Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಏರದ ದರ, ನಿಲ್ಲದ ಕಬ್ಬು ಸಮರ
Latest News Home Politics

ಏರದ ದರ, ನಿಲ್ಲದ ಕಬ್ಬು ಸಮರ

Sambrama Prabha NewsBy Sambrama Prabha NewsNovember 7, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸಚಿವ ಶಿವಾನಂದ್ ಪಾಟೀಲ್ ಸ್ಥಳಕ್ಕೆ ಭೇಟಿ, ಮಾತುಕತೆ ನಡೆಸಿದರೂ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿಲ್ಲ.

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಗುರುವಾರ ತಡರಾತ್ರಿ ಗುರ್ಲಾಪುರದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಉದ್ದೇಶಿತ ರಸ್ತೆ ತಡೆಯನ್ನು (ಶುಕ್ರವಾರ) ಹಿಂತೆಗೆದುಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು.

ಶುಕ್ರವಾರ ಸಂಜೆಯೊಳಗೆ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆಯನ್ನು ಸಚಿವರು ರೈತರಿಗೆ ತಿಳಿಸಿದರು. ಆದರೂ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿಯಲು ಒಪ್ಪಿಗೆ ನೀಡಿಲ್ಲ.

ನಾಳೆ ರಸ್ತೆಗಳನ್ನು ತಡೆಯಬೇಡಿ ಎಂದು ನಾನು ನಿಮ್ಮನ್ನು ವಿನಂತಿಸುತ್ತೇನೆ. ಶಾಶ್ವತ ಪರಿಹಾರವನ್ನು ತರಲು ಸಿಎಂ ಕೇವಲ ಒಂದು ದಿನದ ಸಮಯವನ್ನು ಕೇಳಿದ್ದಾರೆ” ಎಂದು ಪಾಟೀಲ್ ಅವರು ಪ್ರತಿಭಟನಾಕಾರರನ್ನು ಒತ್ತಾಯಿಸಿದರು.

ಆದರೆ, ಸಚಿವರ ಮನವಿಗೆ ರೈತರು ಕಿವಿಗೊಡದ ರೈತರು, ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿ ಮಾಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದು ಪಟ್ಟ ಹಿಡಿದಿದ್ದಾರೆ.

ಶುಕ್ರವಾರ ಸಂಜೆಯೊಳಗೆ ಮುಖ್ಯಮಂತ್ರಿ 3,500 ರೂ. ದರವನ್ನು ಘೋಷಿಸದಿದ್ದರೆ ಪ್ರತಿಭಟನೆ ಮತ್ತಷ್ಟು ಉಲ್ಬಣಗೊಳ್ಳುತ್ತದೆ ಎಂದು ಚೋನಪ್ಪ ಪೂಜಾರಿ ನೇತೃತ್ವದ ರೈತರು ಘೋಷಿಸಿದ್ದಾರೆ. ಅಲ್ಲದೆ, ಒಂದು ದಿನದ ಮಟ್ಟಿಗೆ ರಸ್ತೆ ತಡೆ ನಿಲ್ಲಿಸಲು ಒಪ್ಪಿಗೆ ನೀಡಿದ್ದಾರೆ.

ನಮ್ಮ ಬೇಡಿಕೆಯನ್ನು ಮತ್ತೆ ನಿರ್ಲಕ್ಷಿಸಿದರೆ, ಕರ್ನಾಟಕದಾದ್ಯಂತ ಲಕ್ಷಾಂತರ ರೈತರು ಬೆಳಗಾವಿಗೆ ಮೆರವಣಿಗೆ ನಡೆಸಲಿದ್ದಾರೆ. ಸರ್ಕಾರ ಟನ್‌ಗೆ 3,500 ರೂ. ಘೋಷಿಸಿದ ಕ್ಷಣದಿಂದಲೇ ನಾವು ಪ್ರತಿಭಟನೆಯನ್ನು ಕೊನೆಗೊಳಿಸಲು ಸಿದ್ಧರಿದ್ದೇವೆ, ಆದರೆ ಅದಕ್ಕೂ ಮೊದಲು ಸಾಧ್ಯವೇ ಇಲ್ಲ ಎಂದು ಪೂಜಾರಿ ಹೇಳಿದ್ದಾರೆ.

8ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಏತನ್ಮಧ್ಯೆ ಗುರ್ಲಾಪುರದಲ್ಲಿ ನಡೆಯುತ್ತಿರು ರೈತರ ಪ್ರತಿಟನೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಮೂಡಲಗಿ ಪಟ್ಟಣ ಸಂಪೂರ್ಣ ಬಂದ್ ಆಚರಿಸಿತು.

ವ್ಯಾಪಾರಿಗಳು, ಮಾಲೀಕರು ಮತ್ತು ನಿವಾಸಿಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದು, ಮೂಡಲಗಿ, ಗುರ್ಲಾಪುರ, ಜಂಬೋಟಿ ಮತ್ತು ಗೋಕಾಕ್‌ನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಪ್ರತಿಭಟನಾಕಾರರು ಕಲ್ಮೇಶ್ವರ ವೃತ್ತದಿಂದ ಗುರ್ಲಾಪುರ ಕ್ರಾಸ್‌ಗೆ 3 ಕಿ.ಮೀ ಮೆರವಣಿಗೆ ನಡೆಸಿದರು. ಸಕ್ಕರೆ ಸಚಿವರ ಪ್ರತಿಕೃತಿಯನ್ನು ಹೊತ್ತುಕೊಂಡು, ಸರ್ಕಾರವು “ಗ್ರಾಮೀಣ ಆರ್ಥಿಕತೆಯಾಗಿರುವ ಕಬ್ಬು ಬೆಳೆಗಾರರಿಗೆ ದ್ರೋಹ ಮಾಡಿದೆ” ಎಂದು ಘೋಷಣೆಗಳನ್ನು ಕೂಗಿದರು. ರೈತರ ಪ್ರತಿಭಟನೆಗೆ ಕಾಲೇಜು ವಿದ್ಯಾರ್ಥಿಗಳು ಕೂಡ ಕೈಜೋಡಿಸಿದ್ದು ಕಂಡು ಬಂದಿತು.

ಇದಕ್ಕೂ ಮೊದಲು, ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಾಟೀಲ್ ಅವರು, ಸಿಎಂ ಶುಕ್ರವಾರ ಬೆಂಗಳೂರಿನಲ್ಲಿ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಿರ್ಣಾಯಕ ಸಭೆಯನ್ನು ಕರೆಯಲಿದ್ದಾರೆ ಎಂದು ಹೇಳಿದರು.

ರೈತರನ್ನು ಬೆಂಬಲಿಸಲು ಸರ್ಕಾರ ಬದ್ಧವಾಗಿದೆ. ಯಾವುದೇ ರಾಜಕೀಯ ಒತ್ತಡವಿಲ್ಲ; ನಮಗೆ ಶಾಂತಿಯುತ ಒಪ್ಪಂದವಾಗಬೇಕು. ಆದಾಗ್ಯೂ, ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ನಿಗದಿಪಡಿಸುವುದು ಕೇಂದ್ರದ ಮೇಲಿದೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಟೀಕಿಸಿದ ಅವರು, ಅವರು ಕೂಡ ಕರ್ನಾಟಕದವರೇ, ಆದರೆ ಈ ಜ್ವಲಂತ ವಿಷಯದ ಬಗ್ಗೆ ಯಾವುದೇ ಪ್ರಯತ್ನ ಅಥವಾ ಹೇಳಿಕೆ ನೀಡಿಲ್ಲ ಎಂದು ಕಿಡಿಕಾರಿದರು.

ಈ ನಡುವೆ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್‌ವಿ) ರಾಜ್ಯವು ಕಬ್ಬಿಗೆ ಪ್ರತಿ ಟನ್‌ಗೆ 3,500 ರೂ.ಗಳನ್ನು ಘೋಷಿಸದಿದ್ದರೆ ಗುರುವಾರ ಬೆಳಗಾವಿ ಬಂದ್‌ಗೆ ಕರೆ ನೀಡುವುದಾಗಿ ಘೋಷಿಸಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
sugarcane price war Unrelenting
Add as Preferred on Google Follow on Google News
Share. WhatsApp Facebook Twitter Telegram
Previous Articleಅನ್ನಭಾಗ್ಯದಡಿ ನೀಡುವ ಇಂದಿರಾ ಆಹಾರ ಕಿಟ್​​ನಲ್ಲಿ ಹೆಸರುಕಾಳು ಬದಲು ಹೆಚ್ಚುವರಿ ತೊಗರಿಬೇಳೆ ವಿತರಿಸಲು ತೀರ್ಮಾನ
Next Article ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.