ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಬೆಂಗಳೂರು: 2 ತಿಂಗಳಿಂದ ಗೃಹಲಕ್ಷ್ಮೀ ಹಣ ಇಲ್ಲ. ಹಣಕಾಸು ಮಂತ್ರಿ, ಇಲಾಖೆಯ ಮಂತ್ರಿ ಈ ಬಗ್ಗೆ ಮಾತನಾಡಿಲ್ಲ. ಬಸ್ಸುಗಳು ತಳ್ಳೋ ಗಾಡಿಗಳಾಗಿದ್ದಾವೆ, ನಿಮ್ಮ ಆತ್ಮಸಾಕ್ಷಿಗೆ ಮಾನ ಮರ್ಯಾದೆ ಇದೆಯಾ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶುಕ್ರವಾರ ವಾಗ್ದಾಳಿ ನಡೆಸಿದೆ.
ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಈ ನಡುವಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ಬಿಡುಗಡೆ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ. ರವಿ ಅವರು, ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆ ಜನಜೀವನವನ್ನು ಕಷ್ಟಕರವಾಗಿಸಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಿದ್ದು, ಸರ್ಕಾರದ ನೌಕರರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ನಡೆದಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇದೆ. ಅತಿಥಿ ಉಪನ್ಯಾಸಕರು ಹಾಗೂ ಗುತ್ತಿಗೆ ನೌಕರರಿಗೆ ಸಂಬಳ ಸಿಗುತ್ತಿಲ್ಲ.
ಇದಲ್ಲದೆ, ರಸ್ತೆ ಸ್ಥಿತಿ ಹದಗೆಟ್ಟಿದ್ದು, ವಿಶೇಷವಾಗಿ ಬೆಂಗಳೂರು ನಲ್ಲಿ ಅಪಘಾತಗಳು ಹೆಚ್ಚಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. “ಈ ಸರ್ಕಾರ ಅಭಿವೃದ್ಧಿಯಿಂದಲ್ಲ, ತಪ್ಪು ಕಾರಣಗಳಿಂದಲೇ ಸುದ್ದಿಯಲ್ಲಿದೆ,” ಎಂದು ಕಟುವಾಗಿ ಟೀಕಿಸಿದರು.
ಈ ಬಾರಿ ಜನತೆ ಸರಕಾರಕ್ಕೆ ಬಿಸಿ ಮುಟ್ಟಿಸಲು ಮತ ಹಾಕುತ್ತಾರೆ. ನಾನು ಮಾಡಿದ್ದೇ ಸರಿ, ಹಣ ಇದ್ದರೆ ಸಾಕು, ಏನು ಮಾಡಿದರೂ ದಕ್ಕಿಸಿಕೊಳ್ಳಬಹುದು ಎಂಬ ಮನಸ್ಥಿತಿಯವರಿಗೆ ಉತ್ತಮ ಪಾಠ ಕಲಿಸುತ್ತಾರೆ. ಮಾಧ್ಯಮಗಳಲ್ಲಿ ಬಂದ ಸುದ್ದಿ ಆಧರಿಸಿ ಚಾರ್ಜಶೀಟ್ ಮಾಡಿದ್ದೇವೆ, ನಿಮ್ಮ ಆತ್ಮಸಾಕ್ಷಿಗೆ ಮಾನ ಮರ್ಯಾದೆ ಇದೆಯಾ ಅಂತಾ ಕೇಳಿಕೊಳ್ಳಿ ಎಂದು ವಾಗ್ದಾಳಿ ನಡೆಸಿದರು.
