಗಲಿದ್ದು, ಆಗಸ್ಟ್ ಮೊದಲ ವಾರದವರೆಗೆ ನಡೆಯಲಿದೆ. ಕಾಮಗಾರಿಯ ಹಿನ್ನೆಲೆಯಲ್ಲಿ 58 ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ಹಾಗೂ 116 ರೈಲುಗಳ […]
