Updated By: Priyalachhi

ಬೆಳಗಾವಿ: ಮಾಜಿ ಸಚಿವ ದಿ.ಉಮೇಶ ಕತ್ತಿ ಬಳಿಕ ಮತ್ತೊಬ್ಬ ಬೆಳಗಾವಿ ಜಿಲ್ಲೆಯ ಶಾಸಕರಿಂದ ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ಕೇಳಿ ಬಂದಿದೆ. ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರಾದೇಶಿಕ ಅಸಮಾನತೆ ವಿರುದ್ಧ ಹಿರಿಯ ರಾಜಕಾರಣಿ, ಕಾಗವಾಡ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ದಕ್ಷಿಣ ಕರ್ನಾಟಕ ಹೋಲಿಸಿದರೆ ಉತ್ತರ ಕರ್ನಾಟಕ ಹಿಂದುಳಿದಿದೆ. ದಕ್ಷಿಣಕ್ಕೆ ತೋರಿಸುವ ವಿಶೇಷ ಕಾಳಜಿ ಉತ್ತರಕ್ಕೆ ಯಾಕಿಲ್ಲ?. ಎಲ್ಲರೂ ಕನ್ನಡನಾಡಿನ ಮಕ್ಕಳೇ, ಆದರೂ ಯಾಕೆ ಮಲತಾಯಿ ಧೋರಣೆ?. ತಾರತಮ್ಯ ಹೋಗಲಾಡಿಸಿ, ಇಲ್ಲವೇ ಪ್ರತ್ಯೇಕ ಉತ್ತರ ಕರ್ನಾಟಕ ರಚನೆ ಮಾಡುವಂತೆ ಈ ಭಾಗದ ಕೆಲ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.

ದಿ.ಉಮೇಶ ಕತ್ತಿ ಅವರು ಕೂಡ ಈ ವಿಚಾರದಲ್ಲಿ ಧ್ವನಿ ಎತ್ತಿದ್ದರು. ಅಲ್ಲದೇ ಉತ್ತರ ಕರ್ನಾಟಕ ವಿಕಾಸ ವೇದಿಕೆಯಡಿ ಈಗಲೂ ಹೋರಾಟ ಮುಂದುವರಿದಿದೆ. ಈ ನಡುವೆ ಶಾಸಕ ರಾಜು ಕಾಗೆ ಕೂಡ ಪ್ರತ್ಯೇಕ ಉತ್ತರ ಕರ್ನಾಟಕ ಆಗಲೇಬೇಕು ಅಂತಾ ಒತ್ತಾಯಿಸಿದ್ದಾರೆ. ಆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನೂ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version