• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ಜಾರಿ ಮಾಡಿದ ಕೋರ್ಟ್!

Sambrama Prabha News by Sambrama Prabha News
December 4, 2025
in Latest News
0
ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ಜಾರಿ ಮಾಡಿದ ಕೋರ್ಟ್!

Updated By: Priyalachhi

ಬೆಂಗಳೂರು: ನಟ ದರ್ಶನ್ ಎರಡನೇ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು, ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಆರಂಭವಾಗಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ನಂತರ ನ್ಯಾಯಾಧೀಶರು ಮೃತ ದುರ್ದೈವಿ ರೇಣುಕಾಸ್ವಾಮಿಯವರ ತಂದೆ ಹಾಗೂ ತಾಯಿಗೂ ಸಮನ್ಸ್ ಜಾರಿಗೊಳಿಸಿದ್ದಾರೆ.

ಡಿಸೆಂಬರ್ 17ರಿಂದ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭವಾಗುತ್ತಿದ್ದು, ಸಹಾಯಕ ಎಸ್​ಪಿಪಿ ಸಚಿನ್ ಅವರು ಸಾಕ್ಷಿಗಳ ಪಟ್ಟಿಯನ್ನು ಕೋರ್ಟ್​​ಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ರೇಣುಕಾಸ್ವಾಮಿಯವರ ತಂದೆ, ತಾಯಿ ಹಾಗೂ ರೇಣುಕಾಸ್ವಾಮಿಯ ಮೃತದೇಹವನ್ನು ಮೊದಲು ನೋಡಿದ್ದ ಬೆಂಗಳೂರಿನ ವಾಚ್ ಮ್ಯಾನ್ ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.ಪಟ್ಟಿಯಲ್ಲಿರುವ ಮೂವರಿಗೆ ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಇನ್ನೂ ಯಾರಿಗೆ ಸಮನ್ಸ್ ಜಾರಿಗೊಳಿಸಬೇಕು ಎಂಬುದನ್ನು ಡಿ. 4ರಂದು ತೀರ್ಮಾನಿಸಲಾಗುತ್ತದೆ ಎಂದು ಹೇಳಿದ ನ್ಯಾಯಮೂರ್ತಿಗಳು ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ. 17ಕ್ಕೆ ಮುಂದೂಡಿದರು.

Tags: ನಟ ದರ್ಶನ್ ಪ್ರಕರಣ
Previous Post

ಶಾಂತಕುಮಾರ್ ನಾಮಪತ್ರ ಅಂಗೀಕರಿಸಲು ಸೂಚಿಸಿದ್ದ ಕ್ರಮ ಎತ್ತಿಹಿಡಿದ ಹೈಕೋರ್ಟ್ ದ್ವಿಸದಸ್ಯ ಪೀಠ

Next Post

ಮಹಿಳೆಯರಿಗೆ ಮುಟ್ಟಿನ ರಜೆ ನೀಡುವುದು ಪುರುಷರನ್ನು ಕಡೆಗಣಿಸುತ್ತಿದ್ದೇವೆ ಎಂದರ್ಥವಲ್ಲ: ಡಿಕೆ ಶಿವಕುಮಾರ್

Next Post
ಮಹಿಳೆಯರಿಗೆ ಮುಟ್ಟಿನ ರಜೆ ನೀಡುವುದು ಪುರುಷರನ್ನು ಕಡೆಗಣಿಸುತ್ತಿದ್ದೇವೆ ಎಂದರ್ಥವಲ್ಲ: ಡಿಕೆ ಶಿವಕುಮಾರ್

ಮಹಿಳೆಯರಿಗೆ ಮುಟ್ಟಿನ ರಜೆ ನೀಡುವುದು ಪುರುಷರನ್ನು ಕಡೆಗಣಿಸುತ್ತಿದ್ದೇವೆ ಎಂದರ್ಥವಲ್ಲ: ಡಿಕೆ ಶಿವಕುಮಾರ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.