BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಬಾಕ್ಸಿಂಗ್​ ಡೇ ಟೆಸ್ಟ್​ಗೆ 12 ಸದಸ್ಯರ ಆಸ್ಟ್ರೇಲಿಯಾ ತಂಡ ಪ್ರಕಟ!

Author Picture
Published On: December 25, 2025

—Advertisement—

Updated By: Priyalachhi

Aus vs ENG 4th Test: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಟೆಸ್ಟ್ ಸರಣಿಯು ಭರದಿಂದ ಸಾಗುತ್ತಿದೆ. ಈ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇದುವರೆಗೆ ಮೂರು ಪಂದ್ಯಗಳು ಪೂರ್ಣಗೊಂಡಿದ್ದು, ಆಸ್ಟ್ರೇಲಿಯಾ ಮೂರನ್ನೂ ಗೆದ್ದು ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡು ಟ್ರೋಫಿಯನ್ನು ಸಹ ಉಳಿಸಿಕೊಂಡಿದೆ.

ಇದೀಗ ಉಭಯ ತಂಡಗಳ ನಡುವಿನ ನಾಲ್ಕನೇ ಬಾಕ್ಸಿಂಗ್​ ಡೇ ಟೆಸ್ಟ್ ಪಂದ್ಯ ನಾಳೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಸರಣಿಯನ್ನು ಗೆದ್ದಿರುವ ಆಸ್ಟ್ರೇಲಿಯಾ, ಉಳಿದ ಪಂದ್ಯಗಳನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ಅನ್ನು ವೈಟ್‌ವಾಶ್ ಮಾಡುವ ಗುರಿಯನ್ನು ಹೊಂದಿದೆ.

ಇಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕಾಗಿ 12 ಆಟಗಾರರ ತಂಡ ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಸರಣಿಯಿಂದ ಹೊರಗುಳಿದ ಕಾರಣ ಸ್ಟೀವ್ ಸ್ಮಿತ್ ಮತ್ತೊಮ್ಮೆ ತಂಡವನ್ನು ಮುನ್ನಡೆಸಲಿದ್ದಾರೆ. ಗುರುವಾರ ಆಸ್ಟ್ರೇಲಿಯಾದ ಅಂತಿಮ ತರಬೇತಿ ಅವಧಿಯ ನಂತರ ನಾಲ್ಕನೇ ಟೆಸ್ಟ್‌ಗೆ ತಂಡ ಪ್ರಕಟಿಸಿದೆ.

ನಾವು ನಾಳೆ ಪಿಚ್​ ಪರಿಸ್ಥಿತಿಯನ್ನು ಗಮನಿಸಿದ ಬಳಿಕವೆ ಪ್ಲೇಯಿಂಗ್​ ಇಲೆವೆನ್​ ಘೋಷಣೆ ಮಾಡಲಿದ್ದೇವೆ. ಅಲ್ಲದೆ ನಾವು ನಾಲ್ಕು ವೇಗದ ಬೌಲರ್‌ಗಳೊಂದಿಗೆ ಆಡಲಿದ್ದೇವೆ ಮತ್ತು ತಂಡದಲ್ಲಿ ಯಾವುದೇ ಸ್ಪಿನ್ನರ್‌ಗಳಿರಲ್ಲ. ಇಲ್ಲಿಯ ಪಿಚ್ ವೇಗದ ಬೌಲರ್‌ಗಳಿಗೆ ಹೆಚ್ಚಿನ ಸಹಕಾರಿ ಆಗಿರಲಿದೆ. ವಿಶೇಷವಾಗಿ ಮೊದಲ ದಿನದಂದು ಬೌಲರ್ ಪ್ರಾಬಲ್ಯ ಸಾಧಿಸಲಿದ್ದಾರೆ​” ಎಂದು ಸ್ಮಿತ್ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಿನ್ನೆ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಪ್ಲೇಯಿಂಗ್​ ಇಲೆವೆನ್​ ಪ್ರಕಟಿಸಿದೆ. ಬೆನ್ ಸ್ಟೋಕ್ಸ್ ನೇತೃತ್ವದ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ವೇಗದ ಬೌಲರ್ ಜೋಫ್ರಾ ಆರ್ಚರ್ ಗಾಯದ ಕಾರಣದಿಂದಾಗಿ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಘೋಷಿಸಲಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp