Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನಮ್ಮಲ್ಲಿ ಭಿನ್ನಾಭಿಪ್ರಾಯ ಇಲ್ಲ, ಒಟ್ಟಿಗೆ ಹೋಗಲು ತೀರ್ಮಾನಿಸಿದ್ದೇವೆ
Politics

ನಮ್ಮಲ್ಲಿ ಭಿನ್ನಾಭಿಪ್ರಾಯ ಇಲ್ಲ, ಒಟ್ಟಿಗೆ ಹೋಗಲು ತೀರ್ಮಾನಿಸಿದ್ದೇವೆ

Sambrama Prabha NewsBy Sambrama Prabha NewsNovember 29, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ನಾನು ಮತ್ತು ಡಿಸಿಎಂ ಹಿಂದೆ ಒಟ್ಟಿಗೆ ಕೆಲಸ ಮಾಡಿದಂತೆ ಮುಂದೆಯೂ ಒಟ್ಟಿಗೆ ಹೋಗಲು ತೀರ್ಮಾನ ಮಾಡಿದ್ದೇವೆ. ನಮ್ಮಿಬ್ಬರ ಮಧ್ಯೆ ಯಾವುದೇ ಗೊಂದಲ್ಲ , ಭಿನ್ನಮತ ಇಲ್ಲ, ಮುಂದೆಯೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹೈಕಮಾಂಡ್ ಅಣತಿಯಂತೆ ಬ್ರೇಕ್ ಫಾಸ್ಟ್ ಮೀಟಿಂಗ್​ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿಎಂ ಮಾತನಾಡಿ, ನಾವಿಬ್ಬರು ಒಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಹೈ ಕಮಾಂಡ್ ಹೇಳಿರುವುದರಿಂದ ನಮ್ಮ ಮನೆಗೆ ಉಪಾಹಾರಕ್ಕೆ ಬರಲು ಡಿಕೆಶಿ ಅವರಿಗೆ ಹೇಳಿದೆ. ಬ್ರೇಕ್ ಫಾಸ್ಟ್ ಸಭೆಯಲ್ಲಿ ಉಭಯ ಕುಶಲೋಪರಿ ಚರ್ಚೆ ಆಗಿದೆ. ಅನಗತ್ಯ ಕೆಲವು ಗೊಂದಲ ನಿರ್ಮಾಣ ಆಗಿದ್ದರಿಂದ ನಾವಿಬ್ಬರೇ ಕುಳಿತು ಮಾತನಾಡಿದ್ದೇವೆ. ಡಿಕೆಶಿ ಅವರು ಕೂಡ ಅವರ ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದಾರೆ ಎಂದರು.

2028ರ ಚುನಾವಣೆ ಬಹಳ ಮುಖ್ಯ, ಸ್ಥಳೀಯ ಸಂಸ್ಥೆಗಳು, ಜಿಬಿಎ ಚುನಾವಣೆ ಮುಖ್ಯವಾಗಿದೆ. ಅದರ ಬಗ್ಗೆ ಚರ್ಚೆ ಆಗಿದೆ. 2023ರ ಚುನಾವಣೆಯಂತೆಯೇ 2028ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಚರ್ಚೆ ಮಾಡಿದ್ದೇವೆ. ಮುಂದಿನ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷವನ್ನು ಸಮರ್ಥವಾಗಿ ಎದುರಿಸುತ್ತೇವೆ. ಸುಳ್ಳು ಅಪಪ್ರಚಾರಗಳನ್ನು, ಆರೋಪಗಳನ್ನು ಮಾಡುವ ಬಿಜೆಪಿ, ಜೆಡಿಎಸ್ ಅವರನ್ನು ಸಮರ್ಥವಾಗಿ ಎದುರಿಸುತ್ತೇವೆ. ಅದಕ್ಕಾಗಿ ಕಾರ್ಯತಂತ್ರವನ್ನು ಮಾಡಿದ್ದೇವೆ ಎಂದು ಸಿಎಂ ಹೇಳಿದರು.

ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದು ವ್ಯರ್ಥ ಪ್ರಯತ್ನ- ಸಿಎಂ: ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಬಗ್ಗೆ ವರದಿಯಾಗುತ್ತಿದೆ. ಅದನ್ನು ಮಾಡಲು ಅಸಾಧ್ಯ. ಬಿಜೆಪಿ ಜೊತೆ ಇರುವುದು 60 ಜನ ಮಾತ್ರ, ಜೆಡಿಎಸ್ 18 ಶಾಸಕರು ಇದ್ದಾರೆ. ಅವರು ಇಬ್ಬರು ಸೇರಿದರೆ 82 ಆಗಬಹುದು ಅಷ್ಟೇ. ಅದಕ್ಕಿಂತ ಹೆಚ್ಚಾಗಲು ಸಾಧ್ಯವಿಲ್ಲ. ಅವಿಶ್ವಾಸ ನಿರ್ಣಯ ಮಂಡನೆ ವ್ಯರ್ಥ ಪ್ರಯತ್ನ ಆಗಲಿದೆ ಎಂದು ಸಿಎಂ ತಿಳಿಸಿದ್ದರು.

ಇಬ್ಬರೂ ಹೈ ಕಮಾಂಡ್ ಏನು ಹೇಳುತ್ತಾರೆ ಅದನ್ನು ಕೇಳಲು ತೀರ್ಮಾನಿಸಿದ್ದೇವೆ. ಹೈ ಕಮಾಂಡ್ ಅವರು ಅಧಿವೇಶನ ಇರುವುದರಿಂದ ಈ ಗೊಂದಲ ತಿಳಿಗೊಳಿಸುವ ಕೆಲಸ ಮಾಡಿ ಅಂತ ಸೂಚನೆ ನೀಡಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇಲ್ಲ. ಈಗಲೂ ಇಲ್ಲ. ಆದರೆ ಕೆಲವು ಗೊಂದಲ ಸೃಷ್ಟಿ ಮಾಡಲಾಗಿದೆ. ಕೆಲ ಮಾಧ್ಯಮ‌ ವರದಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಕೆಲ ಶಾಸಕರು ದೆಹಲಿಗೆ ಹೋಗಿದ್ದಾರೆ. ಮಂತ್ರಿ ಸ್ಥಾನಕ್ಕೆ ಲಾಭಿ ಮಾಡಲು ದೆಹಲಿಗೆ ಹೋಗಿರಬಹುದು. ಅದರ ಅರ್ಥ ಅವರು ನಾಯಕತ್ವದ ವಿರೋಧಿ ಅಂತ ಅಲ್ಲ ಎಂದು ಸಿಎಂ ಹೇಳಿದರು.

ನಾವು ಮಾತುಕೊಟ್ಟಂತೆ ನಡೆದುಕೊಂಡಿದ್ದೇವೆ: ಜನರಿಗೆ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿದ್ದೇವೆ. ಜನರ ಆಸೆ, ಆಶೋತ್ತರಗಳನ್ನು ಈಡೇರಿಸುವುದು ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಹೈಕಮಾಂಡ್ ತೀರ್ಮಾನದಂತೆ ಆಡಳಿತ ನಡೆಸುತ್ತಿದ್ದೇವೆ. ಅಧಿವೇಶನದಲ್ಲಿ ಯಾವ ರೀತಿ ಪ್ರತಿತಂತ್ರ ಮಾಡಬೇಕು ಎಂದು ಚರ್ಚಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಡಿಸಿಎಂ ಸಿಎಂ
Add as Preferred on Google Follow on Google News
Share. WhatsApp Facebook Twitter Telegram
Previous Articleಪ್ರತಿದಿನ ತಪ್ಪದೆ 2 ಎಸಳು ಹಸಿ ಬೆಳ್ಳುಳ್ಳಿ ತಿನ್ನಿ
Next Article ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಜನಿಗೆ ಗೌರವ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.