Updated By: Priyalachhi

ಉಡುಪಿ: ಭಯೋತ್ಪಾದಕ ದಾಳಿಯ ನಂತರ ಹಿಂದಿನ ಸರ್ಕಾರಗಳು ತಕ್ಕ ಪ್ರತಿಕ್ರಿಯೆ ನೀಡಲು ಹಿಂಜರಿಯುತ್ತಿದ್ದವು. ಆದರೆ ನವ ಭಾರತ ತನ್ನ ಜನರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರ ಮುಂದೆಯೂ ತಲೆಬಾಗುವುದಿಲ್ಲ ಅಥವಾ ಹಿಂಜರಿಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಇಂದು ಉಡುಪಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಹಿಂದಿನ ಸರ್ಕಾರಗಳು ಭಯೋತ್ಪಾದಕ ದಾಳಿಯ ನಂತರ ಸುಮ್ಮನೆ ಕುಳಿತುಕೊಳ್ಳುತ್ತಿದ್ದವು. ಆದರೆ ನವ ಭಾರತ ತನ್ನ ಜನರನ್ನು ರಕ್ಷಿಸಲು ಬದ್ಧವಾಗಿದೆ ಮತ್ತು ಯಾರ ಮುಂದೆಯೂ ತಲೆಬಾಗುವುದಿಲ್ಲ ಅಥವಾ ಹಿಂಜರಿಯುವುದಿಲ್ಲ” ಎಂದರು.

ಒಂದು ಲಕ್ಷ ಜನ ಶ್ರೀಮದ್ ಭಗವದ್ಗೀತೆಯನ್ನು ಪಠಿಸಿದ “ಲಕ್ಷ ಕಂಠ ಗೀತಾ ಪಾರಾಯಣ”ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಉಡುಪಿಗೆ ಆಗಮಿಸಿದ್ದರು. ಉಡುಪಿಯ ಶ್ರೀ ಕೃಷ್ಣ ಮಠವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

“ನಮಗೆ ಶಾಂತಿ ಸ್ಥಾಪನೆಯೂ ಗೊತ್ತು, ರಕ್ಷಣೆಯೂ ಗೊತ್ತು. ಸತ್ಯಕ್ಕಾಗಿ ಶ್ರಮಿಸಲು ಹಾಗೂ ದೌರ್ಜನ್ಯ ಎಸಗುವವರನ್ನು ಹತ್ತಿಕ್ಕುವ ಅಗತ್ಯವನ್ನು ಗೀತೆ ನಮಗೆ ಕಲಿಸುತ್ತದೆ. ನಾವು ವಸುಧೈವ ಕುಟುಂಬಕಂನಲ್ಲಿ ನಂಬಿಕೆ ಇಟ್ಟಿದ್ದೇವೆ ಮತ್ತು ‘ಧರ್ಮೋ ರಕ್ಷತಿ ರಕ್ಷಿತಃ'(ಧರ್ಮವನ್ನು ರಕ್ಷಿಸುವವರನ್ನು ಧರ್ಮ ರಕ್ಷಿಸುತ್ತದೆ) ಎಂದು ಪಠಿಸುತ್ತೇವೆ” ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version