Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಆದ್ರೆ ಕಂಡೀಷನ್ ಅಪ್ಲೈ?
Latest News Home

ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಆದ್ರೆ ಕಂಡೀಷನ್ ಅಪ್ಲೈ?

Sambrama Prabha NewsBy Sambrama Prabha NewsNovember 13, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು (ನ.13): ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ನೀತಿ 2025ಕ್ಕೆ (Menstrual Leave Policy, 2025) ಅ.9ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಸಂಬಂಧ ಬುಧವಾರ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ವಾರ್ಷಿಕವಾಗಿ 12 ದಿನಗಳ ರಜೆ ನೀಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ತಿಂಗಳಿಗೆ ಒಂದು ಋತುಚಕ್ರದ ರಜೆ

ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾ‌ರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ತಿಂಗಳಿಗೆ ಒಂದು ರಜೆ ನೀಡಲಾಗ್ತಿದೆ.
ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಷರತ್ತುಗಳು ಬದ್ಧ ರಜೆ:

ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.
ಪ್ರತಿ ತಿಂಗಳು ಒಂದು ದಿನದ ʼಋತುಚಕ್ರ ರಜೆʼ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.
ಖಾಯಂ, ಗುತ್ತಿಗೆ, ಹೊರಗುತ್ತಿಗೆ ಎಲ್ಲಾ ಮಾದರಿಯ ಆಧಾರದಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗಲಿದೆ. ವೇತನ ಸಹಿತ ರಜೆ ನೀಡುವಂತೆ ಸಂಸ್ಥೆ, ಕಂಪನಿಗಳು, ಕಾರ್ಖಾನೆಗಳಿಗೆ ಸರ್ಕಾರದ ಸೂಚನೆ ನೀಡಿದೆ.
ಸಚಿವ ಸಂಪುಟದಲ್ಲಿ ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC ಗಳು, IT ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ಋತುಚಕ್ರ ರಜೆ ನೀತಿ 2025 ಅನ್ನು ಜಾರಿಗೆ ತರಲು ಸಚಿವ ಸಂಪುಟವು ಅನುಮೋದಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಋತುಚಕ್ರ ರಜೆ ಸೌಲಭ್ಯ ಜಾರಿಗೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದು, ಮಹಿಳಾ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.
ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಋತುಚಕ್ರದ ರಜೆ ಮಹಿಳಾ ನೌಕರ
Add as Preferred on Google Follow on Google News
Share. WhatsApp Facebook Twitter Telegram
Previous Articleಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮೀ ಸಂಘದ ಪ್ರಮಾಣಪತ್ರ ಹಸ್ತಾಂತರ
Next Article ಜೀವಭಯ… ಪಾಕಿಸ್ತಾನದಿಂದ ತವರಿಗೆ ಮರಳಲಿರುವ ಶ್ರೀಲಂಕಾ ಆಟಗಾರರು..!
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.